ಇಸ್ರೋ ಜಿಸ್ಯಾಟ್-7A ಉಪಗ್ರಹ ಉಡಾವಣೆ ಯಶಸ್ವಿ!

ಯಶಸ್ವಿಯಾಗಿ ಉಡಾವಣೆಗೊಂಡ ಇಸ್ರೋದ ಜಿಸ್ಯಾಟ್-7A ಉಪಗ್ರಹ| ಸೇನೆಗೆ ಸಂಪರ್ಕ ಜಾಲ ಒದಗಿಸಲು ನೆರವಾಗಲಿದೆ ಜಿಸ್ಯಾಟ್-7A| ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಪಗ್ರಹ ಉಡಾವಣೆ| ಜಿಎಸ್‌ಎಲ್‌ವಿ-ಎಫ್ 11 ರಾಕೆಟ್ ಮೂಲಕ ಭೂಸ್ಥಿರ ಕಕ್ಷೆಗೆ ರಾಕೆಟ್| ಗ್ರಾಹಕರಿಗೆ ಕ್ಯು-ಬ್ಯಾಂಡ್ ಸೇವೆಯನ್ನು ಕಲ್ಪಿಸುವಲ್ಲಿ ನೆರವಾಗಲಿದೆ

ISRO Successfully Launched GSAT-7A Satellite

ಶ್ರೀಹರಿಕೋಟಾ(ಡಿ.19): ಸಂಪರ್ಕ ಜಾಲ ಒದಗಿಸಲು ಸೇನೆಗೆ ನೆರವಾಗಲಿರುವ ಜಿಸ್ಯಾಟ್-7ಎ ಉಪಗ್ರಹವನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. 

ಇಂದು ಸಂಜೆ 4.10ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಪಗ್ರಹ ಉಡಾವಣೆ ಮಾಡಲಾಗಿದ್ದು, ವಾಯುಪಡೆಯ ಸಂಪರ್ಕ ಹಾಗೂ ಸಂವಹನ ಸಾಮರ್ಥ್ಯಗಳನ್ನು ಈ ಉಪಗ್ರಹದ ಸಹಾಯದಿಂದ ಮತ್ತಷ್ಟು ಹೆಚ್ಚಿಸಬಹುದಾಗಿದೆ.

ದೇಶದ 35ನೇ ಸಂವಹನ ಉಪಗ್ರಹ ಇದಾಗಿದ್ದು,  2,250 ಕೆ.ಜಿ ತೂಕ ಹೊಂದಿದೆ.  ಜಿಎಸ್ ಎಲ್ ವಿ-ಎಫ್ 11 ರಾಕೆಟ್ ಮೂಲಕ ಭೂಸ್ಥಿರ ಕಕ್ಷೆಗೆ ಇದನ್ನು ಸೇರಿಸಲಾಗಿದೆ.

8 ವರ್ಷಗಳ ಕಾಲ ಕಾರ್ಯನಿರ್ವಹಿಸಲಿರುವ ಈ ಉಪಗ್ರಹ ಭಾರತೀಯ ಭೂ ಪ್ರದೇಶದಲ್ಲಿ ಗ್ರಾಹಕರಿಗೆ ಕ್ಯು-ಬ್ಯಾಂಡ್ ಸೇವೆಯನ್ನು ಕಲ್ಪಿಸುವಲ್ಲಿ ನೆರವಾಗಲಿದೆ ಎಂದು ಇಸ್ರೋ ತಿಳಿಸಿದೆ. 

ರೇಡಾರ್ ಸ್ಟೇಷನ್ಸ್ ಗಳ, ಏರ್ ಬೊರ್ನ್ ವಾರ್ನಿಂಗ್ ಅಂಡ್ ಕಂಟ್ರೋಲ್ ಏರ್ ಕ್ರಾಫ್ಟ್ ಮತ್ತು ವಾಯುನೆಲೆಗಳ ಮಧ್ಯೆ ಸುಧಾರಿತ ಸಂಪರ್ಕ ಜಾಲ ಒದಗಿಸಲು ಉಪಗ್ರಹ ಉಡಾವಣೆ ಸೇನೆಗೆ ಸಹಕಾರಿಯಾಗಲಿದೆ.

Latest Videos
Follow Us:
Download App:
  • android
  • ios