Apr 29, 2025, 5:57 AM IST
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂಬ ಆರೋಪದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದ್ದು, ಸಚಿವರು ನೀಡಿರುವ ಹೇಳಿಕೆ ಗೊಂದಲಮಯವಾಗಿದೆ. ಯುವತಿಯೊಬ್ಬರು ತಮ್ಮನ್ನು ಹನಿಟ್ರ್ಯಾಪ್‌ಗೆ ಯತ್ನಿಸಿದ್ದಾರೆ ಎಂದು ಆರೋಪಿಸಿರುವ ರಾಜಣ್ಣ, ಘಟನೆ ನಡೆದ ದಿನಾಂಕ ಸೇರಿದಂತೆ ಹಲವು ವಿವರಗಳನ್ನು ನೆನಪಿಲ್ಲ ಎಂದು ಹೇಳಿದ್ದಾರೆ.
Apr 28, 2025, 3:35 PM IST
ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಕನ್ನಡಿಗರ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಕುಟುಂಬಕ್ಕೆ ಉಚಿತ ಚಿಕಿತ್ಸೆ ನೀಡಲಾಗುವುದು. ಸಂಸದ ತೇಜಸ್ವಿ ಸೂರ್ಯ ಭರತ್ ಭೂಷಣ್ ಅವರ ಕುಟುಂಬಕ್ಕೆ 10 ಲಕ್ಷ ರೂ. ಹಣ ನೆರವು ನೀಡುವುದಾಗಿ ತಿಳಿಸಿದ್ದಾರೆ.
Apr 28, 2025, 1:13 PM IST
ನಾಳೆಯಿಂದ ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಆರಂಭವಾಗಲಿದ್ದು, ಜನಿವಾರ, ಕರಿಮಣಿ, ಕಾಲುಂಗುರಕ್ಕೆ ಕುತ್ತು ಬಂದಿದೆ. ಆದರೆ ಅಭ್ಯರ್ಥಿಗಳು ನಿರಾಳರಾಗಿದ್ದಾರೆ. ಏನಿದು?
Apr 28, 2025, 12:16 PM IST
ಮಾದಿಗ ಸಮುದಾಯದವರು ಕಡ್ಡಾಯವಾಗಿ ಜಾತಿ ಕಾಲಂನಲ್ಲಿ ಮಾದಿಗ ಎಂದೇ ನಮೂದಿಸುವಂತೆ ಮಾಜಿ ಸಚಿವ ಎಚ್.ಆಂಜನೇಯ ಕರೆ ನೀಡಿದರು.
Apr 28, 2025, 11:34 AM IST
ಬಿಜೆಪಿಯವರು ಬರೀ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅಭಿವೃದ್ಧಿ ಮೂಲಕವೇ ಆರೋಪಗಳಿಗೆ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Apr 28, 2025, 11:24 AM IST
ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬ ಪ್ರಭಾವಿ ಸಚಿವರಿದ್ದಾರೆ. ಈ ಸಚಿವ ಸಾಹೇಬರು ತುಮಕೂರು ಗಡಿ ಮುಟ್ಟಿದಾಗಲೆಲ್ಲ ಹೂಗಳ ನಗು ಮುಖ ಅವರನ್ನು ಸ್ವಾಗತಿಸುವುದು ಕಡ್ಡಾಯ.
Apr 28, 2025, 10:51 AM IST
ಪಹಲ್ಗಾಂ ಉಗ್ರರ ದಾಳಿಗೆ ಪ್ರತೀಕಾರವಾಗಿ ಯುದ್ಧ ಸಾರುವುದು ಅನಗತ್ಯ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ನಾಯಕರು ಯುದ್ಧವನ್ನೇ ಸಾರಿದ್ದಾರೆ.
Apr 28, 2025, 10:30 AM IST
ನಾನು ಅನಿವಾರ್ಯವಾದಾಗ ಯುದ್ಧ ಮಾಡಬೇಕು ಎಂದಿದ್ದೇನೆಯೇ ಹೊರತು ಯುದ್ಧ ಮಾಡಲೇಬಾರದು ಎಂದು ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
Apr 28, 2025, 9:12 AM IST
ಸದನದಿಂದ ಶಾಸಕರ ಅಮಾನತು ಕ್ರಮ ಪಾಠವೇ ಹೊರತು, ಶಿಕ್ಷೆ ಅಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದ್ದಾರೆ.
Apr 28, 2025, 5:41 AM IST
ಚಿತ್ರರಂಗದಿಂದ ನಿವೃತ್ತರಾದವರೆಲ್ಲ ಸಣ್ಣಪುಟ್ಟ ಚಿಲ್ರೆ ಸ್ಟೇಟ್‌ಮೆಂಟ್ ಕೊಡಬೇಡಿ ಎಂದು ಶಿವಕುಮಾರ್ ಗುಡುಗಿದ್ದಾರೆ.
Apr 27, 2025, 5:22 PM IST
ಪಾಕಿಸ್ತಾನದ ಜಿಯೋ ಟಿವಿಯಲ್ಲಿ ಯುದ್ಧದ ಕುರಿತು ಸಿದ್ದರಾಮಯ್ಯ ಅವರನ್ನು ಹೊಗಳಲಾಗಿದೆ. ಇದರ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಹೇಳಿದ್ದೇನು ಕೇಳಿ...
Apr 27, 2025, 3:37 PM IST
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂಬ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯುದ್ಧವು ಯಾವುದೇ ದೇಶದ ಅಂತಿಮ ಆಯ್ಕೆಯಾಗಿದ್ದು, ಶತ್ರುವನ್ನು ಮಣಿಸುವ ಇತರ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ತಮ್ಮ ಸಂಪೂರ್ಣ ಸಹಕಾರವಿದೆ ಎಂದೂ ಅವರು ತಿಳಿಸಿದ್ದಾರೆ.
Apr 27, 2025, 11:01 AM IST
ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Apr 27, 2025, 8:37 AM IST
ಪೆಟ್ರೋಲ್-ಡೀಸೆಲ್ ಮೂಲಕ ₹36.58 ಲಕ್ಷ ಕೋಟಿ ಮೊತ್ತವನ್ನು ಕೇಂದ್ರ ಸರ್ಕಾರ ಸಂಗ್ರಹಿಸುತ್ತಿದೆ. ಇದು ಗ್ಯಾರಂಟಿಗಳಂತಹ ಯೋಜನೆಗಳ ಮೂಲಕ ಜನರನ್ನೇನೂ ಮರಳಿ ತಲುಪುತ್ತಿಲ್ಲ. ಹಾಗಾದರೆ ಈ ಹಣ ಎಲ್ಲಿ ಹೋಗುತ್ತಿದೆ ಎಂಬುದೇ ಯಕ್ಷ ಪ್ರಶ್ನೆ. ಕಳೆದ ಒಂದು ವರ್ಷದಲ್ಲಿ ಸಸ್ಯಾಹಾರಿ ಊಟದ ಬೆಲೆ ಶೇ.57ರಷ್ಟು ಏರಿಕೆಯಾಗಿದೆ.
Apr 27, 2025, 8:03 AM IST
ಹೈಕೋರ್ಟ್ ಆದೇಶದಂತೆ ಉಬರ್ ಇಂಡಿಯಾ ಸಿಸ್ಟಂ ಸೇರಿ ಇನ್ನಿತರ ಆ್ಯಪ್ ಆಧಾರಿತ ಸಂಸ್ಥೆಗಳಿಂದ ನೀಡಲಾಗುತ್ತಿರುವ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.