ಟಿಕೆಟ್‌ ಫೈಟ್  

(Search results - 18)
 • Bangalore Central

  POLITICS28, Feb 2019, 3:56 PM IST

  ಟಿಕೆಟ್ ಫೈಟ್: ಕಾಂಗ್ರೆಸ್‌ನಲ್ಲಿ ಹಿರಿಯರು, ಕಿರಿಯರ ಕಿರಿಯರ ಕದನ!

  ಒಟ್ಟು ಮತದಾರರಲ್ಲಿ ಶೇ.50ಕ್ಕಿಂತ ಹೆಚ್ಚು ಅಲ್ಪಸಂಖ್ಯಾತರೇ ಇರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲುವು ಸಾಧಿಸಬೇಕಿತ್ತು. ಒಳಜಗಳ ಹಾಗೂ ಮತವಿಭಜನೆಯಿಂದಾಗಿ ಕಳೆದ ಎರಡು ಬಾರಿ ಆ ಪಕ್ಷ ಬಿಜೆಪಿ ಎದುರು ಮಂಡಿಯೂರಿದೆ. ಹ್ಯಾಟ್ರಿಕ್ ನಿರೀಕ್ಷೆಯಲ್ಲಿರುವ ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರನ್ನು ಮಣಿಸುವ ಉಮೇದಿಯಲ್ಲಿರುವ ಕಾಂಗ್ರೆಸ್ಸಿನಲ್ಲಿ ಟಿಕೆಟ್‌ಗೆ ಪ್ರಮುಖವಾಗಿ 4 ಮಂದಿ ತೀವ್ರ ಪೈಪೋಟಿ ನಡೆಸಿದ್ದಾರೆ. ಇದರಲ್ಲಿ ಹಿರಿಯರು ವರ್ಸಸ್ ಕಿರಿಯರು ಎಂಬ ಕದನವೂ ಜೋರಾಗಿದೆ. ಇದನ್ನು ಕಾಂಗ್ರೆಸ್ ಹೇಗೆ ನಿರ್ವಹಿಸುತ್ತದೆ ಎಂಬ ಕುತೂಹಲವಿದೆ.

 • Bangalore south

  POLITICS25, Feb 2019, 11:26 AM IST

  ಟಿಕೆಟ್ ಫೈಟ್: ಅನಂತ್‌ ಕ್ಷೇತ್ರದಲ್ಲಿ ಪತ್ನಿ ಬಿಜೆಪಿ ಅಭ್ಯರ್ಥಿ?

  ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಂದರ್ಥದಲ್ಲಿ ಬಿಜೆಪಿಯ ಭದ್ರಕೋಟೆ. ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಅವರು ಇಲ್ಲಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದರು. ಆದರೆ ಈ ಬಾರಿ ಅನಂತ್ ಇಲ್ಲ. ಅನಂತ್ ನಿಧನದ ಅನುಕಂಪದ ಲಾಭ ಪಡೆಯಲು ಅವರ ಪತ್ನಿ ತೇಜಸ್ವಿನಿ ಅವರನ್ನು ಕಣಕ್ಕಿಳಿಸಬೇಕು ಎಂಬ ಕೂಗು ಎದ್ದಿತ್ತು. ಆರಂಭದಲ್ಲಿ ಅಷ್ಟೇನು ಒಲವು ತೋರದಿದ್ದ ತೇಜಸ್ವಿನಿ ಈಗ ಅಖಾಡಕ್ಕೆ ಇಳಿಯಲು ಸಜ್ಜಾಗುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲು 1991ರಿಂದಲೂ ತಿಣುಕಾಡುತ್ತಿರುವ ಕಾಂಗ್ರೆಸ್ ಈ ಬಾರಿ ಗೋವಿಂದರಾಜನಗರದ ಮಾಜಿ ಶಾಸಕ ಪ್ರಿಯಕೃಷ್ಣ ಅವರನ್ನು ಕಣಕ್ಕಿಳಿಸುವ ಚಿಂತನೆಯಲ್ಲಿದೆ.

