ಸ್ತ್ರೀಶಕ್ತಿ ಸಾಮರ್ಥ್ಯ, ವಿವೇಕಾನಂದ ಯುವಶಕ್ತಿ ಯೋಜನೆ ನವೆಂಬರಿಂದ: ಸಿಎಂ ಬೊಮ್ಮಾಯಿ
ಸ್ವಯಂ ಉದ್ಯೋಗ ಕೈಗೊಂಡು, ಸ್ವಾವಲಂಬಿ ಬದುಕನ್ನು ಸಾಗಿಸಲು ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಸ್ತ್ರೀ ಸಾಮರ್ಥ್ಯ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯನ್ನು ಬರುವ ನವೆಂಬರ್ ತಿಂಗಳಿನಲ್ಲಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹೊಸದುರ್ಗ (ಅ.23): ಸ್ವಯಂ ಉದ್ಯೋಗ ಕೈಗೊಂಡು, ಸ್ವಾವಲಂಬಿ ಬದುಕನ್ನು ಸಾಗಿಸಲು ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಸ್ತ್ರೀ ಸಾಮರ್ಥ್ಯ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯನ್ನು ಬರುವ ನವೆಂಬರ್ ತಿಂಗಳಿನಲ್ಲಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹೊಸದುರ್ಗದಲ್ಲಿ ಶನಿವಾರ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಸ್ತ್ರೀಶಕ್ತಿ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಗ್ರಾಮದ ಎರಡು ಸ್ತ್ರೀಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರು. ನೆರವು ನೀಡುವ ಯೋಜನೆ ರೂಪಿಸಿ, ಅವರಿಂದ ಉತ್ಪಾದನೆ ಮಾಡಿಸಿ, ಉತ್ಪನ್ನಗಳಿಗೆ ಮಾರುಕಟ್ಟೆಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ, ರಾಜ್ಯದ ಪ್ರತಿ ಗ್ರಾಮದ ಎರಡು ಯುವಕ ಸಂಘಗಳಿಗೆ ತಲಾ 5 ಲಕ್ಷ ರು.ಗಳ ನೆರವು ನೀಡಲಾಗುವುದು ಎಂದು ತಿಳಿಸಿದರು.
1.7 ಲಕ್ಷ ಕೋಟಿ ಯೋಜನೆಗೆ ಅಸ್ತು: ಸಿಎಂ ಬೊಮ್ಮಾಯಿ ನೇತೃತ್ವದ ಸಮಿತಿ ಅನುಮೋದನೆ
ಕೇಂದ್ರ ಸಂಪುಟ ಒಪ್ಪಿಗೆಯಷ್ಟೇ ಬಾಕಿ: ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲು ಕೇವಲ ಒಂದು ಹಂತ ಮಾತ್ರ ಬಾಕಿ ಇದ್ದು, ಕೇಂದ್ರ ಸಚಿವ ಸಂಪುಟ ಇದಕ್ಕೆ ಅನುಮೋದನೆ ನೀಡಬೇಕಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ. ಹೊಸದುರ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರವಷ್ಟೇ ಯೋಜನೆಗೆ ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ ಒಪ್ಪಿಗೆ ಸೂಚಿಸಿದೆ. ಇದರಿಂದ ಪ್ರಾಥಮಿಕ ಹಂತದ ಎಲ್ಲ ಪ್ರಕ್ರಿಯೆ ಪೂರ್ಣಗೊಂಡಂತಾಗಿದೆ. ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದರೆ ಭದ್ರಾ ಮೇಲ್ದಂಡೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದರು.
ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಮಾತುಕತೆ ನಡೆಸಿದ್ದೇನೆ. ಆದಷ್ಟುಬೇಗ ಯೋಜನೆಗೆ ಅನುಮೋದನೆ ನೀಡುವ ಭರವಸೆಯನ್ನು ಅವರು ಕೊಟ್ಟಿದ್ದಾರೆ. ಇದರಿಂದಾಗಿ ಯೋಜನೆಗೆ ಕೇಂದ್ರದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಹಣಕಾಸಿನ ನೆರವು ಲಭಿಸಲಿದೆ. 15 ರಿಂದ 16 ಸಾವಿರ ಕೋಟಿ ರು.ನೆರವು ಸಿಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯ ಅಬ್ಬಿನಹೊಳೆ ಬಳಿ ಕಾಲುವೆ ನಿರ್ಮಾಣಕ್ಕೆ ಕೆಲ ರೈತರು ಅಡ್ಡಿಪಡಿಸಿದ್ದಾರೆ. ಅವರೊಡನೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ತಿಳಿಸಿದರು.
ಇಂದಿನಿಂದ 3 ದಿನ ಕಿತ್ತೂರು ಉತ್ಸವ: ಸಿಎಂ ಬೊಮ್ಮಾಯಿ ಚಾಲನೆ
ಪ್ರಯೋಜನವೇನು?: ಕೇಂದ್ರ ಸಚಿವ ಸಂಪುಟ ಯೋಜನೆಗೆ ಅನುಮೋದನೆ ನೀಡಿದರೆ ಭದ್ರಾ ಮೇಲ್ದಂಡೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ. ನೀರಾವರಿ, ವಿದ್ಯುತ್ ಉತ್ಪಾದನೆ, ಅಪಾರ ಪ್ರಮಾಣದ ನೀರಿನ ಸಂಗ್ರಹಣೆ ಸೇರಿದಂತೆ ವಿವಿಧೋದ್ದೇಶ ನೀರಾವರಿ ಯೋಜನೆಗಳಿಗೆ ದೊಡ್ಡ ಮೊತ್ತದ ಹಣದ ಅವಶ್ಯಕತೆಯಿದ್ದು, ಇಷ್ಟೊಂದು ಹಣವನ್ನು ವ್ಯಯಿಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕೆ ಇರುವುದಿಲ್ಲ. ರಾಷ್ಟ್ರೀಯ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಶೇ.90ರಷ್ಟುಹಣಕಾಸಿನ ನೆರವು ಸಿಗುವುದರಿಂದ ವಿವಿಧೋದ್ದೇಶ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲವಾಗಲಿದೆ.