Asianet Suvarna News Asianet Suvarna News

ಕರ್ನಾಟಕದಲ್ಲಿ ಮತ್ತೆ ಕೊರೋನಾ ಆತಂಕ: ಕೋವಿಡ್ ಕೇರ್ ಸೆಂಟರ್ ಓಪನ್

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದ್ದು, ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

Yediyurappa Talks about covid care center Over Coronavirus Second Wave rbj
Author
Bengaluru, First Published Mar 17, 2021, 4:02 PM IST

ಬೆಂಗಳೂರು, (ಮಾ.17): ಕೊರೋನಾ ಸೋಂಕು ಮತ್ತೊಮ್ಮೆ ಭಾರತದಲ್ಲಿ ಹಾನಿಯುಂಟುಮಾಡುತ್ತಿದೆ. ಮತ್ತೊಮ್ಮೆ, ಹೊಸ ಪ್ರಕರಣಗಳು ವೇಗವನ್ನು ಪಡೆದುಕೊಳ್ಳುತ್ತಿವೆ. ಹೀಗಾಗಿ ಲಾಕ್‌ಡೌನ್‌ನಂತಹ ಸಂದರ್ಭಗಳನ್ನು ನೋಡಲಾಗುತ್ತಿದೆ.

ಇದರ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಬೆಂಗಳೂರಿನ 8 ವಲಯಗಳಲ್ಲಿಯೂ ಕೋವಿಡ್ ಕೇರ್ ಸೆಂಟರ್ ಶುರು ಮಾಡಲು ಬಿಬಿಎಂಪಿ ಸಿದ್ಧತೆ ನಡೆಸಿದೆ.

ಬಿಬಿಎಂಪಿ ಸಮುದಾಯ ಭವನಗಳು, ಪಾರ್ಕ್ ಗಳಲ್ಲಿನ ಇನ್ ಡೋರ್ ಪ್ಲೇಸ್ ಗಳನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ಗುರಿತಿಸುವಂತೆ ಆಯಾ ವಲಯದ ಜೆಸಿಗಳಿಗೆ ಸೂಚನೆ ಕೊಡಲಾಗಿದೆ.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ? ಇಲ್ಲಿದೆ ಸತ್ಯಾಸತ್ಯತೆ!

ಸ್ಥಳ ಹೊಸದಾದ್ರು ಈ ಹಿಂದೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬಳಸಿದ್ದ ಕಾಟ್ , ಬೆಡ್ , ಫ್ಯಾನ್‌ ಇನ್ನಿತರ ವಸ್ತುಗಳನ್ನು‌ಮರು ಬಳಕೆ ಮಾಡುವಂತೆ ಸೂಚಿಸಲಾಗಿದೆ.

ಇನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುತ್ತದೆ, ಬೆಂಗಳೂರು, ಬೀದರ್, ಕಲಬುರಗಿಗಳ ಮೇಲೆ ನಿಗಾ ವಹಿಸಲಾಗುತ್ತದೆ ಎಂದು ಹೇಳಿದರು.

ದೇಶದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಇಂದು (ಬುಧವಾರ) ಸಿಎಂಗಳ ಸಭೆ ಕರೆದಿದ್ದರು. ಸಭೆ ಬಳಿಕ ಸಿಎಂ ಯಡಿಯೂರಪ್ಪ ಮಾತನಾಡಿ, ರಾಜ್ಯದಲ್ಲಿ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮೈಕ್ರೋ ಕಂಟೈನ್ಮೆಂಟ್ ಜೋನ್ ಮಾಡಲಾಗುತ್ತದೆ ಎಂದರು.

3T (ಟೆಸ್ಟ್ ಟ್ರ್ಯಾಕ್ ಟ್ರೀಟ್) ಮಂತ್ರವನ್ನು ಅನುಸರಿಸಬೇಕು. ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಸೋಂಕಿನ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ಗಡಿ ಜಿಲ್ಲೆಗಳಲ್ಲಿ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದರು.

Follow Us:
Download App:
  • android
  • ios