ಅಖಂಡ ಶ್ರೀನಿವಾಸಮೂರ್ತಿ

(Search results - 13)

dks

Karnataka Districts19, Nov 2020, 7:08 AM

ಅಖಂಡ ಭೇಟಿಗೆ ಸಮಯ ನೀಡದ ಡಿ.ಕೆ.ಶಿವಕುಮಾರ್‌

ತಮ್ಮ ಭೇಟಿಗೆ ಮುಂದಾಗಿದ್ದ ಪುಲಿಕೇಶಿನಗರದ ತಮ್ಮ ಪಕ್ಷದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಬುಧವಾರ ಸಮಯ ನೀಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಿರಾಕರಿಸಿದ್ದಾರೆ. ತನ್ಮೂಲಕ ಅಖಂಡ ಹಾಗೂ ಶಿವಕುಮಾರ್‌ ಅವರ ನಡುವಿನ ಶೀತಲ ಸಮಯ ಮುಂದುವರೆದಂತಾಗಿದೆ.

• undefined

Karnataka Districts18, Nov 2020, 8:15 AM

ಕಾಂಗ್ರೆಸ್‌ ಯಾರ ಪರ ಇದೆ ಎಂಬುದ ಸಾಬೀತು ಪಡಸಲಿ: ಸಚಿವ ಅಶೋಕ್‌

ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಕಾಂಗ್ರೆಸ್‌ ನಾಯಕರು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪರವಾಗಿದ್ದಾರೆಯೇ ಅಥವಾ ಸಂಪತ್‌ ರಾಜ್‌ ಪರವಾಗಿದ್ದಾರೆಯೇ ಎಂಬುದನ್ನು ಸಾಬೀತುಪಡಿಸಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

congress flag

Karnataka Districts13, Nov 2020, 8:01 AM

'ಕಾಂಗ್ರೆಸ್‌ಗೆ ಮುಸ್ಲಿಂ ಮತ ತಪ್ಪುವ ಭೀತಿ'

ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಸಂಬಂಧ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪರ ನಿಂತರೆ ಮುಸ್ಲಿಂ ಮತಗಳು ತಪ್ಪಿ ಹೋಗಬಹುದು ಎಂದು ಕಾಂಗ್ರೆಸ್‌ಗೆ ಭಯ. ಹೀಗಾಗಿಯೇ ಅವರು ತಪ್ಪೆಸಗಿದ್ದಾರೆ ಎಂಬ ಪಕ್ಷದ ಮುಖಂಡರ ವಿರುದ್ಧ ಕ್ರಮಕೈಗೊಳ್ಳುತ್ತಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ವ್ಯಾಖ್ಯಾನಿಸಿದ್ದಾರೆ.

Akhanda srinivas murthy

Karnataka Districts12, Nov 2020, 7:08 AM

ಡಿ.ಜೆ.ಹಳ್ಳಿ ಗಲಭೆ: ಸಂಪತ್‌ ರಾಜ್‌ ವಿರುದ್ಧ ಕ್ರಮಕ್ಕೆ ಸೋನಿಯಾಗೆ ಮನವಿ, ಅಖಂಡ

ಡಿ.ಜೆ.ಹಳ್ಳಿ ಗಲಭೆ ವೇಳೆ ನಮ್ಮ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮಾಜಿ ಮೇಯರ್‌ ಸಂಪತ್‌ ರಾಜ್‌ ನೇರ ಪಾತ್ರ ವಹಿಸಿದ್ದು, ಅವರ ಮೇಲೆ ಪಕ್ಷದ ವತಿಯಿಂದ ಕ್ರಮ ಕೈಗೊಳ್ಳುವಂತೆ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ಗಾಂಧಿ ಅವರಿಗೆ ಮನವಿ ಮಾಡುವುದಾಗಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ.

