ಧಾರವಾಡ ಜಿಪಂ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ವಿಚಾರಣೆ ವೇಳೆ ತಮ್ಮ ಮೊಬೈಲ್‌ಗಳ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗಂಭೀರ ಸ್ವರೂಪದ ಆರೋಪ ಮಾಡಿದರು.

ಬೆಂಗಳೂರು (ಏ.18): ಧಾರವಾಡ ಜಿಪಂ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ವಿಚಾರಣೆ ವೇಳೆ ತಮ್ಮ ಮೊಬೈಲ್‌ಗಳ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗಂಭೀರ ಸ್ವರೂಪದ ಆರೋಪ ಮಾಡಿದರು.

ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ ಇತರೆ ಆರೋಪಿಗಳ ಜಾಮೀನು ರದ್ದು ಕೋರಿ ವಿಚಾರಣೆ ನಡೆಯಿತು. ಈ ವೇಳೆ ವಿನಯ್ ಕುಲಕರ್ಣಿ ಪರ ವಕೀಲರಾದ ಸಿ.ವಿ.ನಾಗೇಶ್‌ ಮತ್ತು ಶ್ಯಾಮ್‌ ಸುಂದರ್‌, ವಕೀಲರ ದೂರವಾಣಿ ಕರೆ ಕದ್ದಾಲಿಕೆಯಾಗುತ್ತಿರುವ ಬಗ್ಗೆ ನ್ಯಾಯಾಲಯದ ಗಮನಕ್ಕೆ ತಂದರು. ಅಲ್ಲದೇ, ಸಿಬಿಐ ನಡೆ ಬಗ್ಗೆ ಆಕ್ಷೇಪಿಸಿ ಅರ್ಜಿ ಸಲ್ಲಿಸಿದರು.

ಸಿಬಿಐ ಅಧಿಕಾರಿಗಳು ವಕೀಲರ ಮೊಬೈಲ್ ಕರೆಗಳನ್ನು ಗುಪ್ತವಾಗಿ ಆಲಿಸುವುದು ಮತ್ತು ಅವರ ಮೇಲೆ ನಿಗಾ ಇರಿಸುವ ಕೆಲಸ ನಡೆಯುತ್ತಿದೆ. ತನಿಖೆಯಲ್ಲಿ ಸಿಬಿಐ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ. ಹೀಗಾಗಿ ಜಾಮೀನು ರದ್ದು ಕೋರಿ ಸಲ್ಲಿಸಿರುವ ಅರ್ಜಿಯನ್ನು ಹಿಂಪಡೆಯಲು ಸಿಬಿಐಗೆ ಸೂಚನೆ ನೀಡಬೇಕು ಎಂದು ದೂರಿದರು.

ಇದನ್ನೂ ಓದಿ: ಮಾರ್ಚ್ ನಂತರ ಸಚಿವ ಸಂಪುಟ ವಿಸ್ತರಣೆ, ನಾನೂ ಈ ಸಲ ಸಚಿವನಾಗ್ತೇನೆ;

ಈ ಬಗ್ಗೆ ವಾದ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್‌, ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ವಕೀಲ ಗಂಗಾಧರ ಶೆಟ್ಟಿಗೆ ಸೂಚನೆ ನೀಡಿ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದರು.