Apr 28, 2025, 12:16 PM IST
ಮಾದಿಗ ಸಮುದಾಯದವರು ಕಡ್ಡಾಯವಾಗಿ ಜಾತಿ ಕಾಲಂನಲ್ಲಿ ಮಾದಿಗ ಎಂದೇ ನಮೂದಿಸುವಂತೆ ಮಾಜಿ ಸಚಿವ ಎಚ್.ಆಂಜನೇಯ ಕರೆ ನೀಡಿದರು.
Apr 23, 2025, 12:02 PM IST
ರಾಜ್ಯದಲ್ಲಿ ಮುಸ್ಲಿಮರ ಸಂಖ್ಯೆ 30 ವರ್ಷಗಳಲ್ಲಿ ಶೇಕಡಾ 90ರಷ್ಟು ಏರಿಕೆಯಾಗಿದ್ದು, ಪರಿಶಿಷ್ಟರು, ಲಿಂಗಾಯತರು ಹಾಗೂ ಇತರರ ಸಂಖ್ಯೆ ಎಷ್ಟು ಏರಿಕೆಯಾಗಿದೆ? ಇಲ್ಲಿದೆ ಡಿಟೇಲ್ಸ್...
Apr 23, 2025, 6:42 AM IST
ಕಾಂತರಾಜು ಆಯೋಗವು ಹಲವು ಮಾನದಂಡಗಳನ್ನಿಟ್ಟುಕೊಂಡು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡಿದೆಯೇ ಹೊರತು, ಯಾವುದೇ ರೀತಿಯ ಜಾತಿಗಣತಿ ಮಾಡಿಲ್ಲ. ಹೀಗಾಗಿ ಕಾಂತರಾಜು ವರದಿಯಲ್ಲಿರುವ ಗೊಂದಲಗಳನ್ನು ಸರ್ಕಾರ ನಿವಾರಿಸುವ ಕೆಲಸ ಮೊದಲು ಮಾಡಬೇಕು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕೋರಿದರು.
Apr 22, 2025, 6:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗೆ ಯಾವ ಆಪತ್ತೂ ಬಂದಿಲ್ಲ. ಸಿಎಂ ಕುರ್ಚಿ ಸುರಕ್ಷಿತವಾಗಿದೆ ಎಂದು ಹೇಳಿರುವ ವಿಧಾನಪರಿಷತ್ ಸದಸ್ಯ ಡಾ। ಯತೀಂದ್ರ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.
Apr 21, 2025, 5:19 AM IST
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲಪ್ರತಿ ತಮ್ಮ ಬಳಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆರ್. ಅಶೋಕ್ ಅವರ ಆರೋಪವನ್ನು ಸುಳ್ಳು ಎಂದು ತಳ್ಳಿಹಾಕಿದ ಸಿಎಂ, ಸಚಿವ ಸಂಪುಟದಲ್ಲಿ ಚರ್ಚಿಸಿ ವರದಿ ಮಂಡಿಸಲಾಗಿದೆ ಎಂದರು.
Apr 20, 2025, 10:28 PM IST
ರಾಜ್ಯದಲ್ಲಿ ಜಾತಿ ಗಣತಿ ಹೆಸರಿನಲ್ಲಿ ರಾಜ್ಯವನ್ನು ಹಾಳು ಮಾಡಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
Apr 20, 2025, 8:41 PM IST
ರಾಜ್ಯದಲ್ಲಿ ಜಾತಿಗಣತಿ ತಕ್ಷಣ ಮಾಡೋ ಅಂತ ವಿಚಾರ ಅಲ್ಲ, ಸಮಯ ತೆಗೆದುಕೊಳ್ಳುತ್ತೆ, ಸೂಕ್ಷ್ಮ ವಿಚಾರ ಈ ವಿಚಾರದಲ್ಲಿ ಇನ್ನೂ ಸರಿಯಾದ ನಿರ್ಧಾರ ಆಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
Apr 20, 2025, 4:47 PM IST
ಪ್ರಜಾಪ್ರಭುತ್ವದ ಸಮಾನತೆಯ ಆಶಯಕ್ಕೆ ಪೂರಕವಾಗಿ ನಡೆದಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಯಿಂದ ರಾಜ್ಯದ ಬಹುಸಂಖ್ಯಾತ ದುರ್ಬಲ ವರ್ಗದವರಿಗೆ ಸಹಾಯ ಆಗಲಿದೆ. ಇದಕ್ಕೆ ವಿರೋಧ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
Apr 20, 2025, 5:08 AM IST
ಜಾತಿ ಗಣತಿಯಲ್ಲಿ ಭೋವಿ ಸಮುದಾಯದವರು ತಮ್ಮ ಜಾತಿಯನ್ನು 'ಭೋವಿ' ಮತ್ತು ಉಪಜಾತಿಯನ್ನು 'ವಡ್ಡರ್' ಎಂದು ಬರೆಸಬೇಕೆಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಕರೆ ನೀಡಿದ್ದಾರೆ. ಸಮುದಾಯದ ಸದಸ್ಯರಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಮುಂದಿನ ಪೀಳಿಗೆಗೆ ಅನುಕೂಲ ಕಲ್ಪಿಸಬೇಕೆಂದು ಅವರು ಹೇಳಿದರು.
