ಆರ್‌ ಅರ್‌ ನಗರ

(Search results - 13)

DK Suresh

PoliticsNov 2, 2020, 8:38 AM IST

ಮೋಸದ ವಿರುದ್ಧ ಜನ ಮತ ಹಾಕುತ್ತಾರೆ: ಡಿ.ಕೆ.ಸುರೇಶ್‌

ಮಾತೆತ್ತಿದರೆ ಆಣೆ-ಪ್ರಮಾಣ ಮಾಡುವ ರಾಜರಾಜೇಶ್ವರಿನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ತಾವು ಮತದಾರರ ಗುರುತಿನ ಚೀಟಿ ಪ್ರಕರಣದಲ್ಲಿ ತಪ್ಪು ಮಾಡಿಲ್ಲ ಎಂದು ತಿರುಪತಿಗೆ ಹೋಗಿ ಆಣೆ ಮಾಡಲಿ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್‌ ಸವಾಲು ಹಾಕಿದ್ದಾರೆ.

DK Suresh

Video Icon

PoliticsNov 1, 2020, 2:30 PM IST

ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

ಮುನಿರತ್ನ  ಏನೇನು ಮಾತನಾಡುತ್ತಾರೋ ಮಾತನಾಡಲಿ, ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ ಅವರು ಹೇಳಿದ್ದಾರೆ. ಆರ್‌.ಅರ್‌ ನಗರದಲ್ಲಿ ಕಾಂಗ್ರೆಸ್‌ ಹಣ ಹಂಚಿಕೆ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.

DK Suresh

PoliticsNov 1, 2020, 9:04 AM IST

ಕುಸುಮಾ ಸ್ಪರ್ಧೆಯಿಂದ ಕೈ ಪರ ಅಲೆ ಸೃಷ್ಟಿ: ಸಂಸದ ಡಿ.ಕೆ.ಸುರೇಶ್‌

ಉಪ ಚುನಾವಣೆಗೆ ಸಜ್ಜಾಗಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಅಕ್ಷರಶಃ ಡಿಕೆಶಿ ಸಹೋದರರು ಮತ್ತು ಮುನಿರತ್ನ ನಡುವಿನ ಕದನ ಕಣವೆಂದೇ ಬಿಂಬಿತವಾಗಿದೆ. ಶತಾಯಗತಾಯ ಕ್ಷೇತ್ರವನ್ನು ಕಾಂಗ್ರೆಸ್‌ನಲ್ಲೇ ಉಳಿಸಿಕೊಳ್ಳಲು ಡಿ.ಕೆ.ಸಹೋದರರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ತಮ್ಮ ಸಂಪೂರ್ಣ ಸಾಮರ್ಥ್ಯ ಪಣಕ್ಕಿಟ್ಟಿದ್ದಾರೆ.

• undefined

PoliticsOct 31, 2020, 1:51 PM IST

ಬಿಜೆಪಿ ಸರ್ಕಾರ ಅನೈತಿಕ ಕೂಸು, ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ: ಸಿದ್ದು

ರಾಜ್ಯ ಸರ್ಕಾರ ಅರ್ಥಿಕವಾಗಿ ದಿವಾಳಿಯಾಗಿದ್ದು ಸಮರ್ಥವಾಗಿ ಆಡಳಿತ ನಡೆಸಲು ಸಾಧ್ಯವಾಗದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರ ಬಿಟ್ಟು ಕೆಳಗಿಳಿಯಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Siddaramaiah

PoliticsOct 28, 2020, 10:28 AM IST

RR ನಗರ ಉಪಕದನ: ಸಿದ್ದರಾಮಯ್ಯ ಪ್ರಚಾರದ ವೇಳೆ ಪ್ರಧಾನಿ ಮೋದಿ ಪರ ಜೈಕಾರ

ರಾಜರಾಜೇಶ್ವರಿ ನಗರ ಕ್ಷೇತ್ರದ ಯಶವಂತಪುರ ವಾರ್ಡ್‌ನಲ್ಲಿ ಮಂಗಳವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಪ್ರಚಾರ ಭಾಷಣ ನಡೆಸುವಾಗ ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಅವರ ಪರ ಜೈಕಾರ ಕೂಗಿ ಅಡ್ಡಿಪಡಿಸಿದ ಘಟನೆ ನಡೆದಿದೆ.

