* ಟೋಕಿಯೋ ಪ್ಯಾರಾಲಿಂಪಿಕ್ಸ್‌ ಪಟುಗಳಿಗೆ ಅದ್ಧೂರಿ ಬೀಳ್ಕೊಡುಗೆ* ಪ್ಯಾರಾಲಿಂಪಿಕ್ಸ್‌ನಲ್ಲಿ 54 ಕ್ರೀಡಾಪಟುಗಳು ಭಾಗಿ* ಭಾರತ ಈ ಬಾರಿ 9 ಕ್ರೀಡೆಗಳಲ್ಲಿ ಸ್ಪರ್ಧಿಸಲಿದೆ. 

ನವದೆಹಲಿ(ಆ.13): ಕೋವಿಡ್‌ ನಡುವೆಯೂ ಬಹುನಿರೀಕ್ಷಿತ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಆಗಸ್ಟ್ 24ರಿಂದ ಆರಂಭವಾಗಲಿದ್ದು, ಭಾರತ ಈ ಬಾರಿ ದಾಖಲೆಯ 54 ಕ್ರೀಡಾಪಟುಗಳನ್ನು ಕಣಕ್ಕಿಳಿಸಲಿದೆ. 2016ರ ರಿಯೋ ಒಲಿಂಪಿಕ್ಸ್‌ನಲ್ಲಿ 19 ಮಂದಿ ಸ್ಪರ್ಧಿಸಿದ್ದೇ ದೇಶದ ಈ ವರೆಗಿನ ಗರಿಷ್ಠ ಸ್ಪರ್ಧೆಯ ದಾಖಲೆಯಾಗಿತ್ತು.

ಗುರುವಾರ(ಆ.13) ಪ್ಯಾರಾಲಿಂಪಿಕ್ಸ್‌ಗೆ ತೆರಳಲಿರುವ ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವಾಲಯದಿಂದ ಬೀಳ್ಕೊಡುಗೆ ನೀಡಲಾಯಿತು. ವರ್ಚುವಲ್‌ ಸಮಾರಂಭದಲ್ಲಿ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಸೇರಿ ಪ್ರಮುಖರು ಭಾರತದ ಅಥ್ಲೀಟ್‌ಗಳಿಗೆ ಶುಭಕೋರಿದರು. 

Scroll to load tweet…
Scroll to load tweet…

ಈ ವರ್ಷ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ವಿತರಣೆ ವಿಳಂಬ..!

ಭಾರತ ಈ ಬಾರಿ 9 ಕ್ರೀಡೆಗಳಲ್ಲಿ ಸ್ಪರ್ಧಿಸಲಿದೆ. ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ 2004 ಹಾಗೂ 2016ರ ಪ್ಯಾರಲಿಂಪಿಕ್ಸ್‌ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ದೇವೇಂದ್ರ ಝಝಾರಿಯಾ ಮೂರನೇ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನು ಹೈಜಂಪ್‌ನಲ್ಲಿ ಮರಿಯಪ್ಪನ್ ತಂಗವೇಲು ಹಾಗೂ ವಿಶ್ವ ಚಾಂಪಿಯನ್‌ ಜಾವಲಿನ್ ಥ್ರೋ ಪಟು ಸಂದೀಪ್ ಚೌಧರಿ ಈ ಬಾರಿ ಪದಕ ಗೆಲ್ಲುವ ನಿರೀಕ್ಷೆ ಹುಟ್ಟಿಸಿದ್ದಾರೆ.

2016ರ ರಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ ಮರಿಯಪ್ಪನ್ ತಂಗವೇಲು ಆಗಸ್ಟ್ 24ರಂದು ಆರಂಭವಾಗಲಿರುವ ಪ್ಯಾರಾಲಿಂಪಿಕ್ಸ್‌ ಉದ್ಘಾಟನಾ ಸಮಾರಂಭದಲ್ಲಿ ಭಾರತ ಧ್ವಜಧಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 5ಕ್ಕೆ ಪ್ಯಾರಾಲಿಂಪಿಕ್ಸ್‌ ಮುಕ್ತಾಯಗೊಳ್ಳಲಿದೆ.