ನೇತ್ರಾವತಿ ಸೇತುವೆ  

(Search results - 15)
 • <p>Netravathi</p>

  Karnataka Districts7, Jul 2020, 7:35 AM

  ಕೆಫೆ ಕಾಫೀ ಡೇ ಮಾಲೀಕ ಸಿದ್ಧಾರ್ಥ ಆತ್ಮಹತ್ಯೆ ಮಾಡಿದ್ದ ನೇತ್ರಾವತಿ ಸೇತುವೆಗೆ ತಡೆಬೇಲಿ

  ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್‌ ಆತ್ಮಹತ್ಯೆ ಮಾಡಿಕೊಂಡ ಮಂಗಳೂರಿನ ನೇತ್ರಾವತಿ ಸೇತುವೆಯಿಂದ ಇನ್ಮುಂದೆ ನದಿಗೆ ಹಾರಿ ಯಾರೂ ಆತ್ಮಹತ್ಯೆ ಮಾಡಬಾರದು ಎಂಬ ಉದ್ದೇಶ ಸರ್ಕಾರದ್ದು. ಅದಕ್ಕಾಗಿ ಸೇತುವೆಯ ಬದಿಗಳಲ್ಲಿ ತಂತಿ ಬೇಲಿ ನಿರ್ಮಾಣ ಕಾರ್ಯ ಆರಂಭವಾಗಿದೆ.

 • <p>private Bus</p>

  Karnataka Districts3, Jun 2020, 8:15 AM

  ಬಸ್‌ಗಳಿಗೆ ಪ್ರಯಾಣಿಕರ ಕೊರತೆ: ನಿಯಮ ಉಲ್ಲಂಘಿಸಿದ 15 ಬಸ್‌ಗೆ ದಂಡ

  ಕೊರೋನಾ ಭೀತಿಯ ನಡುವೆಯೇ ದ.ಕ.ಜಿಲ್ಲೆಯಲ್ಲಿ ಬಸ್‌ಗಳ ಓಡಾಟ ಆರಂಭವಾಗಿದೆ. ಆದರೆ ಪ್ರಯಾಣಿಕರ ಸಂಖ್ಯೆ ಮಾತ್ರ ವಿರಳವಾಗಿದೆ. ಕೊರೋನಾ ಭಯದಿಂದಾಗಿ ಇನ್ನೂ ಕೂಡ ಜನತೆ ಮನೆಯಿಂದ ಹೊರ ಹೋಗಲು ಹೆದರುತ್ತಿದ್ದಾರೆ. 15 ಬಸ್‌ಗಳ ಮೇಲೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಜೆಪ್ಪು ನೇತ್ರಾವತಿ ಸೇತುವೆ ಬಳಿ ಮತ್ತು ನಾಟೆಕಲ್‌ ಸಮೀಪ ದಂಡ ವಿಧಿಸಿದರು

 • Netravathi River

  Karnataka Districts18, Apr 2020, 7:30 AM

  ನೇತ್ರಾವತಿ ಸೇತುವೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

  ಉಳ್ಳಾಲ ನೇತ್ರಾವತಿ ಸೇತುವೆಯಿಂದ ಬುಧವಾರ ರಾತ್ರಿ ನಿಗೂಢವಾಗಿ ನಾಪತ್ತೆಯಾದ ಕೊಣಾಜೆ ಪುಳಿಂಚಾಡಿ ನಿವಾಸಿಯ ಮೃತದೇಹ ಶುಕ್ರವಾರ ಬೆಳಗ್ಗೆ ಉಳ್ಳಾಲದ ಉಳಿಯ ನದಿ ತೀರದಲ್ಲಿ ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಎಂದು ತಿಳಿದು ಬಂದಿದೆ.

 • netravati Bridge

  Karnataka Districts16, Feb 2020, 11:05 AM

  ನೇತ್ರಾವತಿಗೆ ಮತ್ತೆರಡು ಬಲಿ: ಮಗುವಿನೊಂದಿಗೆ ನದಿಗೆ ಹಾರಿದ ತಂದೆ

  ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯಾ ಪ್ರಕರಣಗಳು ನಡೆಯುತ್ತಲೇ ಇವೆ. ಕೆಫೆ ಕಾಫೀ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಆತ್ಮಹತ್ಯೆ ಮಾಡಿದ ಸೇತುವೆಯಲ್ಲೇ ವ್ಯಕ್ತಿಯೊಬ್ಬರು ಆರು ವರ್ಷದ ಮಗುವಿನ ಜೊತೆಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 • coffee day siddharth
  Video Icon