Apr 19, 2025, 9:38 PM IST
ರಾಜ್ಯದಲ್ಲಿ ಅವರವರ ಜಾತಿಯನ್ನ ಪಟ್ಟಿ ಮಾಡಿ ಕೂಡಿಸಿದರೆ 15 ರಿಂದ 20 ಕೋಟಿ ಜನಸಂಖ್ಯೆ ಬರುತ್ತೆ, ಇದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಷ್ಟೇ, ಕೆಲವರು ಸಮೀಕ್ಷೆ ಅವೈಜ್ಞಾನಿಕ ಅನ್ನೋದು ಸರಿಯಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಮೀಕ್ಷೆ ವಿರೋಧಿಗಳಿಗೆ ಟಾಂಗ್ ನೀಡಿದರು.
Apr 19, 2025, 8:39 AM IST
ಜಾತಿ ಗಣತಿ ವರದಿಯು ಜಟಿಲ ಸಮಸ್ಯೆಯಾಗಿದ್ದು, ತೀರ್ಮಾನ ತೆಗೆದುಕೊಳ್ಳಲು ಒಂದು ವರ್ಷ ಬೇಕಾಗಬಹುದು. ವರದಿಯಲ್ಲಿ ಶಿಫಾರಸು ಮಾಡಿರುವಂತೆ ಮೀಸಲಾತಿ ಪ್ರಮಾಣ ಹೆಚ್ಚಿಸುವುದು ಸದ್ಯಕ್ಕೆ ಸಾಧ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹಲವು ಜಾತಿಗಳು ತಮ್ಮ ಜನಸಂಖ್ಯೆಯ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವುದರಿಂದ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದೆ.
Apr 19, 2025, 7:01 AM IST
ಜಾತಿ ಗಣತಿ ವರದಿ ಬಗ್ಗೆ ಯಾವುದೇ ಸಚಿವರಿಂದ ವಿರೋಧ ವ್ಯಕ್ತವಾಗಿಲ್ಲ ಮತ್ತು ಯಾರ ನಡುವೆಯೂ ಭಿನ್ನಾಭಿಪ್ರಾಯಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಈ ವಿಚಾರ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.
Apr 18, 2025, 9:14 PM IST
ಜಾತಿ ಗಣತಿ ವರದಿ ತರಾತುರಿಯಲ್ಲಿ ಅಂಗೀಕಾರ ಮಾಡುವುದಿಲ್ಲ. ವರದಿಯ ಸಾಧಕ- ಬಾಧಕಗಳ ಬಗ್ಗೆ ಚರ್ಚೆ ಮಾಡಿಯೇ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
Apr 18, 2025, 6:13 PM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗ್ಯಾಂಗ್ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಒಪ್ಪಬಾರದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿ ಹೋಗಿದ್ದಾರೆ, ಜಯಪ್ರಕಾಶ್ ಹೆಗ್ಡೆ ವರದಿಯನ್ನು ನಕಲಿ ಎಂದು ತಿಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
Apr 18, 2025, 7:05 AM IST
ಜಾತಿಗಣತಿ ವರದಿ ಕುರಿತು ಸಚಿವರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪುಟ ಸಭೆಯನ್ನು ಮುಂದೂಡಿದ್ದಾರೆ. ಲಿಂಗಾಯತ ಮತ್ತು ಒಕ್ಕಲಿಗ ಸಚಿವರು ವರದಿಯಲ್ಲಿನ ಜಾತಿ ವಿಂಗಡಣೆ ಮತ್ತು ಆರ್ಥಿಕ ಮಾನದಂಡಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.