ನೆರೆ ಪರಿಹಾರ ಕೇಂದ್ರ  

(Search results - 8)
 • undefined

  Karnataka Districts13, Sep 2019, 12:50 PM

  ನೆರೆ ಪರಿಹಾರ: ಕೇಂದ್ರ ಕಡೆಗಣನೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

  ರಾಜ್ಯದಲ್ಲಿ ಜನ ನೆರೆ, ಪ್ರವಾಹದಿಂದ ಕಂಗೆಟ್ಟಿದ್ದರೂ ಕೇಂದ್ರ ಮಾತ್ರ ಯಾವುದೇ ಪರಿಹಾರ ಬಿಡುಗಡೆ ಮಾಡುವ ಬಗ್ಗೆ ಯೋಚಿಸ್ತಿಲ್ಲ. ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿವೆ. ಇಂಥ ಸಮಯದಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಸ್ಪಂದಿಸದ ಕೇಂದ್ರ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ.

 • Chapathi

  Karnataka Districts22, Aug 2019, 2:29 PM

  ಚಿಕ್ಕಮಗಳೂರು: ಪರಿಹಾರ ಕೇಂದ್ರದ ಕಸದ ರಾಶಿಯಲ್ಲಿ ಚಪಾತಿ..!

  ಪ್ರವಾಹ ಸಂತ್ರಸ್ತರಿಗೆ ನೀಡಲಾಗಿದ್ದ ಚಪಾತಿ ಕಸದ ರಾಶಿಯಲ್ಲಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಚಪಾತಿ ಬೇಡವಾಗಿದ್ದರೆ, ಬೇರೆ ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸಬೇಕಾಗಿತ್ತು ಅಥವಾ ಭಿಕ್ಷುಕರಿಗೆ ನೀಡಬಹುದಿತ್ತು. ಈ ರೀತಿಯಲ್ಲಿ ಎಸೆದು ಅವಮಾನ ಮಾಡಬಾರದಿತ್ತು ಎಂದು ಮೂಡಿಗೆರೆಯ ಬಿಳಗುಳದ ಅಲ್ತಾಪ್‌ ಎಂಬುವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

 • Relief Materials

  Karnataka Districts18, Aug 2019, 11:03 AM

  ನೆರೆ ಪರಿಹಾರ ಕೇಂದ್ರದಲ್ಲಿ ಕಿಟ್‌ಗಾಗಿ ಕಿತ್ತಾಟ

  ಗೋಣಿಕೊಪ್ಪ ಪರಿಹಾರ ಕಿಟ್‌ ವಿತರಣೆ ವಿಚಾರದಲ್ಲಿ ಮಾನವ ಹಕ್ಕು ಸಮಿತಿ ಪದಾಧಿಕಾರಿಗಳು ಅಧಿಕಾರಿಗಳ ಜೊತೆ ಗಲಾಟೆ ಮಾಡಿಕೊಂಡ ಘಟನೆ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಪರಿಹಾರ ಕೇಂದ್ರದಲ್ಲಿ ನಡೆದಿದ್ದು, ಪೊಲೀಸ್‌ ಠಾಣೆ ಮೆಟ್ಟಿಲೇರುವಂತಾಯಿತು.

 • Relief Materials

  Karnataka Districts15, Aug 2019, 2:33 PM

  ಶಿವಮೊಗ್ಗ: ಪರಿಹಾರ ಸಾಮಾಗ್ರಿ ಸಂಗ್ರಹ

  ಶಿವಮೊಗ್ಗದ ಮಹಾನಗರ ಪಾಲಿಕೆ ಆವರಣದ ನೆರೆ ಪರಿಹಾರ ಕೇಂದ್ರಕ್ಕೆ ಸಾಕಷ್ಟು ಪ್ರಮಾಣದಲ್ಲಿ ಪರಿಹಾರ ವಸ್ತುಗಳು ಬಂದು ಸೇರಿದ್ದು, ಆದ್ಯತೆಯ ಮೇರೆ ವಸಗ್ತುಗಳನ್ನು ಹಂಚಲು ತೀರ್ಮಾನಿಸಲಾಗಿದೆ. ಪಾಲಿಕೆ ಸಿಬ್ಬಂದಿ ಹಗಲಿರುಳೆನ್ನದೆ ಸಾಮಾಗ್ರಿಗಳನ್ನು ಪ್ರತ್ಯೇಕವಾಗಿಸಿ ಕಿಟ್‌ ರೂಪದಲ್ಲಿ ಸಿದ್ಧಪಡಿಸುತ್ತಿದ್ದಾರೆ.

