ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಅವರು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದು, ಅಭಿಮಾನಿಗಳು ಹಾಗೂ ಕುಟುಂಬಸ್ಥರು ಅವರನ್ನು ಸ್ವಾಗತಿಸಿದರು.

ಬೆಂಗಳೂರು: ಜಾಮೀನು ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದಿದ್ದಾರೆ. ಜೈಲಿನಿಂದ ನೇರವಾಗಿ ವಿನಯ್ ಕುಲಕರ್ಣಿ ಡಾಲರ್ಸ್ ಕಾಲೋನಿಯ ಮನೆಗೆ ತೆರಳಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳತ್ತ ಕೈಬೀಸಿ ಸಂತಸ ವ್ಯಕ್ತಪಡಿಸಿದರು.

ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ

 ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಜೈಲು ಪಾಲಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅವರಿಗೆ ಶಿಕ್ಷೆ (ಸಜಾ) ಪ್ರಕಟವಾಗಿತ್ತು. ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದ್ದರಿಂದ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಯಿತು. ಅಗತ್ಯ ಶರತ್ತುಗಳನ್ನು ಪೂರೈಸಿದ ನಂತರ, ವಿನಯ್ ಕುಲಕರ್ಣಿ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಇಂದೇ ಬಿಡುಗಡೆಯಾದರು.

ವಿನಯ್ ಕುಲಕರ್ಣಿ ಅವರನ್ನು ಜೈಲಿನಿಂದ ಕರೆದುಕೊಂಡು ಹೋಗಲು ಅವರ ಮಕ್ಕಳಾದ ವೈಶಾಲಿ, ದೀಪಾಲಿ ಮತ್ತು ಮಗ ಹೇಮಂತ್ ಆಗಮಿಸಿದ್ದಾರೆ. ಜೈಲಿನಿಂದ ಹೊರಬಂದ ವಿನಯ್ ಕುಲಕರ್ಣಿ ಅವರಿಗೆ ಅಭಿಮಾನಿಗಳು ಹೂವಿನ ಹಾರ ಹಾಕಿ ಸ್ವಾಗತ ಕೋರಿದರು. ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ (ಕರಚಾಲನೆ) ನೀಡಿ, ವಿನಯ್ ಕುಲಕರ್ಣಿ ಅವರು ಸ್ಥಳದಿಂದ ತೆರಳಿದರು.

ಇದನ್ನೂ ಓದಿ: ಧಾರವಾಡ: ವಿನಯ್ ಕುಲಕರ್ಣಿಗೆ ಜಾಮೀನು, 'ನಾನು ಸುಪ್ರೀಂ ಕೋರ್ಟ್‌ಗೆ ಹೋಗಲ್ಲ' ಎಂದ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ!