ಚಿನ್ನದ ಹುಡುಗನಿಗೆ ತರಬೇತಿ ನೀಡಿದ್ದ ಶಿರಸಿ ಕಾಶಿನಾಥ್‌ಗೆ 10 ಲಕ್ಷ ರೂ. ಬಹುಮಾನ

* ಒಲಿಂಪಿಕ್ಸ್ ಬಂಗಾರದ ಹುಡುಗ  ಕೋಚ್ ಮಾಡಿದ್ದ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಗುರು
* 2015ರಿಂದ 2017ರವರೆಗೆ ನೀರಜ್ ಚೋಪ್ರಾಗೆ ಕೋಚ್ ಮಾಡಿದ್ದ ಶಿರಸಿಯ ಕಾಶೀನಾಥ್
* ಚಿನ್ನದ ವೀರ ನೀರಜ್ ಚೋಪ್ರಾನ ಹಿಂದಿನ ಶಕ್ತಿ ಉತ್ತರ‘ಕನ್ನಡಿಗ
*ಕ್ರೀಡಾ ಸಚಿವ ಡಾ. ನಾರಾಯಣಗೌಡ 10 ಲಕ್ಷ ರೂ. ಬಹುಮಾನ ಘೋಷಣೆ

tokyo olympics gold medalist Neeraj Chopra Coach Sirsi Kashinath Naik gets RS 10 lakh award mah

ಬೆಂಗಳೂರು(ಆ. 08) ಒಲಿಂಪಿಕ್ಸ್ ಚಿನ್ನದ ಹುಡುಗ ನೀರಜ್ ಚೋಪ್ರಾಗೆ ತರಬೇತಿ ನೀಡಿದ ಕನ್ನಡಿಗ ಶಿರಸಿಯ ಕಾಶಿನಾಥ್ ನಾಯ್ಕ್  ಗೆ ಕ್ರೀಡಾ ಸಚಿವ ಡಾ. ನಾರಾಯಣಗೌಡ 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

ಟೋಕಿಯೊ ಓಲಂಪಿಕ್ಸ್ ನಲ ಈಟಿ ಎಸೆತದಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ  ಸಲ್ಲಿಸಿದ್ದಾರೆ.

ಇಂತಹ ಸಾಧನೆಗೆ ಬೆನ್ನೆಲುಬಾದ ಕನ್ನಡಿಗ ಕಾಶಿನಾಥ್ ನಾಯ್ಕ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೂ. 10 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.

ಚಿನ್ನದ ಹುಡುಗನಿಗೆ ತರಬೇತಿ ಕೊಟ್ಟ ಶಿರಸಿಯ  ಕಾಶಿನಾಥ್ ಮಾತು

ಚೋಪ್ರಾಗೆ ತರಬೇತಿ ನೀಡಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಾಶಿನಾಥ್ ನಾಯ್ಕ್. 2010 ರ ಕಾಮನ್ ವೆಲ್ತ್ ನಲ್ಲಿ ಕಾಶಿನಾಥ್ ಈಟಿ ಎಸೆತದಲ್ಲಿ ಕಂಚಿನ ಪದಕ‌ಗಳಿಸಿದ್ದರು.  ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಸ್ವರ್ಣಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ.

ಜಾವೆಲಿನ್ ಥ್ರೋನಲ್ಲಿ ಭಾರತದ ನೀರಜ್‌ಗೆ ಬಂಗಾರದ ಸಾಧನೆ ಮಾಡಲು ಕಾಶಿನಾಥ್ ಶ್ರಮವಿದೆ.ಪ್ರಸ್ತುತ ಪುಣೆಯ ಸೇನಾ ಕ್ರೀಡಾ ಇನ್‌ಸ್ಟಿಟ್ಯೂಟ್‌ನಲ್ಲಿ ತರಬೇತುದಾರರಾಗಿರುವ ಕಾಶಿನಾಥ ಮೂಲತ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದವರು. 

Latest Videos
Follow Us:
Download App:
  • android
  • ios