Asianet Suvarna News Asianet Suvarna News

ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 8 ತಿಂಗಳ ಗರ್ಭಿಣಿ ಸೇರಿದಂತೆ ಐವರು ಸ್ಥಳದಲ್ಲೇ ಸಾವು!

ಇಂದು  ಬೆಳಗ್ಗೆ 6 30. ಕ್ಕೆ ಸಿಲಿಂಡರ್ ಸ್ಫೋಟಗೊಂಡು 6 ಮನೆಗಳು ಕುಸಿದಿದ್ದು, ಈ ಸ್ಫೋಟದಿಂದಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈಗಾಗಲೇ 6 ಮಂದಿಯನ್ನು ಹೊರತೆಗೆಯಲಾಗಿದ್ದು, ಇನ್ನು ಮೂವರು ಅವಶೇಷಗಳಡಿ ಸಿಲುಕಿದ್ದು, ಅಗ್ನಿಶಾಮಕ ಸದಳದಿಂದ ರಕ್ಷಣಾ ಕಾರ್ಯ ಮುಂದುವರೆದಿದೆ.

gas cylinder blast

ಬೆಂಗಳೂರು(ಅ.16): ಗ್ಯಾಸ್ ಸಿಲಿಂಡರ್ ಸ್ಫೋಟಿಸಿ 6 ಮನೆಗಳು ಕುಸಿದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಈಜಿಪುರದಲ್ಲಿ ನಡೆದಿದೆ.

ಇಂದು  ಬೆಳಗ್ಗೆ 6 30. ಕ್ಕೆ ಸಿಲಿಂಡರ್ ಸ್ಫೋಟಗೊಂಡು 6 ಮನೆಗಳು ಕುಸಿದಿದ್ದು, ಈ ಸ್ಫೋಟದಿಂದಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈಗಾಗಲೇ 6 ಮಂದಿಯನ್ನು ಹೊರತೆಗೆಯಲಾಗಿದ್ದು, ಇನ್ನು ಮೂವರು ಅವಶೇಷಗಳಡಿ ಸಿಲುಕಿದ್ದು, ಅಗ್ನಿಶಾಮಕ ಸದಳದಿಂದ ರಕ್ಷಣಾ ಕಾರ್ಯ ಮುಂದುವರೆದಿದೆ.

ಮೃತರನ್ನು ಕಲಾವತಿ(68), ರವಿಚಂದ್ರನ್(46), ಹರಿಪ್ರಸಾದ್(19), ಪವನ್ ಕಲ್ಯಾಣ(19), ಅಶ್ವಿನಿ (ಗರ್ಭಿಣಿ) ಎಂದು ಗುರುತಿಸಲಾಗಿತ್ತು. ಸ್ಥಳಕ್ಕೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us:
Download App:
  • android
  • ios