Bengaluru Riot

Karnataka Districts24, Oct 2020, 8:46 AM

ಬೆಂಗಳೂರು ಗಲಭೆ ಪ್ರಕರಣ: ಸಂಪತ್‌ ರಾಜ್‌ಗೆ ನಿರೀಕ್ಷಣಾ ಜಾಮೀನು ನೀಡಬೇಡಿ

ನಗರದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಲು ಮಾಜಿ ಮೇಯರ್‌ ಸಂಪತ್‌ರಾಜ್‌ ಕುಮ್ಮಕ್ಕು ನೀಡಿರುವುದು ತನಿಖೆ ವೇಳೆ ಗೊತ್ತಾಗಿರುವುದರಿಂದ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಾರದು ಎಂದು ಸಿಸಿಬಿ ಪರ ವಕೀಲರು ವಿಶೇಷ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದ್ದಾರೆ.

Akhanda srinivas murthy

Karnataka Districts14, Oct 2020, 7:59 AM

ಬೆಂಗಳೂರು ಗಲಭೆ: ಸ್ವಪಕ್ಷದವರೇ ಮನೆಗೆ ಬೆಂಕಿ, ಕಾಂಗ್ರೆಸ್‌ ಶಾಸಕ ಅಖಂಡ ನೋವು

ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ, ತಮ್ಮ ಮನೆಗೆ ಬೆಂಕಿ ಹಾಕಿದ ಪ್ರಕರಣದ ಹಿಂದೆ ನಮ್ಮ ಪಕ್ಷದವರೇ ಆದ ಮಾಜಿ ಮೇಯರ್‌ ಸಂಪತ್‌ ರಾಜ್‌ ಹಾಗೂ ಕಾರ್ಪೊರೇಟರ್‌ ಜಾಕೀರ್‌ ಇದ್ದಾರೆ ಎಂಬುದು ತನಿಖೆಯಿಂದ ಪತ್ತೆಯಾಗಿರುವುದು ಕೇಳಿ ತೀವ್ರ ಬೇಸರವಾಗಿದೆ ಎಂದು ಪುಲಿಕೇಶಿನಗರ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Bengaluru Riot

Karnataka Districts13, Oct 2020, 7:48 AM

ಬೆಂಗಳೂರು ಗಲಭೆ: ಶಾಸಕ ಅಖಂಡ ಮನೆ ಬೆಂಕಿಗೆ ಕಾಂಗ್ರೆಸ್ಸಿಗರ ದ್ವೇಷವೇ ಕಾರಣ

ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಹಿಂದೆ ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಸ್ಥಳೀಯ ಕಾಂಗ್ರೆಸ್ಸಿಗರ ರಾಜಕೀಯ ದ್ವೇಷ ಬಹುಮುಖ್ಯ ಕಾರಣವಾಗಿದೆ ಎಂದು ಪ್ರಕರಣ ಸಂಬಂಧ ತನಿಖೆ ನಡೆಸಿದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಹೇಳಿದೆ.

• undefined

state16, Sep 2020, 7:46 AM

ಬೆಂಗಳೂರು ಗಲಭೆ ಪ್ರಕರಣ: ಆರೋಪಿಗಳಿಗಿಲ್ಲ ಜಾಮೀನು

ನಗರದ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಡಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಅರುಣ್‌ ಮನೋಜ್‌ ಸೇರಿ ಇತರೆ ಮೂವರು ಆರೋಪಿಗಳಿಗೆ ಜಾಮೀನು ನೀಡಲು ನಗರದ 66ನೇ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿದೆ.

CCB

state26, Aug 2020, 7:36 AM

ಶಾಸಕ ಅಖಂಡ ಮನೆ ಮೇಲೆ ದಾಳಿ ಕೇಸ್‌: ಸಿಸಿಬಿ ತನಿಖೆಗೆ ಆದೇಶ

ಇತ್ತೀಚೆಗೆ ನಡೆದಿದ್ದ ಪುಲಿಕೇಶಿ ನಗರದ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಿ ನಗರ ಆಯುಕ್ತ ಕಮಲ್‌ ಪಂತ್‌ ಆದೇಶಿಸಿದ್ದಾರೆ.

