*  ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು* ಪ್ರೀಕ್ವಾರ್ಟರ್ ಫೈನಲ್‌ನಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಟ್‌  ಸಿಂಧುವಿಗೆ ಜಯ* ಕ್ವಾರ್ಟರ್‌ಫೈನಲ್‌ನಲ್ಲಿ ಅಕಾನೆ ಯಮಗುಚಿ ಎದುರಾಗುವ ಸಾಧ್ಯತೆ

ಟೋಕಿಯೋ(ಜು.29): ರಿಯೋ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದ ಪ್ರೀಕ್ವಾರ್ಟರ್ ಫೈನಲ್‌ನಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಟ್‌ ಎದುರು 21-15, 21-13 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೊದಲ ಸೆಟ್‌ನಲ್ಲಿ ಸಿಂಧು ಆರಂಭದಿಂದಲೇ ಎಚ್ಚರಿಕೆಯ ಆಟ ಪ್ರದರ್ಶಿಸಿದರು. ಕ್ರಮೇಣ ಆಟಕ್ಕೆ ಮುಂದಾದ ಸಿಂಧು ಪಂದ್ಯದ ಮೇಲೆ ಹಿಡಿತ ಸಾಧಿಸುತ್ತಾ ಸಾಗಿದರು. ಒಂದು ಹಂತದಲ್ಲಿ ಸಿಂಧು 16-15 ಅಂಕಗಳ ಮುನ್ನಡೆಯಲ್ಲಿದ್ದರು. ಇದಾದ ಬಳಿಕ ಸತತ 6 ಅಂಕಗಳನ್ನು ಗಳಿಸುವ ಮೂಲಕ ಮೊದಲ ಗೇಮ್‌ ಅನ್ನು 21-15 ಅಂತರದಲ್ಲಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು.

ಟೋಕಿಯೋ 2020: ಹಾಂಕಾಂಗ್ ಆಟಗಾರ್ತಿ ಬಗ್ಗುಬಡಿದು ನಾಕೌಟ್‌ ಹಂತಕ್ಕೇರಿದ ಸಿಂಧು

Scroll to load tweet…

ಇನ್ನು ಎರಡನೇ ಸೆಟ್‌ನಲ್ಲಿ ಸಿಂಧು ಆರಂಭದಲ್ಲೇ 5-0 ಮುನ್ನಡೆ ಸಾಧಿಸುವ ಮೂಲಕ ಉತ್ತಮ ಆರಂಭವನ್ನು ಪಡೆದರು. ಆ ಬಳಿಕವೂ ಡೆನ್ಮಾರ್ಕ್‌ ಆಟಗಾರ್ತಿ ಮೇಲುಗೈ ಸಾಧಿಸದಂತೆ ನೋಡಿಕೊಳ್ಳುವಲ್ಲಿ ಹೈದರಾಬಾದ್‌ ಮೂಲದ ಸಿಂಧು ಯಶಸ್ವಿಯಾದರು. ಅಂತಿಮವಾಗಿ ಸಿಂಧು 21-13 ಅಂಕಗಳ ಅಂತರದಲ್ಲಿ ಎರಡನೇ ಸೆಟ್‌ ಗೆಲ್ಲುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟರು.

Scroll to load tweet…

ಇನ್ನು ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಸಿಂಧು ದಕ್ಷಿಣ ಕೊರಿಯಾದ ಕಿಮ್‌ ಗ್ಯು ಉನ್‌ ಇಲ್ಲವೇ ಜಪಾನ್‌ನ ಅಕಾನೆ ಯಮಗುಚಿ ಅವರನ್ನು ಎದುರಿಸಲಿದ್ದಾರೆ.