ಐಸಿಸಿ

(Search results - 489)

icc upstox

CricketJun 17, 2021, 2:42 PM IST

ICC ಟೂರ್ನಿಗೆ ಅಪ್‌ಸ್ಟಾಕ್ಸ್ ಪಾಲುದಾರಿಕೆ; ಟೆಸ್ಟ್ ಚಾಂಪಿಯನ್‌ಶಿಪ್‌ನಿಂದ ಪಾರ್ಟ್ನರ್‌ಶಿಪ್ ಆರಂಭ!

• ಅಪ್‍ಸ್ಟಾಕ್ಸ್‍ನ ಅಧಿಕೃತ ಪಾಲುದಾರಿಕೆ ಅನಾವರಣಗೊಳಿಸಿದ ICC
• ಟೆಸ್ಟ್ ಚಾಂಪಿಯನ್‌‌ಶಿಪ್ ಫೈನಲ್‌ನಿಂದ ಪಾಲುದಾರಿಕೆ ಆರಂಭ
• 2023ರ ಅಂತ್ಯದವರೆಗೆ ಅಪ್‌ಸ್ಟಾಕ್ಸ್ ಸಹಭಾಗಿತ್ವ

Test Mace

CricketJun 15, 2021, 4:00 PM IST

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ

ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜೂನ್ 18ರಿಂದ ಸೌಥಾಂಪ್ಟನ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹಾಗೂ ಕೇನ್ ವಿಲಿಯಮ್ಸನ್‌ ನೇತೃತ್ವದ ನ್ಯೂಜಿಲೆಂಡ್ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಕಾದಾಟ ನಡೆಸಲಿವೆ.

New Zealand Cricket

CricketJun 15, 2021, 12:41 PM IST

ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಬಲಿಷ್ಠ ನ್ಯೂಜಿಲೆಂಡ್ ತಂಡ ಪ್ರಕಟ

ಮೊಣಕೈ ಗಾಯದಿಂದಾಗಿ ಇಂಗ್ಲೆಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಕೇನ್ ವಿಲಿಯಮ್ಸನ್‌ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ತಂಡ ಕೂಡಿಕೊಂಡಿದ್ದಾರೆ. ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಟಾಮ್ ಲಾಥಮ್ ತಂಡವನ್ನು ಮುನ್ನೆಡೆಸಿ ಇಂಗ್ಲೆಂಡ್ ಎದುರು ಕಿವೀಸ್ ತಂಡ 8 ವಿಕೆಟ್‌ಗಳ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Ind vs NZ

CricketJun 15, 2021, 11:48 AM IST

ಮುಂದಿನ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಕೆಲ ಬದಲಾವಣೆ ತರಲು ಮುಂದಾದ ಐಸಿಸಿ

ಎರಡು ವರ್ಷಗಳ ಕಾಲ ನಡೆಯಲಿರುವ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ ಕೋವಿಡ್‌ ಕಾರಣದಿಂದಾಗಿ ಸಾಕಷ್ಟು ಅನಿಶ್ಚಿತತೆಗೆ ಒಳಗಾಗಿತ್ತು. ಹಲವು ದ್ವಿಪಕ್ಷಿಯ ಟೆಸ್ಟ್ ಸರಣಿಗಳು ರದ್ದಾದರೆ, ಮತ್ತೆ ಕೆಲವು ಟೂರ್ನಿಗಳು ಅನಿವಾರ್ಯವಾಗಿ ಮುಂದೂಡಲ್ಪಟ್ಟಿದ್ದವು.