ರೋಷನ್‌ ಬೇಗ್‌ ವಿರುದ್ಧ ಜಮೀರ್ ಟ್ವೀಟ್

state21, Aug 2020, 7:46 AM

ಬೆಂಗಳೂರು ಗಲಭೆ: ಹೈಕೋರ್ಟ್‌ ಜಡ್ಜ್‌ರಿಂದ ತನಿಖೆ ನಡೆಸಿ, ಜಮೀರ್‌ ಅಹಮದ್‌

ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೊಲೀಸ್‌ ಠಾಣೆಗಳ ಮೇಲಿನ ದಾಳಿ ಪ್ರಕರಣವನ್ನು ಸರ್ಕಾರ ಹೈಕೋರ್ಟ್‌ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಜಮೀರ್‌ ಅಹಮದ್‌ಖಾನ್‌ ಒತ್ತಾಯಿಸಿದ್ದಾರೆ.

ಈ ವೇಳೆ ಮಾತನಾಡಿದ ಗೃಹ ಸಚಿವರು, ಪರಿಸ್ಥಿತಿ ಇದೀಗ ಸಂಪೂರ್ಣ ಹತೋಟಿಗೆ ಬಂದಿದೆ. ಕಿಡಿಗೇಡಿಗಳು ಕಂಡು ಕೇಳರಿಯದಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದರು. ಇಂತಹ ಪುಂಡಾಟಿಕೆ ಅಕ್ಷಮ್ಯ ಅಪರಾಧ. ಈ ಪುಂಡಾಟಿಕೆ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಕಿಡಿಗೇಡಿಗಳು ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ.

state16, Aug 2020, 8:40 AM

ಬೆಂಗಳೂರು ಗಲಭೆ: ಮನೆಯಲ್ಲೇ ಕುಳಿತು ವಿವಾದಿತ ಪೋಸ್ಟ್‌ ಮಾಡಿದ್ದ ನವೀನ್‌

ತನ್ನ ಮನೆಯಲ್ಲೇ ಕುಳಿತೇ ಫೇಸ್‌ಬುಕ್‌ನಲ್ಲಿ ಇಸ್ಲಾಂ ಧರ್ಮಗುರು ಮಹಮ್ಮದ್‌ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಅನ್ನು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್‌ ಮಾಡಿದ್ದ ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

• undefined

state14, Aug 2020, 7:33 AM

ಮನೆ ಹೋಯ್ತು; ಮಗಳ ಮದುವೆ ಹೇಗೆ ಮಾಡ್ಲಿ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪತ್ನಿ ಕಣ್ಣೀರು

ನಾವು ಏನು ಪಾಪ ಮಾಡಿದ್ದೆವು ಎಂದು ನಮಗೆ ಈ ಶಿಕ್ಷೆ?... ನಾವು ಈಗ ಎಲ್ಲಿರಬೇಕು?... ಎಲ್ಲಿಗೆ ಹೋಗಬೇಕು?... ಮಗಳ ಮದುವೆಗೆ ತಯಾರಿ ನಡೆಸಿದ್ದೆವು. ಇದೀಗ ಮನೆಯೇ ಇಲ್ಲದೆ ಮಗಳ ಮದುವೆ ಹೇಗೆ ಮಾಡಬೇಕು?...

R Akhanda Srinivas Murthy

state12, Aug 2020, 1:27 PM

ಧರ್ಮದ ಬಗ್ಗೆ ಅವಹೇಳನ ಮಾಡಿದವರಿಗೆ ಶಿಕ್ಷೆ ಆಗಲಿ: ಶಾಸಕ ಅಖಂಡ

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಕೋಮಿನ ವಿರುದ್ಧ ನಡೆದ ತಪ್ಪಿಗೂ ನನಗೂ ಯಾವುದೇ ಸಂಬಂಧವಿಲ್ಲ. ಒಂದು ಧರ್ಮದ, ಜನಾಂಗದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದು, ಪೋಸ್ಟ್‌ ಮಾಡುವುದು ತಪ್ಪು. ಅಂತಹ ತಪ್ಪು ಯಾರೇ ಮಾಡಿದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಪುಲಿಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸ್ಪಷ್ಟಪಡಿಸಿದ್ದಾರೆ.