ಬೆಂಗಳೂರು, (ಏ.27): ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ಲಾಕ್​ಡೌನ್​ ಸಡಿಲಿಕೆ ಮಾಡುವ ವಿಚಾರವಾಗಿ ಇಂದು (ಸೋಮವಾರ) ಸಿಎಂ ಬಿ.ಎಸ್​​ ಯಡಿಯೂರಪ್ಪ ಪ್ರಧಾನಿ ಮೋದಿ ಜೊತೆಗೆ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಚರ್ಚೆ ನಡೆಸಿದ್ರು.

ಲಾಕ್‌ಡೌನ್ ಸಡಿಲಿಕೆ ಮತ್ತು ಹಿಂಪಡೆಯುವಿಕೆ ಹೇಗೆ? ನೀವು ಕೆಲ ಸಿದ್ಧತೆಗಳ ಮಾಡಿಕೊಳ್ಳಬೇಕಿದೆ. ನಿಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳ ಸಂಪೂರ್ಣ ವರದಿ ತರಿಸಿಕೊಳ್ಳಿ. ಪ್ರತಿಯೊಂದು ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿ ಎಂದು ಮೋದಿ ಸಲಹೆ ನೀಡಿದ್ದಾರೆ.

 ಪ್ರಧಾನಿಗಳ ಸೂಚನೆ ಮೇರೆಗೆ ಇಂದು (ಸೋಮವಾರ) ಸಂಜೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಲು ಮುಂದಾಗಿದ್ದಾರೆ.

ಎಣ್ಣೆ ಪ್ರಿಯರಿಗೆ ಮತ್ತೆ ನಿರಾಸೆ: ಮೇ. 15ವರೆಗೆ ಮದ್ಯ ಸಿಗಲ್ಲ!

ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಸ್ಥಿತಿಗತಿಗಳ ಬಗ್ಗೆ ಡಿಸಿಗಳ ಜತೆ ಚರ್ಚೆ ನಡೆಸಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಬಳಿಕ ಎಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ವರದಿ ಆಧರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಹಂತದ ಲಾಕ್‌ಡೌನ್ ಮುಗಿಯುವ ಮೇ.3ರೊಳಗೆ ಮತ್ತೊಮ್ಮೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಈ ವೇಳೆ ಲಾಕ್‌ಡೌನ್ ಬಗ್ಗೆ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಲಾಕ್‌ಡೌನ್‌ ಬಗ್ಗೆ ಚಿಂತನ ಮಂಥನ: ಕರ್ನಾಟಕದಲ್ಲಿ ಮತ್ತೆ ಹೆಚ್ಚಾದ ಕೊರೋನಾ...!

ಮೇಲ್ನೋಟಕ್ಕೆ ನೋಡಿದ್ರೆ ಐದಾರೂ ರಾಜ್ಯಗಳು ಲಾಕ್‌ಡೌನ್ ಮುಂದುವರಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. ಇನ್ನು ಕೆಲ ರಾಜ್ಯಗಳು ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಅಭಿಪ್ರಾಯ ವ್ಯಕ್ತಪಡಿಸಿವೆ.

ಒಟ್ಟಿನಲ್ಲಿ ಸದ್ಯದ ಬೆಳವಣಿಗೆಗಳನ್ನು ನೋಡುತ್ತಿದ್ರೆ ಮೇ.3ರ ಬಳಿಕವೂ ಮೂರನೇ ಹಂತದ ಲಾಕ್‌ಡೌನ್ ಇನ್ನಷ್ಟು ದಿನ ಮುಂದುರಿಯುವ ಎಲ್ಲಾ ಸಾಧ್ಯತೆಗಳಿವೆ.