ಬಿಸಿನೀರಿನ ಪಾತ್ರೆಗೆ ಆಯಾತಪ್ಪಿ ಬಿದ್ದು ಗಾಯಗೊಂಡಿದ್ದ ಅಡುಗೆ ಸಿಬ್ಬಂದಿ; ಚಿಕಿತ್ಸೆ ಫಲಿಸದೇ ಸಾವು
ಅಡುಗೆ ಮಾಡುವಾಗ ಆಯಾತಪ್ಪಿ ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಅಡುಗೆ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಕನಕಪುರದಲ್ಲಿ ನಡೆದಿದೆ. ಗೌರಮ್ಮ (58) ವರ್ಷ ಮೃತ ಮಹಿಳೆ. ಕನಕಪುರ ತಾಲೂಕಿನ ಬಾಲಕರ ಫ್ರೌಡಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆ.
ಕನಕಪುರ (ಮಾ.18): ಅಡುಗೆ ಮಾಡುವಾಗ ಆಯಾತಪ್ಪಿ ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಅಡುಗೆ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಕನಕಪುರದಲ್ಲಿ ನಡೆದಿದೆ.
ಗೌರಮ್ಮ (58) ವರ್ಷ ಮೃತ ಮಹಿಳೆ. ಕನಕಪುರ ತಾಲೂಕಿನ ಬಾಲಕರ ಫ್ರೌಡಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆ.
ಕಳೆದ ಮಾ.15 ರಂದು ಶಾಲೆಯಲ್ಲಿ ಅಡುಗೆ ಮಾಡುವ ವೇಳೆ ಬಿಸಿ ನೀರಿನ ಪಾತ್ರೆಗೆ ಅಕ್ಕಿ ಹಾಕುವಾಗ ಆಯಾತಪ್ಪಿ ಪಾತ್ರೆಗೆ ಜಾರಿ ಬಿದ್ದಿದ್ದ ಗೌರಮ್ಮ. ಕುದಿಯುತ್ತಿದ್ದ ಬಿಸಿ ನೀರಿನ ಪಾತ್ರೆಗೆ ಬಿದ್ದ ಕಾರಣ ಮಹಿಳೆಯ ದೇಹದ ಭಾಗ ಸಂಪೂರ್ಣ ಸುಟ್ಟು ಗಾಯಗೊಂಡಿದ್ದಳು. ಚಿಕಿತ್ಸೆಗಾಗಿ ಮಹಿಳೆಯನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೇ ಮಹಿಳೆ ಇಂದು ಮೃತಪಟ್ಟಿದ್ದಾಳೆ. ಕನಕಪುರ ಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದಾವಣಗೆರೆ: ಪಾನೀಪೂರಿ ತಿಂದು 19 ಮಕ್ಕಳು ಅಸ್ವಸ್ಥಗೊಂಡ ಪ್ರಕರಣ; ಚಿಕಿತ್ಸೆ ಫಲಿಸದೇ ಇಂದು ಓರ್ವ ಬಾಲಕ ಸಾವು!
ವೈದ್ಯರ ನಿರ್ಲಕ್ಷ್ಯ ಬಾಣಂತಿ, ನವಜಾತ ಶಿಶು ಸಾವು:
ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಹಾಗೂ ನವಜಾತ ಶಿಶು ಮೃತಪಟ್ಟಿದೆ ಎಂದು ಕುಟುಂಬದವರು ಆರೋಪಿಸಿದ ಘಟನೆ ಸೋಮವಾರ ನಡೆದಿದೆ.
ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಹಳ್ಳಿ (28) ಮೃತ ಬಾಣಂತಿ. ಲಕ್ಷ್ಮೀಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಭಾನುವಾರ ತಡರಾತ್ರಿ ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಬೆಳಗ್ಗೆ ಕಿಣೆಯ ಆಸ್ಪತ್ರೆಯಲ್ಲಿಯೇ ಲಕ್ಷ್ಮೀ ಹೆಣ್ಣು ಮಗುವಿಗೆ ಜನ್ಮನೀಡಿದ್ದಾಳೆ. ಈ ವೇಳೆ ತೀವ್ರ ರಕ್ತಸ್ರಾವವಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಸಾಗಿಸಲು ವೈದ್ಯರ ಸಲಹೆ ನೀಡಿದ್ದರು.
ವಿಜಯಪುರ: ನಿರ್ಮಾಣ ಹಂತದ ಕಂಪೌಂಡ್ ಕುಸಿದು ಕಾರ್ಮಿಕ ದುರ್ಮರಣ
ವೈದ್ಯರ ಸಲಹೆ ಮೇರೆಗೆ ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲೇ ಬಾಣಂತಿ ಕೊನೆಯುಸಿರೆಳೆದಿದ್ದಾಳೆ. ಬೆಳಗಿನಜಾವ ಕಿಣೆಯೆ ಆಸ್ಪತ್ರೆಯಲ್ಲಿ ನಾರ್ಮಲ್ ಡಿಲಿವರಿ ಆದರೂ ಸೂಕ್ತ ಚಿಕಿತ್ಸೆ ನೀಡಿಲ್ಲ. ಹೆರಿಗೆ ಆದ ತಕ್ಷಣವೇ ನವಜಾತ ಶಿಶು ಸಾವನ್ನಪ್ಪಿದೆ. ವೈದ್ಯರು ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿಲ್ಲ. ರಕ್ತಸ್ರಾವ ಆದರೂ ನಮ್ಮ ಗಮನಕ್ಕೆ ತಂದಿಲ್ಲ. ಬೆಳಗಾವಿ ಆಸ್ಪತ್ರೆಗೆ ಸಾಗಿಸಲು ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ವ್ಯವಸ್ಥೆಯನ್ನೂ ಮಾಡಿಲ್ಲ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮಹಿಳೆ, ಮಗು ಸಾವಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೈಗೊಳ್ಳಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.