  BUSINESS25, Nov 2019, 4:35 PM

  ಸಾವಿನ ನಾಲ್ಕು ತಿಂಗಳ ಬಳಿಕ ಮತ್ತೊಂದು ಶಾಕ್! ಸಿದ್ದಾರ್ಥ ಕಂಪನಿಗೆ ಏಕಾಏಕಿ ಲಾಕ್

  ಕಾಫಿ ದೊರೆ ವಿ.ಜಿ. ಸಿದ್ದಾರ್ಥ ನಿಗೂಢ ಸಾವಿಗೆ ಸುಮಾರು ನಾಲ್ಕು ತಿಂಗಳುಗಳಾಗಿವೆ. ಅದರ ಬೆನ್ನಲ್ಲೇ ಎಬಿಸಿ ಒಡೆತನದ ಕಂಪೆನಿಯೊಂದಕ್ಕೆ ಬೀಗ ಹಾಕಲಾಗಿದೆ. ಕಳೆದ ಜು.29ರಂದು ಮಂಗಳೂರಿನ ನೇತ್ರಾವತಿ ಸೇತುವೆಯಿಂದ ನಾಪತ್ತೆಯಾಗಿದ್ದರು. ಜು.31ಕ್ಕೆ ಅವರ ಮೃತದೇಹ ಪತ್ತೆಯಾಗಿತ್ತು.

 • ಸಿದ್ಧಾರ್ಥ ಅವರು ಕಟ್ಟಿ ಬೆಳೆಸಿದ ಕಾಫಿ ಡೇ ಸಾಮ್ರಾಜ್ಯದ ಒಂದು ದೃಶ್ಯ

  Dakshina Kannada16, Oct 2019, 1:01 PM

  ಸಿದ್ಧಾರ್ಥ ಹೆಗ್ಡೆ ಆತ್ಮಹತ್ಯೆ ಜಾಗದಲ್ಲಿಯೇ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ ಯತ್ನ

  ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲಿಯೇ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. 

 • periyar river

  Karnataka Districts29, Sep 2019, 11:22 AM

  ಪತಿ ಸಾವಿನಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ

  ಪತಿ ಸಾವಿನಿಂದ ಮನನೊಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಜೊತೆ ನದಿಗೆ ಹಾರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
  ಮೈಸೂರು ನಗರದ ಸರಸ್ವತಿಪುರಂ ನಿವಾಸಿಗಳಾದ ಕವಿತಾ ಮಂಡಣ್ಣ(55), ಮಕ್ಕಳಾದ ಕೌಶಿಕ್ ಮಂಡಣ್ಣ(29) ಹಾಗೂ ಕಲ್ಪಿತಾ ಮಂಡಣ್ಣ(22). ಈ ಮೂವರ ಪೈಕಿ ಕವಿತಾ ಮಂಡಣ್ಣ ಅವರನ್ನು ಗೂಡಿನಬಳಿ ಸಮೀಪ ಸ್ಥಳೀಯ ಈಜುಗಾರರು ರಕ್ಷಿಸಿದ್ದು , ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 

 • Netravathi River

  Karnataka Districts29, Sep 2019, 10:26 AM

  ನೇತ್ರಾವತಿ ಸೇತುವೆಯಲ್ಲಿ ಮತ್ತೊಂದು ಆತ್ಮಹತ್ಯೆ: ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ

  ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಮತ್ತೊಂದು ಆತ್ಮಹತ್ಯೆ ಘಟನೆ ನಡೆದಿದೆ. ಪತಿ ಸಾವಿನಿಂದ ಮನನೊಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕವಿತಾ ಮಂಡಣ್ಣ ರವರನ್ನು ಗೂಡಿನಬಳಿ ಸಮೀಪ ಸ್ಥಳೀಯ ಈಜುಗಾರರು ರಕ್ಷಿಸಿದ್ದು , ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

 • Netravati Bridge

  Karnataka Districts5, Sep 2019, 12:16 PM

  ಸಿದ್ಧಾರ್ಥ್‌ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ನೇತ್ರಾವತಿ ಸೇತುವೆಗೆ ರಕ್ಷಣಾ ಗೋಡೆ..?

  ಉದ್ಯಮಿ ಸಿದ್ಧಾರ್ಥ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ನೇತ್ರಾವತಿ ನದಿಗೆ ತಡೆಗೋಡೆ ನಿರ್ಮಿಸುವ ಬಗ್ಗೆ ಚಿಂತಿಸಲಾಗಿದೆ. ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಯುವ  ನಿಟ್ಟಿನಲ್ಲಿಈ ಬಗ್ಗೆ ಸಲಹೆ ನೀಡಲಾಗಿದೆ.  ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಸಲಹೆ ಮಾಡಿದ್ದಾರೆ. ಈ ಕುರಿತು ದ.ಕ. ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದಾರೆ.

