ಉಪನಗರ ರೈಲು
(Search results - 10)Karnataka DistrictsJan 14, 2021, 7:11 AM IST
ಬೆಂಗ್ಳೂರು ಸಬರ್ಬನ್ ರೈಲು ಯೋಜನೆ: ಮಾರ್ಗ ನಿರ್ಮಾಣ ಅಂತಿಮ
ಬಹು ನಿರೀಕ್ಷೆಯ ಬೆಂಗಳೂರು ಉಪನಗರ ರೈಲು ಯೋಜನೆ ಅನುಷ್ಠಾನ ಸಂಬಂಧ ಸಿದ್ಧತೆ ಆರಂಭಿಸಿರುವ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ( ಕೆ-ರೈಡ್) ಯೋಜನೆಯ ನಾಲ್ಕು ಕಾರಿಡಾರ್ ಪೈಕಿ ಮೊದಲ ಹಂತದಲ್ಲಿ ಬೈಯಪನಹಳ್ಳಿ-ಚಿಕ್ಕಬಾಣಾವಾರ (25.01 ಕಿ.ಮೀ.) ಮತ್ತು ಹೀಲಳಿಗೆ- ರಾಜಾನುಕುಂಟೆ (46.24 ಕಿ.ಮೀ.) ಕಾರಿಡಾರ್ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ.
Karnataka DistrictsNov 13, 2020, 7:15 AM IST
ಬೆಂಗಳೂರು ಸಬರ್ಬನ್ ರೈಲು ಸಾಕಾರದತ್ತ ಇನ್ನೊಂದು ಹೆಜ್ಜೆ
ಬೆಂಗಳೂರು ಉಪನಗರ ರೈಲು ಯೋಜನೆಗೆ 7,438 ಕೋಟಿ ರು. ಮೊತ್ತವನ್ನು ದೇಶೀಯ ಹಾಗೂ ವಿದೇಶಿ ಅಭಿವೃದ್ಧಿ ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯಲು ಹಾಗೂ ಮೊದಲ ಹಂತದ ಮೂರು ಮಾರ್ಗ ನಿರ್ಮಾಣಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
Karnataka DistrictsNov 1, 2020, 7:33 AM IST
ದೇವನಹಳ್ಳಿಗೆ 3 ವರ್ಷದಲ್ಲಿ ಸಬ್ಅರ್ಬನ್ ರೈಲು
ಬೆಂಗಳೂರು ಉಪನಗರ ರೈಲು ಯೋಜನೆ ವಿಸ್ತೃತ ಯೋಜನಾ ವರದಿ(ಡಿಪಿಆರ್)ಗೆ ಅನುಮೋದನೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಮೊದಲ ಹಂತದಲ್ಲಿ ಆದ್ಯತೆ ಮೇರೆಗೆ ಕೆಎಸ್ಆರ್ ಬೆಂಗಳೂರು ನಿಲ್ದಾಣ- ದೇವನಹಳ್ಳಿ ಕಾರಿಡಾರ್ (41.40 ಕಿ.ಮೀ.) ನಿರ್ಮಾಣಕ್ಕೆ ಯೋಜನೆ ರೂಪಿಸುವಂತೆ ಸೂಚಿಸಿದೆ.
Karnataka DistrictsOct 27, 2020, 7:12 AM IST
ಬೆಂಗಳೂರು ಸಬ್ಅರ್ಬನ್ ರೈಲು: ಯೋಜನಾ ವೆಚ್ಚ ಹಂಚಿಕೆ
ರಾಜಧಾನಿಯ ಬಹುಬೇಡಿಕೆಯ ‘ಬೆಂಗಳೂರು ಉಪನಗರ ರೈಲು ಯೋಜನೆ’ಯ 15,767 ಕೋಟಿ ರು. ವೆಚ್ಚದ 148.17 ಕಿ.ಮೀ. ಮಾರ್ಗದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಯೋಜನೆ ಅನುಷ್ಠಾನಕ್ಕೆ ತಗುಲುವ ಅಂದಾಜು ವೆಚ್ಚವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹಂಚಿಕೆ ಮಾಡಲಾಗಿದೆ.