Top 10 News

NewsJun 14, 2021, 4:43 PM IST

ಸಂಚಾರಿ ವಿಜಯ್‌ಗಾಗಿ ಪ್ರಾರ್ಥನೆ, ಶಕೀಬ್‌ಗೆ ಮುಳುವಾಯ್ತು ಅನುಚಿತ ವರ್ತನೆ; ಜೂ.14ರ ಟಾಪ್ 10 ಸುದ್ದಿ

ಅಪಘಾತದಿಂದ ತೀವ್ರಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರೀಯಗೊಂಡಿದೆ. ಆದೆರೆ ಉಸಿರಾಟ ನಿಲ್ಲಿಸಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಮೋದಿ, ಶಾ ಭದ್ರಕೋಟೆಗೆ ಕೇಜ್ರಿವಾಲ್ ಲಗ್ಗೆ ಇಟ್ಟಿದ್ದಾರೆ. ಕೋಟಿ ಕೋಟಿ ಆದಾಯ ಹೆಚ್ಚಿಸಿದ್ದ ಅದಾನಿಗೆ ಹಿನ್ನಡೆಯಾಗಿದೆ. ಬಿಗ್‌ಬಾಸ್ ಕನ್ನಡ ಮತ್ತೆ ಆರಂಭ, ಶಕೀಬ್ ಅಲ್ ಹಸನ್‌ಗೆ ನಿಷೇಧ ಹೇರಿದ ಐಸಿಸಿ ಸೇರಿದಂತೆ ಜೂನ್ 14ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

New Zealand Cricket

CricketJun 14, 2021, 12:38 PM IST

ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌‌: ಮತ್ತೆ ಅಗ್ರಸ್ಥಾನಕ್ಕೇರಿದ ನ್ಯೂಜಿಲೆಂಡ್‌

ಟೆಸ್ಟ್‌ ಹಾಗೂ ಏಕದಿನ ರ‍್ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್‌ ಮೊದಲ ಸ್ಥಾನದಲ್ಲಿರುವುದು ವಿಶೇಷ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೂ ಮುನ್ನ ಈ ಬೆಳವಣಿಗೆ ಕಿವೀಸ್‌ಗೆ ಮಾನಸಿಕ ಮುನ್ನಡೆ ನೀಡಿದೆ.

Team India Practice

CricketJun 11, 2021, 9:59 AM IST

ಇಂಗ್ಲೆಂಡ್‌ನಲ್ಲಿ ಪೂರ್ಣ ಪ್ರಮಾಣದ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಬ್ರಿಟನ್‌ಗೆ ಆಗಮಿಸಿದ ಬಳಿಕ ಕ್ವಾರಂಟೈನ್ ಹಿನ್ನೆಲೆಯಲ್ಲಿ 5 ದಿನ ಪ್ರತ್ಯೇಕವಾಗಿ ಅಭ್ಯಾಸ ನಡೆಸಿದ ಟೀಂ ಇಂಡಿಯಾ ಆಟಗಾರರು, ಗುರುವಾರ(ಜೂ.10) ಇಲ್ಲಿನ ರೋಸ್‌ ಬೌಲ್‌ ಕ್ರೀಡಾಂಗಣದಲ್ಲಿ ಎಲ್ಲರೂ ಒಟ್ಟಾಗಿ ಅಭ್ಯಾಸ ನಡೆಸಿದರು. ಟೆಸ್ಟ್ ವಿಶ್ವಕಪ್ ಎಂದೇ ಬಿಂಬಿತವಾಗಿರುವ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯದಲ್ಲಿ ಬಲಿಷ್ಠ ಭಾರತ ತಂಡಕ್ಕೆ ಕೇನ್ ವಿಲಿಯಮ್ಸನ್‌ ನೇತೃತ್ವದ ನ್ಯೂಜಿಲೆಂಡ್ ತಂಡವು ಸವಾಲೊಡ್ಡಲಿದೆ.

Virat Kohli

CricketJun 10, 2021, 5:16 PM IST

ಟೆಸ್ಟ್‌ ರ‍್ಯಾಂಕಿಂಗ್‌: 5ನೇ ಸ್ಥಾನ ಉಳಿಸಿಕೊಂಡ ವಿರಾಟ್ ಕೊಹ್ಲಿ

ಲಾರ್ಡ್ಸ್‌ ಮೈದಾನದಲ್ಲಿ ನಡೆದ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲೇ ಆಕರ್ಷಕ ದ್ವಿಶತಕ ಬಾರಿಸಿದ್ದ ಡೆವೊನ್‌ ಕಾನ್‌ವೇ ಟೆಸ್ಟ್‌ಗೆ ಶ್ರೇಯಾಂಕಕ್ಕೆ ಸೇರ್ಪಡೆಗೊಂಡಿದ್ದು, 77ನೇ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಾನ್‌ವೇ 347 ಎಸೆತಗಳಲ್ಲಿ 200 ರನ್‌ ಬಾರಿಸಿದ್ದರು. ನ್ಯೂಜಿಲೆಂಡ್ ತಂಡದ ನಾಯಕ ಕೇನ್‌ ವಿಲಿಯಮ್ಸ್‌ ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ.