Munirathna

PoliticsOct 27, 2020, 8:55 AM IST

RR ನಗರ ಉಪಚುನಾವಣೆ: ಮುನಿರತ್ನ ವಿರುದ್ಧ ಕಾಂಗ್ರೆಸ್‌ ದೂರು

ರಾಜರಾಜೇಶ್ವರಿನಗರ ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಅವರು ಮತದಾರರಿಗೆ ಸೆಟ್‌ಟಾಪ್‌ ಬಾಕ್ಸ್‌ ಹಂಚುವ ಮೂಲಕ ಚುನಾವಣಾ ಅಕ್ರಮ ನಡೆಸಿದ್ದಾರೆ. ಸೆಟ್‌ ಟಾಪ್‌ ಬಾಕ್ಸ್‌ ಹಂಚಿಕೆಯನ್ನು ಅವರೇ ಒಪ್ಪಿಕೊಂಡಿದ್ದು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

Muniraju, Muniratna

PoliticsOct 22, 2020, 9:11 AM IST

RR ನಗರ ಉಪಚುನಾವಣೆ: ಮುನಿರಾಜುಗೆ ಮುನಿರತ್ನ ಗೆಲ್ಲಿಸುವ ಉಸ್ತುವಾರಿ

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದ್ದು, ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಜೆಪಿ ಕಾರ್ಯದರ್ಶಿ ಮುನಿರಾಜುಗೌಡ ಅವರಿಗೂ ಕ್ಷೇತ್ರದ ಉಸ್ತುವಾರಿ ಜವಾಬ್ದಾರಿ ವಹಿಸಲಾಗಿದೆ. ಈ ಮೂಲಕ ಮುನಿರಾಜುಗೌಡ ಅವರಿಗಿದ್ದ ಅತೃಪ್ತಿಯನ್ನು ಶಮನ ಮಾಡುವ ಪ್ರಯತ್ನವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾಡಿದ್ದಾರೆ.

Muniratna

PoliticsOct 21, 2020, 10:11 AM IST

'ಬಿಜೆಪಿ ಸರ್ಕಾರ ರಚನೆಯಲ್ಲಿ ಮುನಿರತ್ನ ಪಾತ್ರ ದೊಡ್ಡದು'

ಬಿಜೆಪಿ ಸರ್ಕಾರ ರಚನೆಯಲ್ಲಿ ಮುನಿರತ್ನ ಅವರ ಪಾತ್ರ ದೊಡ್ದದಿದ್ದು, ಯಡಿಯೂರಪ್ಪ ಅವರ ಕೈ ಬಲಪಡಿಸಲು ಮುನಿರತ್ನ ಅವರನ್ನು ಗೆಲ್ಲಿಸಿ ಕೊಡಬೇಕು ಎಂದು ತೋಟಗಾರಿಕೆ ಸಚಿವ ಕೆ.ನಾರಾಯಣಗೌಡ ಮತದಾರರಿಗೆ ಮನವಿ ಮಾಡಿದ್ದಾರೆ.

ನಿರ್ಮಲಾನಂದ‌ ಶ್ರೀಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡ ಕುಸುಮಾ

PoliticsOct 19, 2020, 8:52 AM IST

‘ಡಿ.ಕೆ.ರವಿ ಜನ ಸೇವೆಯೇ ನನಗೆ ಪ್ರೇರಣೆ': RR ನಗರ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ'

