Asianet Suvarna News Asianet Suvarna News

ಟೋಕಿಯೋ ಪ್ಯಾರಾಲಿಂಪಿಕ್ಸ್‌: ಭಾರತ ತಂಡಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ

* ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ

* ಭಾರತೀಯ ಪ್ಯಾರಾಥ್ಲೀಟ್‌ಗಳಿಗೆ ಶುಭ ಹಾರೈಸಿದ ಮೋದಿ

* 54 ಪ್ಯಾರಾಥ್ಲೀಟ್‌ಗಳು ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗಿ

PM Narendra Modi extends best wishes to Indian contingent on beginning of Tokyo Paralympics 2020 kvn
Author
New Delhi, First Published Aug 24, 2021, 6:33 PM IST

ನವದೆಹಲಿ(ಆ.24): ಕೊರೋನಾ ಆತಂಕದ ನಡುವೆಯೇ 16ನೇ ಆವೃತ್ತಿಯ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿ ಭಾರತೀಯ ಪ್ಯಾರಾಥ್ಲೀಟ್‌ಗಳಿಗೆ ಶುಭ ಹಾರೈಸಿದ್ದಾರೆ

ಭಾರತದ ಧ್ವಜಧಾರಿ ಆಯ್ಕೆಯಾಗಿದ್ದ 2016ರ ರಿಯೋ ಪ್ಯಾರಾಲಿಂಪಿಕ್ಸ್‌ ಚಿನ್ನ ವಿಜೇತ ಮರಿಯಪ್ಪನ್‌ ತಂಗವೇಲು ಕೋವಿಡ್‌ ಸೋಂಕಿತನ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಉದ್ಘಾಟನಾ ಸಮಾರಂಭದಿಂದ ಹಿಂದೆ ಸರಿದಿದ್ದರು. ಇವರ ಬದಲಿಗೆ ಶಾಟ್‌ ಪುಟ್‌ ಪಟು ತೆಕ್‌ ಚಾಂದ್‌ ಭಾರತದ ಧ್ವಜ ಹಿಡಿದು ಪಥಸಂಚಲನದಲ್ಲಿ ಮುನ್ನಡೆದರು. ಭಾರತಕ್ಕೆ ಶುಭಹಾರೈಕೆಗಳು. ನಮ್ಮ ಪ್ಯಾರಾಲಿಂಪಿಕ್ಸ್‌ ಪಟುಗಳು ಉತ್ತಮ ಪ್ರದರ್ಶನ ತೋರುವ ಮೂಲಕ ಇತರರಿಗೂ ಸ್ಪೂರ್ತಿಯನ್ನುಂಟು ಮಾಡಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಟೋಕಿಯೋ ಪ್ಯಾರಾಲಿಂಪಿಕ್ಸ್‌ಗಿಂದು ಚಾಲನೆ

ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಹಿಂದೆಂದಿಗಿಂತಲೂ ಅತಿಹೆಚ್ಚು ಅಂದರೆ 54 ಪ್ಯಾರಾಥ್ಲೀಟ್‌ಗಳು ಪಾಲ್ಗೊಳ್ಳುತ್ತಿದ್ದು, ಹೆಚ್ಚಿನ ಪದಕ ಗೆಲ್ಲುವ ವಿಶ್ವಾಸ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ 7 ಪದಕಗಳನ್ನು ಜಯಿಸಿತ್ತು ಎನ್ನುವುದನ್ನು ಸ್ಮರಿಸಬಹುದಾಗಿದೆ.
 

Follow Us:
Download App:
  • android
  • ios