ICC BCCI

CricketJun 10, 2021, 9:51 AM IST

ಅಕ್ಟೋಬರ್ 10ರೊಳಗೆ ಐಪಿಎಲ್‌ ಮುಗಿಸಲು ಐಸಿಸಿ ಒತ್ತಡ?

ಐಸಿಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, ಅಕ್ಟೋಬರ್ 18ರಿಂದ ಟಿ20 ವಿಶ್ವಕಪ್‌ ಆರಂಭಗೊಳ್ಳಬೇಕಿದ್ದು, ಐಸಿಸಿ ಟೂರ್ನಿಗಳು ಆರಂಭವಾಗುವ ಮುನ್ನ ಕನಿಷ್ಠ 7-10 ದಿನಗಳ ಮೊದಲು ಬೇರಾರ‍ಯವುದೇ ಟೂರ್ನಿಗಳನ್ನು ನಡೆಸುವಂತಿಲ್ಲ ಎನ್ನುವ ನಿಯಮವಿದೆ.

GR Vishwanath Siraj

CricketJun 9, 2021, 5:29 PM IST

ಸಿರಾಜ್ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸರೆಯಾಗಬಲ್ಲರು: ಜಿ. ಆರ್ ವಿಶ್ವನಾಥ್

ಜೂನ್‌ 18ರಿಂದ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ ಸೌಥಾಂಪ್ಟನ್‌ನಲ್ಲಿ ಆರಂಭವಾಗಲಿದ್ದು, ಪ್ರಶಸ್ತಿಗಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹಾಗೂ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡಗಳು ಕಾದಾಡಲಿವೆ.

T20 World Cup

CricketJun 7, 2021, 2:39 PM IST

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆತಿಥ್ಯಕ್ಕೆ ಶ್ರೀಲಂಕಾ ಒಲವು..!

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆಯೋಜನೆಯ ಕುರಿತಂತೆ ಈಗಾಗಲೇ ಬಿಸಿಸಿಐ ಅಧಿಕಾರಿಗಳು ಎಮಿರೇಟ್ಸ್‌ ಕ್ರಿಕೆಟ್‌ ಬೋರ್ಡ್‌ ಜತೆ ಮಾತುಕತೆ ನಡೆಸುತ್ತಿದ್ದಾರೆ. ಇದೇ ವೇಳೆ ಲಂಕಾ ಮಂಡಳಿಯ ಜತೆಯೂ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

Ehsan Mani

CricketJun 5, 2021, 5:18 PM IST

ಟಿ20 ವಿಶ್ವಕಪ್ ಭಾರತದಿಂದ ಯುಎಇಗೆ ಸ್ಥಳಾಂತರವಾಗಲಿದೆ: ಪಾಕ್‌ ಕ್ರಿಕೆಟ್ ಮುಖ್ಯಸ್ಥ ಏಹ್ಸಾನ್ ಮಣಿ

