* ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಪುರುಷರ ಹಾಕಿ ತಂಡ* ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಹಾಕಿ ತಂಡಕ್ಕೆ ಜೈ ಹೋ ಎಂದ ಪ್ರಧಾನಿ ಮೋದಿ* 41 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಹಾಕಿ ತಂಡ

ನವದೆಹಲಿ(ಆ.05): ಭಾರತೀಯ ಹಾಕಿ ತಂಡದ ಗತವೈಭವ ಮತ್ತೆ ಮರಳಿದೆ. ಜರ್ಮನಿ ಎದುರು 5-4 ಅಂತರದ ಗೆಲುವು ದಾಖಲಿಸುವ ಮೂಲಕ ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಹಾಕಿ ತಂಡವು ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದು ಬೀಗಿದೆ. ಭಾರತದ ಈ ರೋಚಕ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರತಿ ಭಾರತೀಯನ ಮನದಲ್ಲಿ ಅಚ್ಚಳಿಯದೇ ಉಳಿಯಬಲ್ಲ ಐತಿಹಾಸಿಕ ದಿನವಿದು. ದೇಶಕ್ಕೆ ಕಂಚಿನ ಪದಕ ಗೆದ್ದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು. ನಿಮ್ಮ ಈ ಸಾಧನೆ ನಮ್ಮ ಯುವಕರಲ್ಲಿ ಹೊಸ ಚೈತನ್ಯ ತುಂಬಿದೆ. ನಮ್ಮ ಹಾಕಿ ತಂಡದ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ.

ಟೋಕಿಯೋ 2020: ಕಂಚು ಗೆದ್ದು, ಭಾರತೀಯರ ಹೃದಯ ಗೆದ್ದ ಹಾಕಿ ಇಂಡಿಯಾ

Scroll to load tweet…

1980ರ ಬಳಿಕ ಭಾರತೀಯ ಹಾಕಿ ತಂಡವು ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ವಿಫಲವಾಗುತ್ತಲೇ ಬಂದಿತ್ತು. ಆದರೀಗ ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಹಾಕಿ ತಂಡವು ಬಲಿಷ್ಠ ಜರ್ಮನಿ ತಂಡಕ್ಕೆ ರೋಚಕವಾಗಿ ಸೋಲುಣಿಸುವ ಮೂಲಕ ಬರೋಬ್ಬರಿ 41 ವರ್ಷಗಳ ಪದಕದ ಬರವನ್ನು ನೀಗಿಸಿದೆ. ಕಂಚಿನ ಪದಕಕ್ಕಾಗಿ ನಡೆದ ಕಾದಾಟದಲ್ಲಿ ಶಕ್ತಿಮೀರಿ ಪ್ರದರ್ಶನ ತೋರುವ ಮೂಲಕ ಪದಕ ಗೆದ್ದಿದ್ದು ಮಾತ್ರವಲ್ಲದೇ ಭಾರತೀಯರ ಹೃದಯ ಗೆಲ್ಲುವಲ್ಲಿ ಹಾಕಿ ತಂಡ ಯಶಸ್ವಿಯಾಗಿದೆ.