ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಸಹಿಸುವುದಿಲ್ಲ. ಅಂಥವರ ವಿರುದ್ದ ಕಠಿಣ ಕ್ರಮ ಕೈ ಗೊಳ್ಳಲಾಗುವುದು ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದರು. ಅದರ ಹೊರತಾಗಿಯೂ ರಾಜ್ಯದ ಹಲವೆಡೆ ಮೈಕ್ರೋಫೈನಾನ್ಸ್‌ ಸಿಬ್ಬಂದಿ ಕಿರುಕುಳ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ನೇರವಾಗಿಯೇ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಹಾವೇರಿ(ಜ.23): ಮೈಕ್ರೋ ಫೈನಾನ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತ ಹಾವೇರಿಯ ಮಹಿಳೆಯರು ಇದೀಗೆ ಮಾಂಗಲ್ಯ ಸರ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಅವರು ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೋಸ್ಟ್ ಮೂಲಕ ತಾಳಿ ಸರ ರವಾನಿಸಿದ್ದಾರೆ. 

ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಸಹಿಸುವುದಿಲ್ಲ. ಅಂಥವರ ವಿರುದ್ದ ಕಠಿಣ ಕ್ರಮ ಕೈ ಗೊಳ್ಳಲಾಗುವುದು ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದರು. ಅದರ ಹೊರತಾಗಿಯೂ ರಾಜ್ಯದ ಹಲವೆಡೆ ಮೈಕ್ರೋಫೈನಾನ್ಸ್‌ ಸಿಬ್ಬಂದಿ ಕಿರುಕುಳ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ನೇರವಾಗಿಯೇ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ರಾಮನಗರ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ

ಮಾಂಗಲ್ಯ ಉಳಿಸಿ ಅಭಿಯಾನ: 

ಹಾವೇರಿ ಜಿಲ್ಲೆಯ ನೊಂದ ಮಹಿಳೆಯರು ಹಾಗೂ ರೈತ ಮುಖಂಡರು 'ಮಾಂಗಲ್ಯ ಸರ ಉಳಿಸಿ' ಎಂಬ ಅಭಿಯಾನ ಆರಂಭಿಸಿದ್ದು, ಹಾವೇರಿ ನಗರದ ಅಂಚೆ ಕಚೇರಿಮೂಲಕಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಸರವನ್ನೇ ರವಾನಿಸಿದ್ದಾರೆ. 

ಮೈಕ್ರೋ ಫೈನಾನ್ಸ್ ಕಂಪನಿಗಳು ಮನೆ ಬಾಗಿಲಿಗೆ ಬಂದು ಕಿರುಕುಳ ನೀಡುತ್ತಿದ್ದಾರೆ. ಮನೆಯಲ್ಲಿ ನೆಮ್ಮದಿಯಾಗಿ ಇರುವಂತಿಲ್ಲ. ಮನೆಗೆ ಬಂದರೆ ಇವರ ಕಿರುಕುಳ, ಇವರು ಬಂದರೆ ಸುತ್ತಮುತ್ತಲಿನವರ ಮೂದಲಿಕೆ ಕೇಳುವಂ ತಾಗಿದೆ. ಹೀಗಾಗಿ ಕಿರುಕುಳ ತಪ್ಪಿಸಿ, ಮಾಂಗ ಲ್ಯ ಉಳಿಸಿ ಎಂದು ಮಹಿಳೆಯರು ಒತ್ತಾಯಿಸಿದ್ದಾರೆ. 

ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳ: ಗ್ರಾಮ ತೊರೆಯಬಾರದು ಎಂದು ಕುಟುಂಬಗಳಿಗೆ ಧೈರ್ಯ ತುಂಬಿದ ಅಧಿಕಾರಿಗಳು!

ಜಿಲ್ಲಾಡಳಿತ ಹಾಗೂ ಎಸಿ ಕಚೇರಿಗೆ ತೆರಳಿದ ಮಹಿಳೆಯರುಮೈಕ್ರೋಫೈನಾನ್ಸ್‌ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್ಪಿ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಕೊಡಗಿನಲ್ಲೂ ಊರು ತೊರೆದ ಗ್ರಾಮಸ್ಥರು 

ಕುಶಾಲನಗರ: ಖಾಸಗಿ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ರಾಮ ನಗರ ತಾಲೂಕು ತಿಮ್ಮಯ್ಯನ ದೊಡ್ಡಿ ಗ್ರಾಮಸ್ಥರು ಊರು ಬಿಟ್ಟ ಆತಂಕಕಾರಿ ಘಟನೆ ಬೆನ್ನಲ್ಲೆ ಕೊಡಗು ಜಿಲ್ಲೆಯಲ್ಲೂ ಅಂತಹದ್ದೆ ಘಟನೆ ನಡೆದಿದೆ. ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದವರು ಸಾಲ ಮರುಪಾವತಿ ಸಾಧ್ಯ ವಾಗದೆ ಫೈನಾನ್ಸರ್‌ಗಳ ಕಿರುಕುಳದಿಂದ ಊರು ಬಿಟ್ಟ ಪ್ರಕರಣ ಕುಶಾಲನಗರದ ನಂಜ ರಾಯ ಪಟ್ಟಣ ಗ್ರಾಮ ಪಂಚಾ ಯಿತಿ ವ್ಯಾಪ್ತಿಯಲ್ಲಿ ನಡೆದಿದೆ.