ನನ್ನ ಪತಿ ಹಾಗೂ ಐಎಎಸ್‌ ಅಧಿಕಾರಿಯಾಗಿದ್ದ ಡಿ.ಕೆ.ರವಿ ಅವರ ಜನ ಸೇವೆಯೇ ನಾನು ಜನಸೇವೆಗೆ ಬರಲು ಪ್ರಮುಖ ಪ್ರೇರಣೆ. ಅವರೊಂದಿಗೆ ಕಳೆದ ನನ್ನ ಜೀವನದ ಐದು ವರ್ಷಗಳ ಅಮೂಲ್ಯ ಸಮಯವನ್ನು ಅಳಸಿ ಹಾಕಲು (ಡಿಲೀಟ್‌) ಅಥವಾ ಕಳೆದು ಹಾಕಲು (ಮೈನಸ್‌) ಮಾಡಲು ಆಗುವುದಿಲ್ಲ. ಅವರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಮಾಡುತ್ತಿದ್ದ ಕೆಲಸಗಳಲ್ಲಿ ನಾನೂ ಭಾಗಿಯಾಗಿದ್ದೇನೆ. ಅದೇ ಪ್ರೇರಣೆಯಿಂದ ರಾಜಕೀಯಕ್ಕೆ ಬಂದಿದ್ದೇನೆ.

DKS

PoliticsOct 18, 2020, 8:50 AM IST

RR ನಗರದಲ್ಲಿ ಬಂಡೆ ಆಟ ನಡೆಯಲ್ಲ: ಡಿಕೆಶಿ ವಿರುದ್ಧ ಹರಿಹಾಯ್ದ ಸಚಿವ ಅಶೋಕ್‌

ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಜಾತಿ ಆಧಾರಿತ ರಾಜಕೀಯ ಇಲ್ಲ. ನಾನೂ ಒಕ್ಕಲಿಗನೇ, ಕ್ಷೇತ್ರದಲ್ಲಿ ಒಕ್ಕಲಿಗರ ಪಾಳೆಗಾರನಾಗಲು ಯಾರಿಂದಲೂ ಸಾಧ್ಯವಿಲ್ಲ. ಇಲ್ಲಿ ಕಾಂಗ್ರೆಸ್‌ಗೆ ತಳವೇ ಇಲ್ಲ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

Congress BJP  JDS

PoliticsOct 16, 2020, 9:44 AM IST

'ಎರಡೂ ರಾಷ್ಟ್ರೀಯ ಪಕ್ಷಗಳಿಗೂ ಜೆಡಿಎಸ್‌ನದ್ದೇ ಭಯ’

ಉಪಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್‌ನದ್ದೇ ಭಯ ಇದ್ದು, ಪಕ್ಷದ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗೆ ಸಮರ್ಪಕವಾಗಿ ಶ್ರಮ ಹಾಕಬೇಕು ಎಂದು ಪಕ್ಷದ ಮುಖಂಡ ಟಿ.ಎ.ಶರವಣ ತಿಳಿಸಿದ್ದಾರೆ.

Munirathna

Video Icon

PoliticsOct 13, 2020, 3:05 PM IST

ಮುನಿರತ್ನಗೆ ಬಿಗ್ ರಿಲೀಫ್; ಸಂಜೆ ಹೊರಬೀಳಲಿದೆ ಬಿಜೆಪಿ ಟಿಕೆಟ್ ಘೋಷಣೆ

ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ತೀರ್ಪು ಮುನಿರತ್ನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಹಾದಿಯನ್ನು ಇನ್ನಷ್ಟು ಸುಗಮೊಳಿಸಿದೆ.

RR Nagara

Karnataka DistrictsOct 7, 2020, 8:45 AM IST

RR ನಗರ ಉಪಕದನ: ಕೊರೋನಾ ಭೀತಿ, 68 ಮತಗಟ್ಟೆ ಸ್ಥಳಾಂತರ

ಕೊರೋನಾ ಸೋಂಕು ಭೀತಿ ಇರುವ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದ ಉಪ ಚುನಾವಣೆಗೆ 297 ತಾತ್ಕಾಲಿಕ ಮತಗಟ್ಟೆತೆರೆಯಲಾಗುತ್ತಿದ್ದು, 68 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.