Karnataka DistrictsOct 8, 2020, 7:50 AM IST
ಬೆಂಗಳೂರಿಗರ ಬಹುಬೇಡಿಕೆಯ ಸಬರ್ಬನ್ ರೈಲಿಗೆ ಕೇಂದ್ರ ಸಂಪುಟ ಅಸ್ತು
ರಾಜಧಾನಿಯ ಬಹುಬೇಡಿಕೆಯ ‘ಬೆಂಗಳೂರು ಉಪನಗರ ರೈಲು ಯೋಜನೆ’ಯ ಪರಿಷ್ಕೃತ ಡಿಪಿಆರ್ಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ರಾಜರಾಜೇಶ್ವರಿನಗರ ಉಪಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಅಧಿಕೃತ ಘೋಷಣೆ ಬಾಕಿಯಿದೆ ಎಂದು ಮೂಲಗಳು ತಿಳಿಸಿವೆ.
Karnataka DistrictsFeb 23, 2020, 8:42 AM IST
ಬೆಂಗಳೂರು ಉಪನಗರ ರೈಲು: ಕಾಮಗಾರಿ ಬೇಗ ಮುಗಿಸಿ, ಸಚಿವ ಅಂಗಡಿ
ನೈಋುತ್ಯ ರೈಲ್ವೆಯು ಬೆಂಗಳೂರು ಉಪ ನಗರ ರೈಲು ಯೋಜನೆಗೆ ಪೂರಕವಾಗಿ ಬೈಯಪ್ಪನಹಳ್ಳಿಯಲ್ಲಿ ನಿರ್ಮಿಸುತ್ತಿರುವ ನೂತನ ಟರ್ಮಿನಲ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Karnataka DistrictsFeb 9, 2020, 8:39 AM IST
ಉಪನಗರ ರೈಲು ಅನುಷ್ಠಾನಕ್ಕೆ 1400 ಕೋಟಿ ರು. : ಶೀಘ್ರ ಅನುಮೋದನೆ
ಶೀಘ್ರ ಉಪ ನಗರ ರೈಲಿಗೆ ಅನುಮೋದನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.
Karnataka DistrictsFeb 5, 2020, 7:54 AM IST
ಬೆಂಗಳೂರು ಉಪನಗರ ರೈಲಿಗೆ ಕೇಂದ್ರದ ಅನುದಾನ ಬರೋದು ಅನುಮಾನ?
ರಾಜಧಾನಿಯ ಉಪನಗರ ರೈಲು ಯೋಜನೆಯಲ್ಲಿ ಕೇಂದ್ರ ತನ್ನ ಪಾಲಿನ ಶೇಕಡ 20 ರಷ್ಟು ಅನುದಾನವನ್ನು ಯೋಜನೆಗೆ ನೀಡುವ ರೈಲ್ವೆ ಭೂಮಿಗೆ ಸರಿದೂಗಿಸಲು ಮುಂದಾಗಿದೆ ಎನ್ನಲಾಗಿದ್ದು, ಇದರಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೆಚ್ಚಾಗುವ ಸಾಧ್ಯತೆ ಸಾಧ್ಯತೆಯಿದೆ.
Bengaluru-UrbanNov 5, 2019, 8:08 AM IST
ಬೆಂಗಳೂರಿಗರಿಗೆ ಇಲ್ಲಿದೆ ಗುಡ್ ನ್ಯೂಸ್ : ಶೀಘ್ರ ಬರಲಿದೆ ಉಪನಗರ ರೈಲು
ಬೆಂಗಳೂರು ನಾಗರಿಕರಿಗೆ ಇಲ್ಲಿದೆ ಗುಡ್ ನ್ಯೂಸ್. ಟ್ರಾಫಿಕ್ ಕಿರಿಕಿರಿಯಿಂದ ಬೇಸತ್ತವರಿಗೆ ಶೀಘ್ರವೇ ಮೆಟ್ರೋದಂತೆಯೇ ಮತ್ತೊಂದು ಅನುಕೂಲ ಸಿಗಲಿದೆ.
Karnataka DistrictsOct 1, 2019, 8:51 AM IST
ಉಪನಗರ ರೈಲ್ವೆ ಯೋಜನೆ : ಸಿಗುತ್ತಿಲ್ಲ ಅನುಮೋದನೆ!
ಬೆಂಗಳೂರಿನ ಬಹು ನಿರೀಕ್ಷಿತ ಉಪನಗರ ರೈಲು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಸಚಿವ ಸಂಪುಟ ಈವರೆಗೂ ಅನುಮೋದನೆ ನೀಡದ ಹಿನ್ನೆಲೆಯಲ್ಲಿ ಯೋಜನೆ ಅನುಷ್ಠಾನ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.