ಸಚಿವ ದಿನೇಶ್ ಪತ್ನಿ ದೂರು: ಬಿಜೆಪಿ ವಿರುದ್ಧ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ
ನನ್ನ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ. ಬಿಜೆಪಿಯಿಂದ ಈ ರೀತಿಯ ಘಟನೆಗಳು ಪುನರಾವರ್ತನೆ ಆಗುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು. ಕೃತ್ಯಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ತಬಸುಮ್ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ.
ಬೆಂಗಳೂರು(ಅ.08): 'ಸಾಮಾಜಿಕ ಜಾಲತಾಣ 'ಎಕ್ಸ್'ನ ಬಿಜೆಪಿ ಖಾತೆಯಲ್ಲಿ ನನ್ನ ಹಾಗೂ ನನ್ನ ಧರ್ಮದ ಬಗ್ಗೆ ಅನಗತ್ಯವಾಗಿ ಪ್ರಸ್ತಾಪಿಸಲಾಗುತ್ತಿದೆ. ಇದಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬಸುಮ್ ರಾವ್ ಅವರು ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು 15 ದಿನದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.
ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ತರಬೇಡಿ: ಬಿಜೆಪಿ ವಿರುದ್ಧ ಮಹಿಳಾ ಆಯೋಗಕ್ಕೆ ದಿನೇಶ್ ಗುಂಡೂರಾವ್ ಪತ್ನಿ ದೂರು
'ನನ್ನ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ. ಬಿಜೆಪಿಯಿಂದ ಈ ರೀತಿಯ ಘಟನೆಗಳು ಪುನರಾವರ್ತನೆ ಆಗುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು. ಕೃತ್ಯಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ತಬಸುಮ್ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಯೋಗವು, ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.