ಟೋಕಿಯೋ ಪ್ಯಾರಾಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತದ 11 ಮಂದಿ ಭಾಗಿ
* ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ಷಣಗಣನೆ
* ಆಗಸ್ಟ್ 24ರಿಂದ ಟೋಕಿಯೋ ಪ್ಯಾರಾಲಿಂಪಿಕ್ಸ್ ಆರಂಭ
* ಟೋಕಿಯೋ ಪ್ಯಾರಾಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ 11 ಮಂದಿ ಭಾಗಿ
ಟೋಕಿಯೋ(ಆ.23): 2020ರ ಟೋಕಿಯೋ ಪ್ಯಾರಾಲಿಂಪಿಕ್ಸ್ ಮಂಗಳವಾರ ಆರಂಭವಾಗಲಿದ್ದು, ಭಾರತದ 11 ಮಂದಿ ಮಾತ್ರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
5 ಆಥ್ಲೀಟ್‌ಗಳು, 6 ಅಧಿಕಾರಿಗಳು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಥ್ಲೀಟ್‌ಗಳ ಸಂಖ್ಯೆಗೆ ಮಿತಿ ಇಲ್ಲ. ಆದರೆ ಭಾರತದಿಂದ 7 ಕ್ರೀಡಾಳುಗಳು ಮಾತ್ರ ಈಗ ಟೋಕಿಯೋ ತಲುಪಿದ್ದಾರೆ. ಈ ಪೈಕಿ ಇಬ್ಬರು ಟೇಬಲ್ ಟೆನಿಸ್ ಆಟಗಾರ್ತಿಯರಿದ್ದು, ಬುಧವಾರ ಇವರಿಗೆ ಸ್ಪರ್ಧೆ ಇರುವುದರಿಂದ ಇವರನ್ನು ಬಿಟ್ಟು ಉಳಿದ ಐವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಟೋಕಿಯೋ ಪ್ಯಾರಾಲಿಂಪಿಕ್ಸ್: ಭಾರತದಿಂದ ಈ ಬಾರಿ ದಾಖಲೆ ಸ್ಪರ್ಧೆ!
ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಈ ಬಾರಿ ದಾಖಲೆಯ 54 ಕ್ರೀಡಾಪಟುಗಳು ಭಾರತವನ್ನು ಪ್ರತಿನಿಧಿಸಲಿದ್ದಾರೆ. 2016ರ ರಿಯೋ ಪ್ಯಾರಾಲಿಂಪಿಕ್ಸ್‌ಗೆ ಭಾರತ 19 ಕ್ರೀಡಾಪಟುಗಳನ್ನು ಕಳುಹಿಸಿತ್ತು. ಇದುವರೆಗೂ ಭಾರತ 11 ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಒಟ್ಟು 12 ಪದಕಗಳನ್ನು ಜಯಿಸಿದ ಸಾಧನೆ ಮಾಡಿದೆ. ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ 10ಕ್ಕೂ ಹೆಚ್ಚು ಪದಕಗಳನ್ನು ಗೆಲ್ಲುವ ವಿಶ್ವಾಸವಿರಿಸಿಕೊಂಡಿದೆ.