 • Kolar

  POLITICS23, Feb 2019, 3:31 PM IST

  ಟಿಕೆಟ್ ಫೈಟ್: ದೇವಮೂಲೆಯಲ್ಲಿ ಮತ್ತೆ ‘ಕೈ’ ಪತಾಕೆ?

  ಮುನಿಯಪ್ಪ ಅವರಿಗೆ ನಿಜ ಶತ್ರುಗಳು ಕಾಂಗ್ರೆಸ್ ಪಕ್ಷದಲ್ಲೇ ಇದ್ದಾರೆ. ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಈಗ ಎರಡು ಗುಂಪುಗಳಾಗಿವೆ. ಜಿಲ್ಲೆಯ ಆಡಳಿತ ಮತ್ತು ಪಕ್ಷದ ಮೇಲೆ ಹಿಡಿತ ಸಾಧಿಸುವ ನಿಟ್ಟಿನಲ್ಲಿ ಪೈಪೋಟಿಗೆ ಬಿದ್ದಿರುವ ಗುಂಪುಗಳಲ್ಲಿ ರಾಜಕೀಯ ಕೆಸರೆರಚಾಟ ದಿನೇದಿನೆ ಹೆಚ್ಚಾಗಿದೆ. ಬೇರೆ ಕ್ಷೇತ್ರದಲ್ಲಿ ಮುನಿಯಪ್ಪ ಅವರಿಗೆ ಟಿಕೆಟ್ ಕೊಡಿ ಕೋಲಾರಕ್ಕೆ ಮಾತ್ರ ಬೇಡ. ಬೇಕಿದ್ದರೆ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಡಿ ಎಂಬಂತ ಮಾತುಗಳು ಮುನಿಯಪ್ಪ ವಿರೋಧಿಗಳಿಂದ ಕೇಳಿಬರುತ್ತಿದೆ. ಬಿಜೆಪಿಯಿಂದ ವೀರಯ್ಯ, ಲಿಂಬಾವಳಿ, ವೈ. ಸಂಪಂಗಿ ಆಕಾಂಕ್ಷಿಗಳ ರೇಸ್‌ನಲ್ಲಿ ಇದ್ದಾರೆ.

 • BNG Rural

  POLITICS15, Feb 2019, 5:06 PM IST

  ಟಿಕೆಟ್ ಫೈಟ್: ಡಿಕೆ+ಎಚ್‌ಡಿಕೆ ವರ್ಸಸ್‌ ಯೋಗಿ?

  ಕಾಂಗ್ರೆಸ್- ಜೆಡಿಎಸ್ ಜಿದ್ದಾಜಿದ್ದಿ ಅಖಾಡವಾಗಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಮಿತ್ರಕೂಟದ ಅಭ್ಯರ್ಥಿಯಾಗಿ ಹಾಲಿ ಸಂಸದ ಡಿ.ಕೆ. ಸುರೇಶ್ ಅವರೇ ಅಭ್ಯರ್ಥಿಯಾಗುವುದು ನಿಶ್ಚಿತವೂ ಆಗಿದೆ. ಆದರೆ ಈ ದೋಸ್ತಿಗಳನ್ನು ಸದೆಬಡಿಯಲು ಬಿಜೆಪಿ ಯಾರನ್ನು ಕಣಕ್ಕಿಳಿಸುತ್ತದೆ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಚನ್ನಪಟ್ಟಣದಲ್ಲಿ ತಮ್ಮನ್ನು ಮಣಿಸಿರುವ ಕುಮಾರಸ್ವಾಮಿ ಹಾಗೂ ಡಿಕೆ ಬ್ರದರ್ಸ್‌ಗಳನ್ನು ಮಣಿಸಲು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುತ್ತಾರಾ ಎಂಬ ಕುತೂಹಲವಿದೆ

 • Vijayapura

  POLITICS14, Feb 2019, 5:19 PM IST

  ಟಿಕೆಟ್ ಫೈಟ್: ವಿಜಯಪುರದಲ್ಲಿ ಜಿಗಜಿಣಗಿ V/S ಅಲಗೂರ?

