ಇಂದು ಅಂಗಾಂಗ ದಾನಕ್ಕೆ ಸಿಎಂ, ಸಚಿವರಿಂದ ಹೆಸರು ನೋಂದಣಿ: ಸಚಿವ ಸುಧಾಕರ್
ವಿಶ್ವ ಅಂಗಾಂಗ ದಾನ ದಿನಾಚರಣೆ ಅಂಗವಾಗಿ ಆ.13ರ ಶನಿವಾರ ಬೆಂಗಳೂರಿನಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಗೂ ನನ್ನನ್ನೂ ಒಳಗೊಂಡು ಸಚಿವ ಸಂಪುಟದ ವಿವಿಧ ಸಚಿವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು (ಆ.13): ವಿಶ್ವ ಅಂಗಾಂಗ ದಾನ ದಿನಾಚರಣೆ ಅಂಗವಾಗಿ ಆ.13ರ ಶನಿವಾರ ಬೆಂಗಳೂರಿನಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಗೂ ನನ್ನನ್ನೂ ಒಳಗೊಂಡು ಸಚಿವ ಸಂಪುಟದ ವಿವಿಧ ಸಚಿವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಂಗಾಂಗ ದಾನದ ಬಗ್ಗೆ ಸಾರ್ವಜನಿಕವಾಗಿ ಜಾಗೃತಿ ಮೂಡಿಸಲು ಶನಿವಾರ ಮೇಖ್ರಿ ವೃತ್ತದಿಂದ ಫ್ರೀಡಂ ಪಾರ್ಕ್ವರೆಗೆ ಬೃಹತ್ ಜಾಗೃತಿ ಜಾಥಾ ನಡೆಸಲಾಗುವುದು. ವೈದ್ಯರು, ನರ್ಸ್‌ಗಳು, ಆಶಾಕಾರ್ಯಕರ್ತರು, ಯುವಜನರು ಸೇರಿ 5 ಸಾವಿರಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ವೇಳೆ ಮಾನವ ಸರಪಳಿ ನಿರ್ಮಿಸಿ ಅಂಗಾಂಗ ದಾನದ ಮೂಲಕ ಒಬ್ಬರಿಗೊಬ್ಬರು ಸಹಕಾರ ನೀಡುವ ಸಂದೇಶ ಸಾರಲಾಗುವುದು. ಜೊತೆಗೆ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೆಳಗ್ಗೆ 8ರಿಂದ 8.15 ರವರೆಗೆ ಆರೋಗ್ಯ ಕ್ಷೇತ್ರದ ಹಲವರು ಮೂತ್ರಪಿಂಡದ ಆಕಾರದಲ್ಲಿ ನಿಂತುಕೊಂಡು ಜಾಗೃತಿ ಮೂಡಿಸಲಿದ್ದಾರೆ ಎಂದು ವಿವರಿಸಿದರು.
ಉಚಿತ 3ನೇ ಡೋಸ್ ನೀಡಿದರೂ ಜನ ಪಡೆಯುತ್ತಿಲ್ಲ: ಸಚಿವ ಸುಧಾಕರ್
ನಂತರ ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನ ಮಾಡಲಿದ್ದಾರೆ. ಹಾಗೆಯೇ ಅಂಗಾಂಗ ಪಡೆದವರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಮುಖ್ಯಮಂತ್ರಿಗಳು ಕೂಡ ಸ್ಥಳದಲ್ಲೇ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸುವರು. ಜೊತೆಗೆ ನನ್ನನ್ನೂ ಒಳಗೊಂಡು ಸಂಪುಟದ ವಿವಿಧ ಸಚಿವರು ಹಾಗೂ ಅಧಿಕಾರಿಗಳು ಕೂಡ ಹೆಸರು ನೋಂದಾಯಿಸಲಿದ್ದಾರೆ ಎಂದು ತಿಳಿಸಿದರು.
