ಮುಸ್ಲಿಂ ಸಿಖ್ ಹಿಂದೂ, ಎಲ್ಲರನ್ನೂ ಒಗ್ಗೂಡಿಸುತ್ತಾಳೆ ಸಿಂಧು; ಸೆಹ್ವಾಗ್ ಸೇರಿ ದಿಗ್ಗಜರ ಟ್ವೀಟ್ ಸಲ್ಯೂಟ್!
- ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಿವಿ ಸಿಂಧು ಕಂಚಿನ ಪದಕ ಸಾಧನೆಗೆ ಸಲ್ಯೂಟ್
- ಕೇಂದ್ರ ಸಚಿವರು, ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳಿಂದ ಅಭಿನಂದನೆ
- ಅದ್ಭುತ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ ಸೆಹ್ವಾಗ್
ನವದೆಹಲಿ(ಆ.01): ಪ್ರತಿಷ್ಠಿತ ಟೋಕಿಯೋ ಒಲಿಂಪಿಕ್ಸ್ ಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಕಂಚಿನ ಪದಕ ಗೆದ್ದು ಇತಿಹಾಸ ರಚಿಸಿದ್ದಾರೆ. 2016ರ ರಿಯೋ ಒಲಿಂಪಿಕ್ಸ್, 2021ರ ಟೋಕಿಯೋ ಒಲಿಂಪಿಕ್ಸ್ ಎರಡೂ ಕೂಟದಲ್ಲಿಸಿಂಧೂ ಪದಕ ಗೆದ್ದಿದ್ದಾರೆ. ಈ ಮೂಲಕ ಎರಡು ಒಲಿಂಪಿಕ್ಸ್‌ನಲ್ಲಿ 2 ಪದಕ ಗೆದ್ದ ಭಾರತದ ಮೊದಲ ಮಹಿಳೆ ಅನ್ನೋ ದಾಖಲೆ ಬರೆದಿದ್ದಾರೆ. ಸಿಂಧೂ ಸಾಧನೆಗೆ ಕೇಂದ್ರ ಕ್ರೀಡಾ ಸಚಿವ, ಇತರ ನಾಯಕರು, ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳು, ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕಂಚು ಗೆದ್ದ ಪಿವಿ ಸಿಂಧೂಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಅಭಿನಂದನೆ!
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಎಂದಿನಂತೆ ಅದ್ಭುತ ಟ್ವೀಟ್ ಮೂಲಕ ಪಿವಿ ಸಿಂಧುಗೆ ಅಭಿನಂದನೆ ಸಲ್ಲಿಸಿದ್ದಾರೆ. ಮುಸ್ಲಿಂ, ಸಿಖ್ ಹಾಗೂ ಹಿಂಧೂ, ಎಲ್ಲರನ್ನೂ ಒಗ್ಗೂಡಿಸುತ್ತಾಳೆ ಪಿವಿ ಸಿಂಧು. ಎರಡು ಒಲಿಂಪಿಕ್ಸ್ ಪದಕ ಗೆದ್ದ ಭಾರತದ ಮೊದಲ ಮಹಿಳೆ, ಕಂಚಿನ ಪದಕಕ್ಕೆ ಸಿಂಧೂಗೆ ಅಭಿನಂದನೆ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಕ್ರೀಡಾ ಅನುರಾಗ್ ಠಾಕೂರ್, ಮಾಜಿ ಕ್ರೀಡಾ ಸಚಿವ ಕಿರಣ್ ರಿಜಿಜು ಸೇರಿದಂತೆ ನಾಯಕರು ಟ್ವೀಟ್ ಅಭಿನಂದನೆ ಸಲ್ಲಿಸಿದ್ದಾರೆ.