 • netravati Bridge

  Karnataka Districts4, Aug 2019, 8:00 PM

  ಮಂಗಳೂರು : ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ

  ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಜಿಗಿದಿದ್ದಾರೆ ಎನ್ನಲಾದ ಸೇತುವೆಯಿಂದಲೇ ಭಾನುವಾರ ಯುವಕನೊಬ್ಬ ನದಿಗೆ ಹಾರಿದ್ದು ರಕ್ಷಣೆ ಮಾಡಲಾಗಿದೆ. ಯುವಕ ಹಾರಿದ್ದು ಸ್ಥಳೀಯ ಮೀನುಗಾರರ ಗಮನಕ್ಕೆ ಬಂದಿದ್ದು ತಕ್ಷಣ ರಕ್ಷಣೆ ಮಾಡಿದ್ದಾರೆ.

 • Netravati Bridge

  Karnataka Districts3, Aug 2019, 2:16 PM

  ಮಂಗಳೂರು: ನೇತ್ರಾವತಿ ಸೇತುವೆಗೆ ಸಿಸಿ ಟಿವಿ ಅಳವಡಿಕೆ

  ನೇತ್ರಾವತಿ ಸೇತುವೆಯಲ್ಲಿಸಿಸಿಟಿವಿ ಅಳವಡಿಸುವ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಭರವಸೆ ನೀಡಿದ್ದಾರೆ. ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿ ಪರಿಣಮಿಸುತ್ತದೆ. ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಸಿಸಿಟಿವಿ ಅಳವಡಿಸಲು ನಿರ್ಧರಿಸಲಾಗಿದೆ.

 • ತಾಯಿ ವಾಸಂತಿಯೊಂದಿಗೆ ಪುಟ್ಟ ಸಿದ್ಧಾರ್ಥ

  NEWS2, Aug 2019, 10:08 AM

  ನೇತ್ರಾವತಿ ಸೇತುವೆ ಬಳಿ ಆಗಮಿಸುವ ಮುನ್ನ ಪತ್ರ ಪೋಸ್ಟ್ ಮಾಡಿದ್ದ ಸಿದ್ಧಾರ್ಥ

  ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ‘ಕಾಫಿ ಕಿಂಗ್‌’ ಸಿದ್ಧಾರ್ಥ ಅವರು ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆಗೆ ಶರಣಾದರು. ಅದಕ್ಕೂ ಮುನ್ನ ನಡೆದ ಹಲವು ವಿಚಾರಗಳನ್ನು ಅವರ ಚಾಲಕ ಬಿಚ್ಚಿಟ್ಟಿದ್ದಾರೆ. 

 • Video Icon

  NEWS31, Jul 2019, 7:24 PM

  ಕಾಫಿ ಸಾಮ್ರಾಟನಿಗೆ ಹುಟ್ಟೂರಿನಲ್ಲಿ ಕಣ್ಣೀರ ವಿದಾಯ

  ಕಾಫಿ ಸಾಮ್ರಾಟ ವಿ.ಜಿ. ಸಿದ್ಧಾರ್ಥ ಅಂತ್ಯಕ್ರಿಯೆ ಚಿಕ್ಕಮಗಳೂರಿನ ಮೂಡಿಗೆರೆಯ ಚೇತನಹಳ್ಳಿಯಲ್ಲಿ ನಡೆಯಿತು. ಸೋಮವಾರ ಸಂಜೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಸಿದ್ಧಾರ್ಥ, ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದರು. 

 • Cafe Coffee Day
  Video Icon

  NEWS31, Jul 2019, 12:56 PM

  ಅಗಲಿದ ಮಾಲೀಕ : ದೇಶಾದ್ಯಂತ ಕೆಫೆ ಕಾಫಿ ಡೇ ಬಂದ್

  ಸೋಮವಾರ ಸಂಜೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದ, ಕೆಫೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ಧಾರ್ಥ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರಿನ ಕಾಫಿ ಕಂಪನ್ನು ವಿಶ್ವದಾದ್ಯಂತ ಪಸರಿಸಿದ ಸಿದ್ಧಾರ್ಥ ಸಾವಿಗೆ ಕಾಫಿ ಡೇ ಸಿಬ್ಬಂದಿ ಕಣ್ಣೀರು ಹಾಕಿದ್ದಾರೆ. ದೇಶಾದ್ಯಂತ ಇಂದು ಕಾಫಿ ಡೇ ಶಾಪ್‌ಗಳು ಮುಚ್ಚಲಾಗಿದೆ.  

 • netravati Bridge

  NEWS31, Jul 2019, 9:18 AM

  ನೇತ್ರಾವತಿ ಸೇತುವೆ ಮೇಲೆ ವಾಹನ ಸಂಚಾರ ಅಸ್ತವ್ಯಸ್ತ

  ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಅವರ ಬಿದ್ದ ಸ್ಥಳ ನೇತ್ರಾವತಿ ಸೇತುವೆ ಮೇಲೆ ಭಾರೀ ಟ್ರಾಫಿಕ್ ಜಾಮ್ ಆಗಿತ್ತು.