ಅಂಗಾಂಗ ದಾನ ಕೂಡ ಶ್ರೇಷ್ಠದಾನ. ಆದರೆ, ದೇಶದಲ್ಲಿ 10 ಲಕ್ಷ ಸಾವುಗಳಾದರೆ, 0.08 ಜನರಿಂದ ಮಾತ್ರ ಅಂಗಾಂಗ ದಾನವಾಗುತ್ತಿದೆ. ಸ್ಪೇನ್‌ನಲ್ಲಿ ಈ ಪ್ರಮಾಣ ಶೇ.40 ಆಗಿದೆ. ಕೆಲ ಸಾಮಾಜಿಕ, ಧಾರ್ಮಿಕ ಹಿನ್ನೆಲೆಯಿಂದಲೂ ಅಂಗಾಂಗ ದಾನಕ್ಕೆ ತೊಡಕುಂಟಾಗುತ್ತಿದೆ. ಈ ತೊಡಕು ನಿವಾರಣೆಗೆ ಜನರಲ್ಲಿ ದೊಡ್ಡ ಮಟ್ಟದ ಜಾಗೃತಿ ಮೂಡಬೇಕಿದೆ. ರಾಜ್ಯದಲ್ಲಿ ಅಂಗಾಂಗ ದಾನಕ್ಕೆ ಸೊಟ್ಟೊಕರ್ನಾಟಕ ಎಂಬ ಸಂಸ್ಥೆ ಇದ್ದು ಇಲ್ಲಿ ಆನ್‌ಲೈನ್ ನೋಂದಣಿಗೆ ಅವಕಾಶವಿದೆ. ಇದರಲ್ಲಿ 11 ಸಾವಿರ ಜನರು ಇದುವರೆಗೆ ನೋಂದಾಯಿಸಿದ್ದಾರೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಅಲರ್ಟ್: ಸಲಿಂಗಕಾಮಿಗಳಲ್ಲಿ ಹೆಚ್ಚು ಮಂಕಿಪಾಕ್ಸ್ ಕೇಸ್ ಪತ್ತೆ, ಸಚಿವ ಸುಧಾಕರ್
ಅಂಗಾಂಗ ದಾನ-ಕಸಿಗೆ ಏರ್ ಆಂಬ್ಯುಲೆನ್ಸ್ ಸೌಲಭ್ಯ: ಅಂಗಾಂಗ ದಾನ ಮತ್ತು ಕಸಿಗೆ ಕಾಲಮಿತಿ ಇರುವುದರಿಂದ ಇದರಿಂದ ಯಾವುದೇ ವೈಪಲ್ಯಗಳಾಗದಂತೆ ತಡೆಯಲು ಏರ್ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಲು ಬಗ್ಗೆಯೂ ಸರ್ಕಾರ ಮಟ್ಟದಲ್ಲಿ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಇದೇ ವೇಳೆ ಸಚಿವ ಸುಧಾಕರ್ ತಿಳಿಸಿದರು. ವ್ಯಕ್ತಿ ಮೃತಪಟ್ಟ6 ಗಂಟೆಯೊಳಗೆ ಅಂಗಾಗ ದಾನ ಮಾಡಬೇಕಾಗುತ್ತದೆ. ದೂರದ ಸ್ಥಳಗಳಲ್ಲಿ ಯಾವುದಾದರೂ ಅಪಘಾತ ಅಥವಾ ಇನ್ಯಾವುದೇ ಕಾರಣದಿಂದ ವ್ಯಕ್ತಿ ಮೃತಪಟ್ಟರೆ ಅವರ ಕುಟುಂಬದವರು ಮೃತ ವ್ಯಕ್ತಿಯ ಅಂಗಾಗ ದಾನ ಮಾಡಿದರೆ ಸಮಯಕ್ಕೆ ಸರಿಯಾಗಿ ಅದನ್ನು ಬಳಸಿಕೊಳ್ಳಲು ಏರ್ ಆಂಬ್ಯುಲೆನ್ಸ್ ಸೌಲಭ್ಯ ಬೇಕಾಗುತ್ತದೆ. ಈ ಬಗ್ಗೆ ಚಿಂತನೆ ನಡೆದಿದೆ ಎಂದರು.