 • kuttanad rain

  Karnataka Districts11, Aug 2019, 3:16 PM

  ಮಂಗಳೂರು: ಪುತ್ತೂರು ಉಪವಿಭಾಗದಲ್ಲಿ 10 ನೆರೆ ಪರಿಹಾರ ಕೇಂದ್ರ

  ಕರಾವಳಿಯಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದು, ಪುತ್ತೂರು ಉಪವಿಭಾಗದಲ್ಲಿ 10ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಬೆಳ್ತಂಗಡಿಯಲ್ಲಿ 5 ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ 271 ಮಂದಿ ಇದ್ದಾರೆ. ಪುತ್ತೂರು ತಾಲೂಕಿನಲ್ಲಿ 2, ಕಡಬ ತಾಲೂಕಿನಲ್ಲಿ 2 ಮತ್ತು ಸುಳ್ಯ ತಾಲೂಕಿನಲ್ಲಿ 1 ಇದೆ.

 • rain

  Karnataka Districts11, Aug 2019, 1:18 PM

  ಉಕ್ಕಿದ ತುಂಗಾಭದ್ರಾ: ಪರಿಹಾರ ಕೇಂದ್ರಕ್ಕೂ ನುಗ್ಗಿತು ನೀರು

  ಹೊನ್ನಾಳಿ ಪಟ್ಟಣದ ಬಾಲರಾಜ್‌ ಘಾಟ್‌ನಲ್ಲಿ ಆರಂಭಿಸಿರುವ ನೆರೆ ಸಂತ್ರಸ್ತರ ಕೇಂದ್ರಕ್ಕೆ ನೀರು ನುಗ್ಗಿದ ಹಿನ್ನೆಲೆ ತಾಲೂಕು ಆಡಳಿತ ಕೂಡಲೇ ಅಲ್ಲಿರುವ ಸಂತ್ರಸ್ತರನ್ನು ಪಟ್ಟಣದ ಸರ್ಕಾರಿ ಉರ್ದು ಬಾಲಕಿಯರು ಪ್ರಾಥಮಿಕ ಶಾಲೆಗೆ ಸ್ಥಳಾಂತರಿಸಿತು. ಅಂಗನವಾಡಿ ಕಾರ್ಯಕರ್ತೆ ಕೆ.ಎಸ್‌. ಮೆಹಬೂಬಿ ನೆರೆ ಸಂತ್ರಸ್ತರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದರು.

 • Flood Relief UAE

  Karnataka Districts11, Aug 2019, 11:02 AM

  ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ನಿಂದ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಸಂಗ್ರಹ

  ಉತ್ತರ ಕರ್ನಾಟಕ, ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನೆರೆ ಸಂತ್ರಸ್ತರು ಪರಿಹಾರ ಕೇಂದ್ರೆಗಳಲ್ಲಿ ಆಶ್ರಯ ಪಡೆದಿದ್ದಾರೆ. ಸುರಿಯುತ್ತಿರುವ ಭಾರಿ ಮಳೆಯಿಂದ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸಂತ್ರಸ್ತರು ತಂಗಿರುವ ನೆರೆ ಪರಿಹಾರ ಕೇಂದ್ರಗಳಿಗೆ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಪರಿಹಾರ ಕಲ್ಪಿಸಲು ಉದ್ದೇಶಿಸಲಾಗಿದೆ.

 • cauvery flood

  Karnataka Districts10, Aug 2019, 12:40 PM

  ಶಿವಮೊಗ್ಗ: ಜಿಲ್ಲಾಡಳಿತದಿಂದ 14 ನೆರೆ ಪರಿಹಾರ ಕೇಂದ್ರ

  ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾದ ಅನಾಹುತ, ಪರಿಸ್ಥಿತಿ ನಿಭಾಯಿಸಲು ಶಿವಮೊಗ್ಗದಲ್ಲಿ 14 ನೆರೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ವಮೊಗ್ಗ ನಗರದಲ್ಲಿ 7, ಭದ್ರಾವತಿ ಮತ್ತು ತೀರ್ಥಹಳ್ಳಿಯಲ್ಲಿ ತಲಾ ಒಂದು ಹಾಗೂ ಸೊರಬ ತಾಲೂಕಿನಲ್ಲಿ 5 ಪರಿಹಾರ ಕೇಂದ್ರ ತೆರೆಯಲಾಗಿದ್ದು, ಒಟ್ಟು 2250 ಮಂದಿ ಈ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.