Asianet Suvarna News Asianet Suvarna News

ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯ: ಚಿಕಿತ್ಸೆ ಸಿಗದೆ ಬಾಣಂತಿ ಸಾವು

10 ದಿನದ ಹಿಂದೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ಮಹಿಳೆ| ಸಿಬ್ಬಂದಿ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿ ಇರುವುದಾಗಿ ತಿಳಿಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದ ಆಸ್ಪತ್ರೆಯ| ಉಸಿರಾಟದ ಸಮಸ್ಯೆ ತೀವ್ರಗೊಂಡ ನಿತ್ರಾಣಗೊಂಡಿದ್ದ ಬಾಣಂತಿ ಕೆಲವೇ ನಿಮಿಷಗಳಲ್ಲಿ ಸಾವು|

Woman dies for did not get Treatment on time in Bengaluru
Author
Bengaluru, First Published Aug 3, 2020, 7:57 AM IST

ಬೆಂಗಳೂರು(ಆ.03): ರಾಜಧಾನಿಯಲ್ಲಿ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯ ಮುಂದುವರಿದ್ದು, ಸಕಾಲಕ್ಕೆ ಚಿಕಿತ್ಸೆ ಸಿಗದೇ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಸುಂಕದಕಟ್ಟೆ ನಿವಾಸಿಯಾದ 21 ವರ್ಷ ಮಹಿಳೆ 10 ದಿನದ ಹಿಂದೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿ ಇರುವುದಾಗಿ ತಿಳಿಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದರು. ಆರಂಭದಲ್ಲಿ ಮನೆಯಲ್ಲಿ ಆರಾಮವಾಗಿದ್ದ ಬಾಣಂತಿಗೆ ಶನಿವಾರ ದಿಢೀರ್‌ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. 

ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

ಈ ಹಿನ್ನೆಲೆಯಲ್ಲಿ ಕುಟುಂಬದವರು ಸ್ಥಳೀಯ ನಾಲ್ಕೈದು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದರೂ ಚಿಕಿತ್ಸೆ ನೀಡಲು ಮುಂದೆ ಬಂದಿಲ್ಲ. ಸಂಜೆ ವೇಳೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಈ ವೇಳೆಗೆ ಉಸಿರಾಟದ ಸಮಸ್ಯೆ ತೀವ್ರಗೊಂಡ ನಿತ್ರಾಣಗೊಂಡಿದ್ದ ಬಾಣಂತಿ ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದ್ದಾರೆ.

Follow Us:
Download App:
  • android
  • ios