  4 ಲಕ್ಷ ದಲಿತ ಮತದಾರರು ಇರುವ ಈ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ದಲಿತರಿಗೆ ಟಿಕೆಟ್ ನೀಡದೆ ಸತತ ಮೂರು ಬಾರಿ ಬಂಜಾರಾ ಸಮಾಜದ ಪ್ರಕಾಶ ರಾಠೋಡಗೆ ಟಿಕೆಟ್ ನೀಡುತ್ತ ಬಂದಿದೆ. ಇದರಿಂದಾಗಿ ದಲಿತರು ಅನಿವಾರ್ಯವಾಗಿ ಬಿಜೆಪಿಗೆ ವೋಟ್ ಹಾಕಿ ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸುತ್ತ ಬಂದಿದ್ದಾರೆ. ಪ್ರಕಾಶ ರಾಠೋಡ ಸೋಲುತ್ತಲೇ ಬಂದಿದ್ದಾರೆ. ಈ ಸತ್ಯವನ್ನು ಅರಿತ ಕಾಂಗ್ರೆಸ್ ನಾಯಕರು ಈ ಬಾರಿ ದಲಿತರಿಗೆ ಟಿಕೆಟ್ ನೀಡಲು ಆಲೋಚನೆಯಲ್ಲಿ ತೊಡಗಿದ್ದಾರೆ. ಏಕೆಂದರೆ ಪ್ರಕಾಶ ರಾಠೋಡ ಅವರು ಈಗಾಗಲೇ ಕ್ರೀಡಾ ಕೋಟಾದಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಾಮಕರಣಗೊಂಡಿದ್ದಾರೆ.

 • Chikkodi

  POLITICS13, Feb 2019, 2:22 PM IST

  ಟಿಕೆಟ್ ಫೈಟ್: ಬಿಜೆಪಿ ಟಿಕೆಟ್‌ಗೆ ಸವದಿ, ಕತ್ತಿ, ಕೋರೆ ಫೈಟ್‌

  ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಕ್ಕರೆ ಲಾಬಿಯದ್ದೇ ಪ್ರಾಬಲ್ಯ. ಟಿಕೆಟ್‌ಗಾಗಿ ಪ್ರಯತ್ನಿಸುತ್ತಿರುವ ಬಹುತೇಕ ನಾಯಕರು ಕೂಡ ಸಕ್ಕರೆ ಕಾರ್ಖಾನೆಗಳ ಜತೆಗೆ ನಂಟು ಹೊಂದಿದವರೇ ಆಗಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಾಗಿದ್ದು, ವಿವಿಧ ಸಮುದಾಯಗಳ ಜತೆಗೂ ಒಡನಾಟ ಹೊಂದಿರುವ ಹಾಲಿ ಸಂಸದ ಪ್ರಕಾಶ್ ಹುಕ್ಕೇರಿ ಎರಡು ಕ್ಷೇತ್ರಗಳಿಗೆ ಸೀಮಿತ ಎಂಬ ವಾದವಿದೆ. ಅವರನ್ನು ಮಣಿಸುವ ಉತ್ಸಾಹದಲ್ಲಿರುವ ಬಿಜೆಪಿಯಲ್ಲಿ ಟಿಕೆಟ್‌ಗೆ ಭರ್ಜರಿ ಪೈಪೋಟಿ ನಡೆಯುತ್ತಿದೆ. ಈ ಕುರಿತು ಚಿತ್ರಣ ಇಲ್ಲಿದೆ.

 • tumkur

  POLITICS13, Feb 2019, 2:07 PM IST

  ಟಿಕೆಟ್ ಫೈಟ್: ಕಾಂಗ್ರೆಸ್‌ ಸಂಸದ ಜೆಡಿಎಸ್‌ ಅಭ್ಯರ್ಥಿ ಆಗ್ತಾರಾ?

