ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಸಿದ್ಧವಾಗಿರುವ ಟಿಕ್ ಟಾಕ್ ಆ್ಯಪ್ ಗೆ ರಾಜ್ಯದಲ್ಲಿಯೂ ಸಂಕಷ್ಟ ಎದುರಾಗಿದೆ. ಮಹಿಳಾ ಆಯೋಗ ಆ್ಯಪ್ ನಿಷೇಧಕ್ಕೆ ಕೋರ್ಟ್ ಮೊರೆ ಹೋಗಲು ಚಿಂತನೆ ನಡೆಸಿದೆ. 

ಬೆಂಗಳೂರು : ಅತ್ಯಂತ ಜನಪ್ರಿಯ ಆ್ಯಪ್ ಟಿಕ್ ಟಾಕ್ ಬ್ಯಾನ್ ಮಾಡುವಂತೆ ಮಹಿಳಾ ಆಯೋಗ ಕೋರ್ಟ್ ಮೊರೆ ಹೋಗಲು ನಿರ್ಧಾರ ಮಾಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಟಿಕ್ ಟಾಕ್ ವಿರುದ್ಧ ಕಾನೂನು ಸಮರ ಸಾರಲು ಮಹಿಳಾ ಆಯೋಗ ಸಜ್ಜಾಗಿದ್ದು, ಮಹಿಳೆಯರ ವಿಡಿಯೋ ಗಳನ್ನು ಅಸಭ್ಯವಾಗಿ ಬಳಕೆ ಮಾಡಲಾಗುತ್ತದೆ ಎಂದು ಆರೋಪಿಸಿದೆ. ‌

ಇದರಿಂದ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯಡಿಯಲ್ಲಿ ಟಿಕ್ ಟಾಕ್ ಬ್ಯಾನ್ ಮಾಡುವಂತೆ ಅರ್ಜಿ ಸಲ್ಲಿಸಲು ಮಹಿಳಾ ಆಯೋಗ ಮುಂದಾಗಿದ್ದಾಗಿ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಹೇಳಿದ್ದಾರೆ. 

ಟಿಕ್ ಟಾಕ್ ಸಂಬಂಧ ಮಹಿಳಾ ಆಯೋಗ ಸಾಕಷ್ಟು ಪ್ರಮಾಣದಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲು ಮುಂದಾಗಿದೆ.