ಕಳೆದ ಮೇ.29ರಂದು ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯನ್ನು ಕರೆದಾಗ ಹಲವು ಊಹಾಪೋಹಗಳು ಹುಟ್ಟಿಕೊಂಡಿದ್ದವು. ಸಭೆಯಲ್ಲಿ ಐಸಿಸಿಗೆ ಬಿಸಿಸಿಐ ಒಂದು ತಿಂಗಳು ಹೆಚ್ಚುವರಿಯಾಗಿ ಕಾಲಾವಕಾಶ ನೀಡಬೇಕು ಎಂದು ಮನವಿ ಮನವಿ ಮಾಡಿಕೊಂಡಿತ್ತು. ಈ ಮನವಿಯನ್ನು ಐಸಿಸಿ ಕೂಡಾ ಪುರಸ್ಕರಿಸಿದೆ. ಇದೇ ಜೂನ್ 28ರೊಳಗಾಗಿ ಟಿ20 ವಿಶ್ವಕಪ್ ಆಯೋಜನೆಯ ಕುರಿತಂತೆ ಸ್ಪಷ್ಟ ನಿರ್ಧಾರ ತಿಳಿಸಲು ಬಿಸಿಸಿಐಗೆ ಐಸಿಸಿ ಸೂಚನೆ ನೀಡಿದೆ.

Brett Lee

CricketJun 4, 2021, 8:17 PM IST

ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌: ಕಿವೀಸ್‌ಗೆ ಅನುಕೂಲ ಹೆಚ್ಚಿದೆ ಎಂದ ಬ್ರೆಟ್ ಲೀ

ಒಂದು ಕಡೆ ನ್ಯೂಜಿಲೆಂಡ್ ತಂಡವು ಇಂಗ್ಲೆಂಡ್‌ ವಿರುದ್ದ ಎರಡು ಪಂದ್ಯಗಳ ಟೆಸ್ಟ್‌ ಸರಣಿಯ ಪೈಕಿ ಮೊದಲ ಪಂದ್ಯವನ್ನು ಆಡುತ್ತಿದೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸದ್ಯ ಇಂಗ್ಲೆಂಡ್‌ಗೆ ಬಂದಿಳಿದಿದ್ದು, ಕಠಿಣ ಕ್ವಾರಂಟೈನ್‌ಗೆ ಒಳಗಾಗಿದೆ.

Eng vs NZ

CricketJun 2, 2021, 3:30 PM IST

ಇಂಗ್ಲೆಂಡ್ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ

ಒಂದು ಕಡೆ ನ್ಯೂಜಿಲೆಂಡ್ ತಂಡವು ಭಾರತ ವಿರುದ್ದ ಜೂನ್ 18ರಿಂದ ಆರಂಭವಾಗಲಿರುವ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ಗೆ ಪೂರ್ವಭಾವಿ ಸಿದ್ದತೆಯನ್ನು ಆರಂಭಿಸಿದೆ. ಇನ್ನೊಂದೆಡೆ ಜೋ ರೂಟ್ ನೇತೃತ್ವದ ಇಂಗ್ಲೆಂಡ್ ತಂಡವು ಮುಂಬರುವ ಆ್ಯಷಸ್‌ ಟೆಸ್ಟ್ ಸರಣಿಗೆ ಸಿದ್ದತೆ ಮಾಡಿಕೊಳ್ಳುತ್ತಿದೆ.

ICC BCCI

CricketJun 2, 2021, 1:17 PM IST

ಐಸಿಸಿ ಟಿ20 ವಿಶ್ವಕಪ್ ಆಯೋಜನೆ: ಜೂನ್‌ 28ರವರೆಗೆ ಗಡುವು ಪಡೆದ ಬಿಸಿಸಿಐ

ಐಸಿಸಿ ಸಭೆ ಸೇರುವ ಮುನ್ನವೇ ಬಿಸಿಸಿಐ ಮೇ 29ರಂದು ವಿಶೇಷ ಸಾಮಾನ್ಯ ಸಭೆ ಸೇರಿತ್ತು. ಈ ಸಂದರ್ಭದಲ್ಲಿ ಐಪಿಎಲ್ ಭಾಗ 2 ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸುವ ತೀರ್ಮಾನ ತೆಗೆದುಕೊಂಡಿತ್ತು. ಇದೇ ವೇಳೆ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಟೂರ್ನಿ ಆಯೋಜನೆ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲು ಇನ್ನೊಂದು ತಿಂಗಳು ಕಾಲಾವಕಾಶ ಬೇಕು ಎಂದು ಬಿಸಿಸಿಐ, ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಬಳಿ ಮನವಿ ಮಾಡಿಕೊಂಡಿತ್ತು.