  ಒಕ್ಕಲಿಗರು, ವೀರಶೈವರು ಸಮಪ್ರಮಾಣದಲ್ಲಿರುವ ಹಾಗೂ ಅಹಿಂದ ವರ್ಗಗಳು ತುಸು ಹೆಚ್ಚಿನ ಸಂಖ್ಯೆಯಲ್ಲಿರುವ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರೂ ಪಕ್ಷಗಳ ಪ್ರಾಬಲ್ಯವಿದೆ. ಈ ಬಾರಿ ಕಾಂಗ್ರೆಸ್- ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟು, ಕ್ಷೇತ್ರ ಜೆಡಿಎಸ್ ಪಾಲಾಗುವ ಎಲ್ಲ ಸಾಧ್ಯತೆಗಳಿವೆ. ಹೀಗಾಗಿ ಹಾಲಿ ಸಂಸದ ಮುದ್ದಹನುಮೇಗೌಡ ಜೆಡಿಎಸ್‌ಗೆ ಸೇರಿ ಅಲ್ಲಿಂದ ಅಭ್ಯರ್ಥಿಯಾಗುತ್ತಾರೆ ಎನ್ನಲಾಗುತ್ತಿದೆ. ಈ ನಡುವೆ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿರುವ ನಾಯಕರು ಕಾಂಗ್ರೆಸ್ ಹಾಗೂ ಬಿಜೆಪಿ ಎರಡರಲ್ಲೂ ಟಿಕೆಟ್‌ಗೆ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.

 • Koppala

  POLITICS12, Feb 2019, 5:10 PM IST

  ಟಿಕೆಟ್ ಫೈಟ್: ಸಿದ್ದು ಸ್ಪರ್ಧೆ ವದಂತಿಯಿಂದ ಕೊಪ್ಪಳ ಕ್ಷೇತ್ರದಲ್ಲಿ ಸಂಚಲನ

  2013ರ ವಿಧಾನಸಭೆ ಚುನಾವಣೆಯಲ್ಲಿ ಅನುಭವಿಸಿದ್ದ ಸೋಲಿನ ಹಿನ್ನೆಲೆಯಲ್ಲಿ ಸೃಷ್ಟಿಯಾಗಿದ್ದ ಅನುಕಂಪ ಹಾಗೂ ನರೇಂದ್ರ ಮೋದಿ ಅವರ ಅಲೆಯಿಂದಾಗಿ ಸಂಗಣ್ಣ ಕರಡಿ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಸುಲಭವಾಗಿ ಗೆದ್ದುಬಂದಿದ್ದರು. ಆದರೆ ಈ ಬಾರಿ ಅವರಿಗೆ ಸಿದ್ದರಾಮಯ್ಯ ‘ಗುಮ್ಮ’ ಕಾಡುತ್ತಿದೆ. ಜತೆಗೆ ಕಾಂಗ್ರೆಸ್- ಜೆಡಿಎಸ್ ದೋಸ್ತಿಯೂ ಏರ್ಪಡುವ ಸಾಧ್ಯತೆ ಇದೆ. ಬಿಜೆಪಿ ಪ್ರಬಲವಾಗಿರುವುದು ಸಂಗಣ್ಣ ಅವರಿಗೆ ಪ್ಲಸ್. ಸಂಗಣ್ಣ ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದ್ದರೂ, ಆಕಾಂಕ್ಷಿಗಳು ಬಿಜೆಪಿ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ನಲ್ಲೂ ಲಾಬಿ ನಡೆಯುತ್ತಿದೆ.

 • Ballari

  POLITICS10, Feb 2019, 4:41 PM IST

  ಟಿಕೆಟ್ ಫೈಟ್: ಉಗ್ರಪ್ಪಗೆ ಮೈತ್ರಿ ಟಿಕೆಟ್‌ ಖಚಿತ, ಬಿಜೆಪಿಯಿಂದ ಯಾರೆಂಬುದೇ ಅನಿಶ್ಚಿತ!

