Karnataka News Live: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ್ ಮೂರ್ತಿಗೆ ವರದಾನವಾದ ChatGPT; ಇಂಚಿಂಚೂ ಮಾಹಿತಿ ಕೊಟ್ಟ ಸಾಧಕ!
Jun 19 2025, 06:53 AM ISTಬೆಂಗಳೂರು: ರಾಜ್ಯದಲ್ಲಿ ಅತಿಹೆಚ್ಚು ಅಪರಾಧ ಕೃತ್ಯಗಳನ್ನು ನಡೆಸುತ್ತಿ ರುವುದು ಆರ್ಎಸ್ಎಸ್ ಸಂಘಟನೆ ಮತ್ತು ಬಜರಂಗದಳ ದವರು ಎಂಬ ವಿವಾದಾತ್ಮಕ ಹೇಳಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿ ಜೆಎಂ ಕೋರ್ಟ್) ನೋಟಿಸ್ ಜಾರಿಗೊಳಿಸಿದೆ. ಅವಹೇಳನಕಾರಿ ಹೇಳಿಕೆ ನೀಡುವ ಮುಖಾಂತರ ಆರ್ ಎಸ್ಎಸ್ ಸಂಘಟನೆ ಗೌರವಕ್ಕೆ ಧಕ್ಕೆ ತಂದು ಮಾನನಷ್ಟ ಉಂಟು ಮಾಡಿದ ಆರೋಪದ ಮೇಲೆ ಬುಧವಾರ ಆರ್ ಎಸ್ಎಸ್ಎಸ್ ಕಾರ್ಯಕರ್ತ ಹಾಗೂ ವಕೀಲ ಎನ್.ಕಿರಣ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂ.26ಕ್ಕೆ ಮುಂದೂಡಿತು.