ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣದಲ್ಲಿ ಆರೋಪಿ ಅನುರಾಧ ಮುತ್ತಪ್ಪ ರೈಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪೊಲೀಸರ ತನಿಖೆಯಲ್ಲಿ ಹೊಸ ತಿರುವುಗಳು ಕಂಡುಬಂದಿದ್ದು, ರಿಕ್ಕಿ ರೈ ಸ್ವಯಂ ದಾಳಿ ಮಾಡಿಸಿಕೊಂಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಗನ್‌ಮ್ಯಾನ್ ವಿಠ್ಠಲ್ ಮೇಲೆ ಪೊಲೀಸರ ಅನುಮಾನ ಹೆಚ್ಚಾಗಿದೆ.
state | Apr 22, 2025, 1:35 PM IST
ಬೆಂಗಳೂರಿನ ರೋಡ್ ರೇಜ್ ಪ್ರಕರಣದಲ್ಲಿ ಐಎಎಫ್ ಅಧಿಕಾರಿ ಮತ್ತು ಬೈಕ್ ಸವಾರ ಇಬ್ಬರೂ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. CCTV ದೃಶ್ಯಾವಳಿಗಳು ಘಟನೆಯ ಬಗ್ಗೆ ಹೊಸ ತಿರುವುಗಳನ್ನು ನೀಡುತ್ತಿವೆ. ಇಬ್ಬರ ನಡುವಿನ ಜಗಳಕ್ಕೆ ನಿಖರ ಕಾರಣ ತಿಳಿಯಲು ಹೆಚ್ಚಿನ ತನಿಖೆ ಅಗತ್ಯ.
state | Apr 22, 2025, 12:36 PM IST
ಸೋಷಿಯಲ್ ಮೀಡಿಯಾ ಸೆನ್ಸೇಷನ್ ನಟಿ ಉರ್ಫಿ ಜಾವೇದ್ ಅರೆಸ್ಟ್ ಆಗಿರುವಂಥ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಅಷ್ಟಕ್ಕೂ ಆಗಿದ್ದೇನು?
Cine World | Apr 21, 2025, 6:25 PM IST
ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ರಿಕ್ಕಿ ರೈ ಅವರ ಕಾರು ಚಾಲಕ ಜಿ. ಬಸವರಾಜು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
state | Apr 21, 2025, 5:58 PM IST
ಬೆಂಗಳೂರಿನಲ್ಲಿ ವಾಯುಪಡೆಯ ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್ ಅವರ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿದ್ದಾನೆ. ಏರ್ಪೋರ್ಟ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಕಾರ್ ಡೋರ್ ಬೈಕ್‌ಗೆ ತಾಕಿದ್ದೇ ಗಲಾಟೆಗೆ ಕಾರಣ ಎನ್ನಲಾಗಿದೆ.
News | Apr 21, 2025, 4:35 PM IST
ಮಾಜಿ ಡಿಜಿ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಪುತ್ರಿ ಕೃತಿ ತಲೆನೋವಾಗಿದ್ದಾಳೆ. ಮದ್ಯಪಾನ ಮಾಡುತ್ತಿದ್ದ ಕೃತಿಯನ್ನು ಪೊಲೀಸರು ಬಂಧಿಸಿದ್ದು, ಮೆಡಿಕಲ್ ಚೆಕ್ ಅಪ್ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾಳೆ. ತಾಯಿ ಪಲ್ಲವಿ ಮಗಳನ್ನು ಪಾರು ಮಾಡಲು ಯತ್ನಿಸುತ್ತಿದ್ದಾರೆ.
state | Apr 21, 2025, 1:54 PM IST
36 ವರ್ಷಗಳ ಕಾಲ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ (68) ಅವರನ್ನು ಪತ್ನಿ ಮತ್ತು ಪುತ್ರಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಆಸ್ತಿ ವಿಚಾರ ಸಂಬಂಧ ಕೊಲೆ ನಡೆದಿದೆ ಎಂದು ಶಂಕಿಸಲಾಗಿದ್ದು, ಪತ್ನಿಗೆ ಮಾನಸಿಕ ಕಾಯಿಲೆ ಇದೆ ಎನ್ನಲಾಗಿದೆ.
state | Apr 21, 2025, 1:08 PM IST
ಭದ್ರಾವತಿ ತಾಲೂಕಿನ ಹುಣಸಘಟ್ಟದಲ್ಲಿ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ. ವರದಕ್ಷಿಣೆ ಕಿರುಕುಳದ ಆರೋಪದ ಮೇಲೆ ಪತಿ ಮತ್ತು ಮಾವನ ಬಂಧನ, ತವರು ಮನೆಯವರಿಂದ ಪ್ರತಿಭಟನೆ.