  2004ರಿಂದ ಬಿಜೆಪಿ ಕೋಟೆಯಾಗಿದ್ದ ಬಳ್ಳಾರಿಯಲ್ಲಿ 2018ರ ಉಪಚುನಾವಣೆಯಲ್ಲಿ ಕಾಂಗ್ರೆಸ್ಸಿನ ಪತಾಕೆ ಹಾರಿಸಿದವರು ವಿ.ಎಸ್. ಉಗ್ರಪ್ಪ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮತ್ತೊಮ್ಮೆ ಅವರ ಸ್ಪರ್ಧೆ ಬಹುತೇಕ ಖಚಿತ. ಅವರ ಎದುರು ಬಿಜೆಪಿಯಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುದು ಸದ್ಯಕ್ಕೆ ಸಸ್ಪೆನ್ಸ್. ಮಾಜಿ ಸಂಸದ ಬಿ. ಶ್ರೀರಾಮುಲು ಸೋದರಿ ಜೆ. ಶಾಂತಾ ಅವರನ್ನು ಉಪಚುನಾವಣೆಯಲ್ಲಿ ಉಗ್ರಪ್ಪ ಮಣಿಸಿದ್ದರು. ಅವರೇ ಮತ್ತೊಮ್ಮೆ ಅಭ್ಯರ್ಥಿಯಾಗುತ್ತಾರಾ? ಹಾಗೇನಾದರೂ ಆದರೆ ಬಿಜೆಪಿ ತಂತ್ರಗಾರಿಕೆ ಏನು? ಎಂಬಿತ್ಯಾದಿ ವಿಚಾರಗಳ ಬಗ್ಗೆ ವಿಶ್ಲೇಷಣೆ ಇಲ್ಲಿದೆ.

 • Kalaburagi

  state8, Feb 2019, 3:55 PM IST

  ಟಿಕೆಟ್ ಫೈಟ್ : ಖರ್ಗೆ ಮಣಿಸಲು ‘ಕೈ’ಗೆ ಬಿಜೆಪಿ ಆಪರೇಷನ್‌?

  ಸತತ 2 ಬಾರಿ ಕಲಬುರಗಿ ಕ್ಷೇತ್ರದಿಂದ ಆಯ್ಕೆಯಾಗಿ ರಾಷ್ಟ್ರ ರಾಜಕಾರಣದಲ್ಲಿ ಮಿಂಚುತ್ತಿರುವ ಹಿರಿಯ ಕಾಂಗ್ರೆಸ್ಸಿನ ಡಾ.ಎಂ ಮಲ್ಲಿಕಾರ್ಜುನ ಖರ್ಗೆ ಅವರು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ನಾಲ್ಕೂವರೆ ದಶಕಗಳ ಕಾಲ ರಾಜಕೀಯ ಜೀವನದಲ್ಲಿ ಖರ್ಗೆ ಅವರು ಚುನಾವಣೆಯಲ್ಲಿ ಎಂದಿಗೂ ಪರಾಭವಗೊಂಡವರೆ ಅಲ್ಲ. ಆದರೆ ಈ ಬಾರಿ ಖರ್ಗೆ ಮಣಿಸಲು ಬಿಜೆಪಿ ತಂತ್ರ ರೂಪಿಸುತ್ತಿದೆ. 

 • Dharwad

  POLITICS7, Feb 2019, 12:26 PM IST

  ಟಿಕೆಟ್ ಫೈಟ್: ಜೋಶಿ ವಿರುದ್ಧ ಮತ್ತೆ ಕುಲಕರ್ಣಿ ಅಖಾಡಕ್ಕೆ?

  ಧಾರವಾಡ ಜಿಲ್ಲೆಯ ಏಳು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ಸೇರಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಇದು ಹೊಂದಿದೆ. ಎಂಟು ಕ್ಷೇತ್ರಗಳ ಪೈಕಿ ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಶಾಸಕರು ಇದ್ದಾರೆ. ಧಾರವಾಡ ಜಿಲ್ಲೆಯ ಐದು, ಹಾವೇರಿ ಜಿಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಆರು ಶಾಸಕರಿರುವುದು ಬಿಜೆಪಿಗೆ ಹೆಚ್ಚು ಅನುಕೂಲಕರ. ಆದರೆ ಕಾಂಗ್ರೆಸ್ಸಿಗರೆಲ್ಲರೂ ಒಳಜಗಳ ಮರೆತು ಒಗ್ಗಟ್ಟಾದರೆ ನಿಜಕ್ಕೂ ಬಿಜೆಪಿಗೆ ಕಷ್ಟ.

