* 5 ವರ್ಷ ಹಿಂದೆ ಸ್ಥಗಿತ ಆಗಿದ್ದ ವಿಮೆಗೆ ಕೇಂದ್ರ ಸಚಿವ ಅಮಿತ್ ಶಾ ಚಾಲನೆ* ಕ್ಷೀರ ಸಮೃದ್ಧಿ ಬ್ಯಾಂಕ್ ಲಾಂಛನ ಅನಾವರಣ* ಹೈನುಗಾರಿಕೆ ಕ್ಷೇತ್ರದಲ್ಲಿ ಆರ್ಥಿಕ ಕ್ರಾಂತಿ ಮಾಡಲಾಗುವುದು: ಬೊಮ್ಮಾಯಿ
ಬೆಂಗಳೂರು(ಮಾ.27): ತವರು ಜಿಲ್ಲೆ ಹಾವೇರಿಗೆ(Haveri) ಶನಿವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai), ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿಎಂ ಅವರನ್ನು ಸ್ವಾಗತಿಸಿದ ಲಂಬಾಣಿ ಸಾಂಪ್ರದಾಯಿಕ ಪೋಷಾಕು ಧರಿಸಿದ್ದ ಮಕ್ಕಳು ಪೋಸು ನೀಡಿದ್ದು ಹೀಗೆ. ಹಿಂದೆ ಇದ್ದಂತೆಯೇ ಯೋಜನೆ ಮರುಜಾರಿ. ಆದರೆ, ಪ್ರೀಮಿಯಂ, ಚಿಕಿತ್ಸಾ ವೆಚ್ಚ ಮೊತ್ತ ಹೆಚ್ಚಳ ಸಾಧ್ಯತೆ. ರಾಜ್ಯದಲ್ಲಿ ಐದು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಜನಪ್ರಿಯ ‘ಯಶಸ್ವಿನಿ ಆರೋಗ್ಯ ವಿಮಾ ಯೋಜನೆ’ಗೆ(Yeshasvini Health Insurance Scheme) ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ(Amit Shah) ಅವರು ಏ.1ರಂದು ಮತ್ತೆ ಚಾಲನೆ ನೀಡಲಿದ್ದಾರೆ.
ಅಂದು ಬೆಂಗಳೂರಿನಲ್ಲಿ(Bengaluru) ನಡೆಯಲಿರುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಯಶಸ್ವಿನಿ ಯೋಜನೆಗೆ ಚಾಲನೆ ನೀಡುವುದು ಮಾತ್ರವಲ್ಲದೆ, ಹಾಲು ಉತ್ಪಾದಕರ ಅನುಕೂಲಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಸ್ಥಾಪನೆಯಾಗುತ್ತಿರುವ ‘ಕ್ಷೀರಸಮೃದ್ಧಿ ಸಹಕಾರ ಬ್ಯಾಂಕ್’ನ ಲಾಂಛನವನ್ನೂ ಬಿಡುಗಡೆ ಮಾಡಲಿದ್ದಾರೆ.
ಸ್ಟಾರ್ಟ್‌ಅಪ್ ಉದ್ದಿಮೆಗಳ ಸ್ಥಾಪನೆಯಲ್ಲಿ ರಾಜ್ಯ ಮಂಚೂಣಿ: ಸಿಎಂ ಬೊಮ್ಮಾಯಿ
ಸಹಕಾರಿ ರಂಗದಲ್ಲಿ ಹಲವು ಸುಧಾರಣೆ ತರಬೇಕೆಂಬ ಉದ್ದೇಶವಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಬ್ಯಾಂಕ್‌ನ ಲಾಂಛನ ಉದ್ಘಾಟನೆ ಹಾಗೂ ಯಶಸ್ವಿನಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕಾಗಿ ಬೃಹತ್ ಸಭೆ ಏರ್ಪಾಡು ಮಾಡಲಾಗುತ್ತಿದೆ. ಕ್ಷೀರಸಮೃದ್ಧಿ ಬ್ಯಾಂಕ್ನಿಂದ ರೈತರ ಆದಾಯ ಹೆಚ್ಚಳವಾಗುವ ನಿರೀಕ್ಷೆ ಇದ್ದು, ಹೈನುಗಾರಿಕೆ ಕ್ಷೇತ್ರದಲ್ಲಿ ಆರ್ಥಿಕ ಕ್ರಾಂತಿ ಮಾಡಲಾಗುವುದು ಎಂದು ಬೊಮ್ಮಾಯಿ ಶನಿವಾರ ಹುಬ್ಬಳ್ಳಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಜನಪ್ರಿಯವಾಗಿದ್ದ, ಗ್ರಾಮೀಣ(Rural Area) ಜನರ ಆರೋಗ್ಯ ಹಾಗೂ ಆರ್ಥಿಕ ಹಿತಕಾಪಾಡುವಲ್ಲಿ ಯಶಸ್ವಿಯಾಗಿದ್ದ ‘ಯಶಸ್ವಿನಿ’ ಯೋಜನೆ ಸ್ಥಗಿತಗೊಂಡು ಐದು ವರ್ಷ ಕಳೆದಿದೆ. ಇದೀಗ ರೈತರ(Farmers) ಒತ್ತಾಸೆಯಂತೆ ಈ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಲು ರಾಜ್ಯ ಸರ್ಕಾರ(Government of Karnataka) ನಿರ್ಧರಿಸಿದ್ದು, ಇದಕ್ಕಾಗಿ 300 ಕೋಟಿ ಮೀಸಲಿಟ್ಟಿದೆ. ಈ ಯೋಜನೆಯಿಂದ ಗ್ರಾಮೀಣ ರೈತ ಕುಟುಂಬಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ದೊರಕಲಿವೆ.
ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟರ್ ಖಾತೆ ಹ್ಯಾಕ್?
ಯಶಸ್ವಿನಿ’ ವಿಮೆ ಕಂತು, ಚಿಕಿತ್ಸೆ ಮೊತ್ತ ಹೆಚ್ಚಳ?
ವಿಶೇಷವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಸಹಕಾರ ಸಂಘಗಳ ಸದಸ್ಯರು ಎಷ್ಟುಮೊತ್ತದ ವಂತಿಗೆ ಭರಿಸಬೇಕು ಎಂಬುದು ನಿರ್ಧಾರವಾಗಬೇಕಾಗಿದೆ. ಗ್ರಾಮೀಣ ಮತ್ತು ನಗರ ಸಹಕಾರ ಸಂಘಗಳ ಸದಸ್ಯರಿಗೆ ಬೇರೆ ಬೇರೆ ರೀತಿ ವಂತಿಗೆ ನಿಗದಿ ಮಾಡಲಾಗಿತ್ತು. ಪರಿಶಿಷ್ಟರು, ಸಾಮಾನ್ಯ ವರ್ಗದವರಿಗೆ ಬೇರೆ ಬೇರೆ ಮೊತ್ತವನ್ನು ನಿಗದಿಗೊಳಿಸಲಾಗಿತ್ತು. ಈಗ ಮೊತ್ತವನ್ನು ಹೊಸದಾಗಿ ನಿಗದಿ ಮಾಡಬೇಕಾಗಿದೆ. ಈಗಾಗಲೇ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ’ (ಎಬಿ-ಎಕೆ) ಯೋಜನೆ ಜಾರಿಯಲ್ಲಿರುವಾಗ ಸರಿಸಮನಾಗಿ ಮತ್ತೊಂದು ಯೋಜನೆ ಜಾರಿಯಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಗಂಭೀರವಾದ ಸಮಾಲೋಚನೆ ನಡೆಯಬೇಕಾಗಿದೆ. ಈ ಹಿಂದೆ ಯೋಜನೆಯ ಸದಸ್ಯರಾದವರಿಗೆ ಗರಿಷ್ಠ 2 ಲಕ್ಷದವರೆಗಿನ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ಎಬಿ-ಎಕೆ ಯೋಜನೆಯಡಿ ಇದಕ್ಕಿಂತ ಹೆಚ್ಚು ವೆಚ್ಚವನ್ನು ಭರಿಸಲಾಗುತ್ತಿದೆ. ಹೀಗಾಗಿ ಈ ಗೊಂದಲ ನಿವಾರಿಸಿಕೊಳ್ಳಬೇಕಾಗಿದೆ ಎಂದು ಸಹಕಾರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಯೋಜನೆಯಡಿ ಈ ಹಿಂದೆ ಚಿಕಿತ್ಸೆಗೆ ಗುರುತಿಸಲಾಗಿದ್ದ ಕಾಯಿಲೆಗಳನ್ನು ಬಹುತೇಕ ಯಥಾವತ್ತಾಗಿ ಮುಂದುವರೆಸುವ ಸಾಧ್ಯತೆ ಇದೆ. ಚಿಕಿತ್ಸೆ ನೀಡುವ ಆಸ್ಪತ್ರೆಗಳ ಪಟ್ಟಿಯನ್ನು ಇನ್ನಷ್ಟುಹೆಚ್ಚಿಸುವ ಸಾಧ್ಯತೆ ಇದೆ. ಜೊತೆಗೆ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಟ್ರಸ್ಟನ್ನು ಹೊಸದಾಗಿ ರಚಿಸಬೇಕಾಗಿದೆ ಎಂದು ಅವರು ಹೇಳಿದರು.