Video | Apr 21, 2025, 11:21 AM IST
ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನ್‌ಲೈನ್‌ನಲ್ಲಿ ಉದ್ಯೋಗ ಹುಡುಕುತ್ತಿದ್ದ ಯುವತಿಗೆ ವಂಚಕರು ಬಲೆ ಬೀಸಿದ್ದಾರೆ.
CRIME | Apr 21, 2025, 10:41 AM IST
ಯಾದಗಿರಿ ಜಿಲ್ಲೆಯ ಸಂಗ್ವಾರ ಗ್ರಾಮದಲ್ಲಿ ಕಳೆದ ಒಂದು ವರ್ಷದಲ್ಲಿ ಹಲವಾರು ಜನರು ಕಿಡ್ನಿ, ಲಿವರ್ ಮತ್ತು ಉಸಿರಾಟದ ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ. ಕೈಗಾರಿಕಾ ಪ್ರದೇಶದಿಂದ ಹೊರಹೊಮ್ಮುವ ತ್ಯಾಜ್ಯ ಮತ್ತು ದುರ್ನಾತದಿಂದ ಈ ಸಾವುಗಳಿಗೆ ಕಾರಣ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
state | Apr 21, 2025, 10:11 AM IST
ಭಟ್ಕಳದ ವೆಂಕಟಾಪುರದಲ್ಲಿ ಗರ್ಭಿಣಿ ಹಸುವನ್ನು ಕಡಿದು ಮಾಂಸ ಮಾಡಿ, ಭ್ರೂಣವನ್ನು ಬಿಸಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹನೀಫಾಬಾದ್ ನಿವಾಸಿ ಮೊಹಮ್ಮದ್ ಇಬ್ರಾಹಿಂ ಹವ್ವಾ ಎಂದು ಗುರುತಿಸಲಾದ ಆರೋಪಿಯನ್ನು ಎರಡೇ ದಿನಗಳಲ್ಲಿ ಪತ್ತೆ ಹಚ್ಚಲಾಗಿದೆ. ಈ ಘಟನೆ ಹಿಂದೂ ಸಂಘಟನೆಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
CRIME | Apr 21, 2025, 9:02 AM IST
ಉತ್ತರಪ್ರದೇಶದ ಓರ್ವ ಟೆಕ್ಕಿ ಕೌಟುಂಬಿಕ ಸಮಸ್ಯೆಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಪತ್ನಿ ಮತ್ತು ಆಕೆಯ ಕುಟುಂಬದವರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡಿದ್ದಾರೆ.
India | Apr 21, 2025, 6:09 AM IST
ವಿವೇಕನಗರದಲ್ಲಿ ನಿವೃತ್ತ ಸೈನಿಕ ಬೋಲು ಅರಬ್ ಅವರನ್ನು ಅತಿಯಾದ ಶಿಸ್ತಿನಿಂದ ಬೇಸತ್ತು ಪತ್ನಿ ಮತ್ತು ಪುತ್ರ ಕೊಲೆ ಮಾಡಿದ್ದಾರೆ. ನಿದ್ದೆ ಮಾತ್ರೆ ಬೆರೆಸಿ ಊಟ ನೀಡಿ, ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
CRIME | Apr 21, 2025, 5:53 AM IST
ಕೆ.ಆರ್.ಪುರದಲ್ಲಿ ಕೋಟ್ಯಂತರ ರು. ಆಸ್ತಿ ಹೊಂದಿದ್ದ ಮಂಗಳಮುಖಿ ತನುಶ್ರೀಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಪತಿ ಜಗದೀಶ್ ನಾಪತ್ತೆಯಾಗಿದ್ದು, ಆತನೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
CRIME | Apr 21, 2025, 5:12 AM IST
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರೇ ಕೊಲೆ ರಹಸ್ಯವನ್ನು ಬಾಯಿಬಿಟ್ಟಿದ್ದಾರೆ. ಗನ್ ಪಾಯಿಂಟ್, ಖಾರದ ಪುಡಿ, ಅಡುಗೆ ಎಣ್ಣೆ, ಹಗ್ಗ, ಚಾಕು ಬಳಕೆಯ ಬಗ್ಗೆಯೂ ಹೇಳಿದ್ದಾರೆ.
CRIME | Apr 20, 2025, 11:09 PM IST