 • Ticket Fight

  POLITICS6, Feb 2019, 4:01 PM IST

  ಟಿಕೆಟ್ ಫೈಟ್: ಶಿವಮೊಗ್ಗದಿಂದ ಮಧು ಸ್ಪರ್ಧಿಸ್ತಾರಾ? ಗೀತಾ ಕಣಕ್ಕಿಳೀತಾರಾ?

  ‘ಮಲೆನಾಡ ಹೆಬ್ಬಾಗಿಲು’ ಶಿವಮೊಗ್ಗ ಜಿಲ್ಲೆ ರಾಜ್ಯ ರಾಜಕಾರಣದಲ್ಲಿ ಮೊದಲಿನಿಂದಲೂ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. 3 ತಿಂಗಳ ಹಿಂದಷ್ಟೇ ಸಂಸದರನ್ನು ಆರಿಸಿದ್ದ ಇಲ್ಲಿನ ಮತದಾರರು ನೂತನ
  ಸಂಸದನನ್ನು ಇನ್ನೆರಡು ತಿಂಗಳಲ್ಲಿ ಆಯ್ಕೆ ಮಾಡಬೇಕಾಗಿದೆ. ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಜೆಡಿಎಸ್- 
  ಕಾಂಗ್ರೆಸ್ ಮೈತ್ರಿ ಏರ್ಪಟ್ಟರೆ ರಾಘವೇಂದ್ರ ವಿರುದ್ಧ ಉಪಚುನಾವಣೆಯಲ್ಲಿ ಪರಾಜಿತರಾಗಿದ್ದ ಮಧು ಬಂಗಾರಪ್ಪ ಹುರಿಯಾಳಾಗುತ್ತಾರೆ. ಈ ನಡುವೆ ಗೀತಾ ಶಿವರಾಜಕುಮಾರ್ ಹೆಸರೂ ಚಾಲ್ತಿಯಲ್ಲಿದೆ.

 • Dakshina Kannada

  POLITICS5, Feb 2019, 12:43 PM IST

  ಟಿಕೆಟ್ ಫೈಟ್: ಬಿಜೆಪಿ ಭದ್ರಕೋಟೆ ಕಸಿಯಲು ಕಾಂಗ್ರೆಸ್‌ ಕಸರತ್ತು!

  ಕಳೆದ 27 ವರ್ಷಗಳಿಂದ ಬಿಜೆಪಿ ಅಧಿಪತ್ಯ ಸಾಧಿಸಿರುವ ಈ ಲೋಕಸಭಾ ಸ್ಥಾನವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಲು ಮುಂದಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಈ ಬಾರಿ ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಕೋಮುವಾದದ ಸಂಗತಿಗಳು ಎರಡೂ ಪಕ್ಷಗಳಿಗೆ ಸಿಗುತ್ತಿಲ್ಲ. ಹಾಗಾಗಿ ಅಭಿವೃದ್ಧಿ ವೈಫಲ್ಯವನ್ನೇ ಈ ಬಾರಿ ಚುನಾವಣಾ ಪ್ರಚಾರಕ್ಕೆ ಬಂಡವಾಳ ಮಾಡಿಕೊಂಡಿವೆ. ಬಿಜೆಪಿ ರಾಜ್ಯ ಸಮ್ಮಿಶ್ರ ಸರ್ಕಾರದ ಪ್ರತಿಯೊಂದು ನಡೆಯನ್ನೂ ಟೀಕಿಸುತ್ತಾ ಆರೋಪಿಸುತ್ತಿದ್ದರೆ, ಕಾಂಗ್ರೆಸ್ ಕೂಡ ಕೇಂದ್ರದ ನೀತಿಗಳನ್ನು ಪಟ್ಟಿ ಮಾಡಿದೆ.

 • Chikkaballapura

  POLITICS4, Feb 2019, 1:41 PM IST

  ಟಿಕೆಟ್ ಫೈಟ್ : ಚಿಕ್ಕಬಳ್ಳಾಪುರದಲ್ಲಿ 2 ಬಾರಿ ಗೆದ್ದಿದ್ದರೂ ಮೊಯ್ಲಿಗೆ ಟಿಕೆಟ್ ಕಗ್ಗಂಟು!

  ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿರುವ ವೀರಪ್ಪ ಮೊಯ್ಲಿ ಚುನಾವಣೆಗೂ ಮುನ್ನವೇ ಟಿಕೆಟ್‌ಗಾಗಿ ಹೋರಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವಿರುವುದರಿಂದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಇಬ್ಬರು ಶಾಸಕರೂ ಇರುವುದರಿಂದ ಜೆಡಿಎಸ್ ಈ ಕ್ಷೇತ್ರಕ್ಕೆ ಪಟ್ಟು ಹಿಡಿವ ಸಂಭವವಿದೆ. ಅದನ್ನು ತಪ್ಪಿಸಲು ಶತಾಯಗತಾಯ ಮೊಯ್ಲಿ ಪ್ರಯತ್ನಿಸುತ್ತಿದ್ದಾರೆ. ತಳಮಟ್ಟದಲ್ಲಿ ಕಾಂಗ್ರೆಸ್- ಜೆಡಿಎಸ್ ವೈರಿಗಳಂತಿರುವುದರಿಂದ ಮೈತ್ರಿ ಏರ್ಪಟ್ಟರೂ ಮತಗಳ ವರ್ಗಾವಣೆ ಎಷ್ಟರ ಮಟ್ಟಿಗೆ ಆಗಲಿದೆ ಎಂಬುದು ಪ್ರಶ್ನಾರ್ಥಕವಾಗಿಯೇ ಉಳಿದಿದೆ. ಈ ಬಗ್ಗೆ ಇಂದಿನ ವಿಶ್ಲೇಷಣೆ.

 • Ticket Fight

  POLITICS31, Jan 2019, 12:13 PM IST

  ಟಿಕೆಟ್ ಫೈಟ್: ಉತ್ತರ ಕನ್ನಡದಲ್ಲಿ ಹೆಗಡೆ ಓಟಕ್ಕೆ ದೇಶಪಾಂಡೆ ಹಾಕ್ತಾರಾ ತಡೆ?

  ಪ್ರಧಾನಿ ನರೇಂದ್ರ ಮೋದಿ ಅಲೆ, ಹಿಂದುತ್ವ ಹಾಗೂ ರಾಷ್ಟ್ರೀಯವಾದ ಪ್ರಬಲವಾಗಿರುವ ಕ್ಷೇತ್ರ ಉತ್ತರ ಕನ್ನಡ. ಬಿಜೆಪಿಯಿಂದ ಅನಂತಕುಮಾರ್ ಹೆಗಡೆ ಅವರು ಇಲ್ಲಿಂದ ಪುನರಾಯ್ಕೆಯಾಗುತ್ತಲೇ ಇದ್ದಾರೆ. ಅವರನ್ನು ಮಣಿಸಲು ಕಾಂಗ್ರೆಸ್ ಶತಪ್ರಯತ್ನ ನಡೆಸುತ್ತಿದೆಯಾದರೂ ಯಶಸ್ಸು ಸಿಕ್ಕಿಲ್ಲ. ಈ ಬಾರಿಯಾದರೂ ಕಾಂಗ್ರೆಸ್ಸಿನ ಕನಸು ನನಸಾಗುವುದೇ ಕಾದುನೋಡಬೇಕು. ಕಳೆದ ಬಾರಿ ಅನಂತ್ ಸಂಸದರಾಗಷ್ಟೇ ಇದ್ದರು. ಈಗ ಅವರು ಕೇಂದ್ರ ಸಚಿವರು. ಅಲ್ಲದೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ತಮ್ಮ ಹೇಳಿಕೆಗಳ ಮೂಲಕವೇ ಸುದ್ದಿಯಾಗಿದ್ದಾರೆ. ಸಚಿವರ ಕ್ಷೇತ್ರದಲ್ಲಿನ ರಾಜಕೀಯ ಚಿತ್ರಣ ಇಲ್ಲಿದೆ.