ಯಾದಗಿರಿ ಪಿಎಸ್ಐ ಸಾವು ಪ್ರಕರಣ: ತನಿಖೆ ನಂತರ ಸತ್ಯಾಂಶ ಬಯಲು: ಸಚಿವ ಪರಮೇಶ್ವರ್

ಯಾದಗಿರಿ ಪಿಎಸ್ಐ ಸಾವು ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು. 

Yadgir PSI death case Truth will come out after investigation Says Minister Dr G Parameshwar gvd

ಬೆಂಗಳೂರು (ಆ.03): ಯಾದಗಿರಿ ಪಿಎಸ್ಐ ಸಾವು ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿಲ್ಲ. ಡೆತ್‌ನೋಟ್ ಬರೆದಿಟ್ಟಿಲ್ಲ‌. ವರ್ಗಾವಣೆ ವಿಚಾರಕ್ಕೆ ನೊಂದಿದ್ದರು ಎಂದು ಆತನ ಪತ್ನಿ ದೂರು ಕೊಟ್ಟಿದ್ದಾರೆ. ಅವರ ಆರೋಪವನ್ನು ಪರಿಗಣಿಸುತ್ತೇನೆ. ಆ ಆಯಾಮದಲ್ಲಿಯು ತನಿಖೆ ನಡೆಯಲಿದೆ. ಪ್ರಾಥಮಿಕ‌ ಮಾಹಿತಿ ಕಲೆ ಹಾಕುತ್ತಿದ್ದಾರೆ.‌ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸ್ಥಳೀಯ ಶಾಸಕರಿಗೆ ಹಣ ಕೊಟ್ಟಿದ್ದರು ಎಂಬ ಆರೋಪವನ್ನು ಸರಿ ಅಥವಾ ಇಲ್ಲ ಅಂತ ಹೇಳಲು ಬರುವುದಿಲ್ಲ. ತನಿಖೆ ನಡೆಸಿದ ನಂತರ ಸತ್ಯಾಂಶ ಹೊರಬರಲಿದೆ. ನಾನು ಸಮುದಾಯ ಯಾವುದು ಎಂಬುದನ್ನು ನೋಡುವುದಿಲ್ಲ. ಕಾನೂನನ್ನು ನೋಡುತ್ತೇನೆ. ಆ ರೀತಿಯ ಘಟನೆ‌ ನಡೆದಾಗ ಎಫ್‌ಐಆರ್ ಹಾಕಿಕೊಳ್ಳಬೇಕು. ಎಫ್‌ಐಆರ್ ದಾಖಲಿಸುವ ಮುನ್ನ ಪರಿಶೀಲನೆ ನಡೆಸುತ್ತಾರೆ. ಶಾಸಕರು ಇದ್ದರು ಅಥವಾ ಬೇರೆಯವರಿದ್ದರು, ಆಡಳಿತ ಪಕ್ಷದ ಶಾಸಕರಾಗಿದ್ದರು ಸಹ ಎಫ್ಐಆರ್ ದಾಖಲಿಸುತ್ತಾರೆ ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್‌ನವರು ಪಾದಯಾತ್ರೆಯನ್ನು ಕಾನೂನು ಬಾಹಿರವಾಗಿ ಮಾಡುವುದಿಲ್ಲ. ಶಾಂತಿಯುತವಾಗಿ ನಡೆಸುವುದಾಗಿ ಕೇಳಿಕೊಂಡಿದ್ದರಿಂದ ಸಿಎಂ ಜೊತೆ ಚರ್ಚಿಸಿ ಅವಕಾಶ ನೀಡಿದ್ದೇವೆ. ಯಾವುದೇ ರೀತಿಯ ಅಹಿತಕರ ಘಟನೆಗಳಾಗಬಾರದು, ಜನರಿಗೆ ತೊಂದರೆಗಳಾಗದಂತೆ ನೋಡಿಕೊಳ್ಳುವಂತೆ ಕಂಡಿಷನ್ ಹಾಕಲಾಗಿದೆ ಎಂದು ತಿಳಿಸಿದರು.

ಅಪ್ಪು ಹೇಗೋ ದುನಿಯಾ ವಿಜಯ್ ಕೂಡಾ ನನಗೆ ತಮ್ಮನ ತರ: ಭೀಮ ಚಿತ್ರದ ಟ್ರೈಲರ್ ಲಾಂಚ್ ಮಾಡಿದ ಶಿವಣ್ಣ

ನನ್ನ ಗಂಡನ ಸಾವಿಗೆ ನ್ಯಾಯ ಬೇಕು, ಪತ್ನಿ ಕಣ್ಣೀರು: ಪ್ರತಿಭಟನೆಯಲ್ಲಿ ಭಾಗಿಯಾದ ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಪ್ರತಿಭಟನೆಯಲ್ಲಿ ಭಾಗಿಯಾಗಿ ಗಂಡನ ಸಾವಿಗೆ ನ್ಯಾಯ ಒದಗಿಸುವಂತೆ ಕಣ್ಣೀರು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಶ್ವೇತಾ, ಶಾಸಕ ಚೆನ್ನಾರೆಡ್ಡಿ ಪಾಟೀಲ್, ಅವರ ಪುತ್ರ ಪಂಪನಗೌಡ ತಪ್ಪು ಮಾಡಿದ್ದಾರೆ ಇದು ಇಡೀ ಯಾದಗಿರಿ ಜನರಿಗೆ ಗೊತ್ತಿದೆ. ಗಂಡನ ಪೋಸ್ಟಿಂಗ್‌ಗಾಗಿ ಲಕ್ಷಗಟ್ಟಲೇ ದುಡ್ಡು ಕೇಳಿದ್ದಾರೆ. ದುಡ್ಡು ಕೊಡದ್ದಕ್ಕೆ ಪೋಸ್ಟಿಂಗ್ ಕೊಟ್ಟಿಲ್ಲ. ನನಗು ಮಗು ಇದೆ. ಈಗ ಇವರ ಕಿರುಕುಳಕ್ಕೆ ಸತ್ತಿದ್ದಾನೆ. ನಾನು ಹೇಗೆ ಜೀವನ ಮಾಡಬೇಕು? ಪೊಲೀಸ್ ಇಲಾಖೆಯಲ್ಲೇ ಇಷ್ಟು ಮೋಸ ಆದ್ರೂ ಎಲ್ಲರೂ ಎಂಎಲ್‌ಎಗೆ ಸಪೋರ್ಟ್ ಮಾಡ್ತಿದ್ದಾರೆ. ಇದು ನನಗೆ ತುಂಬಾ ನೋವು ಉಂಟುಮಾಡಿದೆ. ಇವತ್ತು ನನ್ನ ಗಂಡ, ನಾಳೆ ಇನ್ನೊಬ್ಬರು. ದಯವಿಟ್ಟು ಶಾಸಕ ಹಾಗೂ ಪುತ್ರನ ವಿರುದ್ಧ ಕೇಸ್ ದಾಖಲಿಸಿ. ಕೇಸ್ ದಾಖಲಿಸುವವರೆಗೆ ನಾನು ಅನ್ನ ನೀರು ಮುಟ್ಟುವುದಿಲ್ಲ ಎಂದ ಮೃತ ಪಿಎಸ್‌ಐ ಪತ್ನಿ ಆಗ್ರಹಿಸಿದರು.

Latest Videos
Follow Us:
Download App:
  • android
  • ios