ಕರ್ನಾಟಕದ 3 ಜಿಲ್ಲೆಗಳಲ್ಲಿ ಭಾರೀ ಮಳೆ: ಮಹಿಳೆ ಸಾವು

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ರಾಜಾಕಾಲುವೆಗಳು, ರಸ್ತೆಗಳು, ಚರಂಡಿಗಳಲ್ಲಿ ಮಳೆ ನೀರು ಉಕ್ಕಿ ಹರಿದು ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. 

Woman Dies Due to Rain Related Tragedy in Karnataka grg

ಬೆಂಗಳೂರು(ಮೇ.19):  ಬಿಸಿಲ ಬೇಗೆಯಿಂದ ತತ್ತರಿಸಿದ್ದ ಕೊಡಗು, ಮೈಸೂರು, ರಾಮನಗರ ಜಿಲ್ಲೆಯಲ್ಲಿ ಗುರುವಾರ ಕೆಲಕಾಲ ಬಿರುಗಾಳಿ ಸಹಿತ ಉತ್ತಮ ಮಳೆಯಾಗಿದೆ. ಮೈಸೂರಲ್ಲಿ ಮಳೆ ಸಂಬಂಧಿ ಅನಾಹುತಕ್ಕೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ರಾಜಾಕಾಲುವೆಗಳು, ರಸ್ತೆಗಳು, ಚರಂಡಿಗಳಲ್ಲಿ ಮಳೆ ನೀರು ಉಕ್ಕಿ ಹರಿದು ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. 

Monsoon In India: ನಾಲ್ಕು ದಿನ ತಡವಾಗಿ ಕೇರಳಕ್ಕೆ ಮಾನ್ಸೂನ್‌ ಪ್ರವೇಶ, ಈ ವರ್ಷ ಸಾಮಾನ್ಯ ಮಳೆ!

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನಲ್ಲೂ ಬಿರುಗಾಳಿ ಸಹಿತ ಮಳೆಗೆ ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ರಸ್ತೆ ಮೇಲೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಂದೇಗಾಲ ಗ್ರಾಮದಲ್ಲಿ ಜಮೀನಿಗೆ ಕೂಲಿ ಕೆಲಸಕ್ಕೆಂದು ತೆರಳಿದ್ದ ಶೋಭಾ(42) ಎಂಬವರು ಮಳೆಯಿಂದ ರಕ್ಷಣೆ ಪಡೆಯಲು ನಿಂತಿದ್ದ ಟ್ರ್ಯಾಕ್ಟರ್‌ ಶೆಡ್‌ ಚಾವಣಿ ಶೀಟ್‌ ಗಾಳಿ ಆರ್ಭಟಕ್ಕೆ ಹಾರಿ, ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಜತೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಕೊಡಗಿನ ಶನಿವಾರ ಸಂತೆಯಲ್ಲಿ ಕೆಲಕಾಲ ಸಾಧಾರಣ ಮಳೆಯಾಗಿದ್ದು, ಬಿಸಿಲಿನಿಂದ ಹೈರಾಣಾಗಿದ್ದ ಜನರಿಗೆ ಕೊಂಚ ನೆಮ್ಮದಿ ನೀಡಿತು.
 

Latest Videos
Follow Us:
Download App:
  • android
  • ios