Boxing Day Test
(Search results - 56)CricketJan 25, 2021, 11:11 AM IST
ಮೆಲ್ಬರ್ನ್ ಟೆಸ್ಟ್ ಶತಕದ ಸೀಕ್ರೇಟ್ ಬಿಚ್ಚಿಟ್ಟ ಅಜಿಂಕ್ಯ ರಹಾನೆ..!
ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 36 ರನ್ಗಳಿಗೆ ಆಲೌಟ್ ಆಗಿ ಭಾರೀ ಒತ್ತಡಕ್ಕೊಳಗಿದ್ದ ಬಳಿಕವೂ ಮೆಲ್ಬರ್ನ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಸಮಬಲ ಸಾಧಿಸಿತ್ತು. ಆ ಪಂದ್ಯದಲ್ಲಿ ನಾಯಕ ಅಜಿಂಕ್ಯ ರಹಾನೆ ಆಕರ್ಷಕ ಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
CricketDec 29, 2020, 5:11 PM IST
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ದಾಖಲಾದ 5 ಅಪರೂಪದ ದಾಖಲೆಗಳಿವು..!
ಬೆಂಗಳೂರು: ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಟೀಂ ಇಂಡಿಯಾ, ಮೆಲ್ಬರ್ನ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಕಾಂಗರೂ ಪಡೆಗೆ ತಿರುಗೇಟು ನೀಡುವಲ್ಲಿ ಅಜಿಂಕ್ಯ ರಹಾನೆ ಪಡೆ ಯಶಸ್ವಿಯಾಗಿದೆ.
ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಿಂದಲೂ ಮೇಲುಗೈ ಸಾಧಿಸುತ್ತಲೇ ಬಂದಿದ್ದ ಟೀಂ ಇಂಡಿಯಾ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಐತಿಹಾಸಿಕ ಗೆಲುವು ದಾಖಲಿಸುವ ಸರಣಿ ಸಮಬಲ ಸಾಧಿಸಿದೆ, ಮಾತ್ರವಲ್ಲ 5 ಅಪರೂಪದ ದಾಖಲೆಗಳು ಈ ಪಂದ್ಯದಲ್ಲಿ ನಿರ್ಮಾಣವಾಗಿದೆ. ಏನವು ದಾಖಲೆಗಳು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
CricketDec 29, 2020, 4:30 PM IST
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಸಿಕ್ಕ 4 ಮತ್ತುಗಳಿವು...!
ಮೆಲ್ಬರ್ನ್: ಭಾರತ-ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ ಉಭಯ ತಂಡಗಳು ತಲಾ 1-1ರ ಸಮಬಲ ಸಾಧಿಸಿದೆ.
ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ಗಳ ಹೀನಾಯ ಸೋಲು ಕಂಡಿದ್ದ ಟೀಂ ಇಂಡಿಯಾ ಇನ್ನುಳಿದ ಪಂದ್ಯಗಳಲ್ಲೂ ಹೀನಾಯ ಸೋಲು ಕಾಣಲಿದೆ ಎಂದು ಕ್ರಿಕೆಟ್ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಆದರೆ ಆಮೇಲೆ ಆಗಿದ್ದೇ ಬೇರೆ. ಮೆಲ್ಬರ್ನ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಸಿಕ್ಕ 4 ಅಮೂಲ್ಯ ಮತ್ತುಗಳೇನು ಎನ್ನುವುದರ ವಿವರ ಇಲ್ಲಿದೆ ನೋಡಿ.
CricketDec 29, 2020, 3:50 PM IST
ಬಾಕ್ಸಿಂಗ್ ಡೇ ಟೆಸ್ಟ್ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾಗೆ ಡಬಲ್ ಶಾಕ್!
ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದಿದ್ದ ಆಸ್ಟ್ರೇಲಿಯಾಗೆ 2ನೇ ಪಂದ್ಯದಲ್ಲಿ ಸೋಲಿನ ಆಘಾತ ಎದುರಾಗಿದೆ. ಮೆಲ್ಪೋರ್ನ್ ಪಂದ್ಯದಲ್ಲಿ ಆಸೀಸ್ ಹೀನಾಯ ಸೋಲು ಕಂಡಿದೆ. ಈ ಸೋಲಿನ ಬೆನ್ನಲ್ಲೇ ಮತ್ತೆರಡು ಆಘಾತ ಆಸ್ಟ್ರೇಲಿಯಾ ತಂಡಕ್ಕೆ ಎದುರಾಗಿದೆ. ಈ ಕುರಿತ ವಿವರ ಇಲ್ಲಿದೆ.
CricketDec 29, 2020, 11:21 AM IST
ಗಾಯಗೊಂಡ ಹುಲಿಯನ್ನು ಕೆಣಕದಿರಿ; ಟೀಂ ಇಂಡಿಯಾ ಗೆಲುವನ್ನು ಕೊಂಡಾಡಿದ ನೆಟ್ಟಿಗರು
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಮೊಹಮ್ಮದ್ ಶಮಿ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದರು. ಇದರಿಂದ ಭಾರತಕ್ಕೆ ಮತ್ತಷ್ಟು ಹಿನ್ನಡೆಯಾಗಬಹುದು ಎಂದು ಕ್ರಿಕೆಟ್ ಪಂಡಿತರು ಲೆಕ್ಕಾಚಾರ ಹಾಕಿದ್ದರು.
CricketDec 29, 2020, 9:34 AM IST
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಿಗ್ವಿಜಯ
ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ಗಳ ಹೀನಾಯ ಸೋಲು ಕಂಡಿದ್ದ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಕಾಂಗರೂ ಪಡೆಗೆ ಅವರ ನೆಲದಲ್ಲೇ ಭರ್ಜರಿ ತಿರುಗೇಟು ನೀಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ.
CricketDec 29, 2020, 9:06 AM IST
ಭಾರತಕ್ಕೆ ಡಬಲ್ ಶಾಕ್; ಅಗರ್ವಾಲ್-ಪೂಜಾರ ಔಟ್
ಎರಡನೇ ಇನಿಂಗ್ಸ್ನಲ್ಲಿ 200 ರನ್ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ 70 ರನ್ಗಳ ಗುರಿ ಪಡೆಯಿತು. ಸುಲಭ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಅನಾಯಾಸವಾಗಿ ಗೆಲುವು ದಾಖಲಿಸಲಿದೆ. ಮಯಾಂಕ್ ಅಗರ್ವಾಲ್ ಹಾಗೂ ಚೇತೇಶ್ವರ್ ಪೂಜಾರ ಫಾರ್ಮ್ಗೆ ಮರಳಬಹುದು ಎಂದು ನಿರೀಕ್ಷಿಸಲಾಗಿತ್ತು.
CricketDec 29, 2020, 7:44 AM IST
ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯಾ ಆಲೌಟ್ @200; ಭಾರತ ಗೆಲ್ಲಲು 70 ರನ್ ಗುರಿ
ಮೂರನೇ ದಿನದಾಟದಂತ್ಯಕ್ಕೆ ಎರಡನೇ ಇನಿಂಗ್ಸ್ನಲ್ಲಿ 6 ವಿಕೆಟ್ ಕಳೆದುಕೊಂಡು ಕೇವಲ133 ರನ್ ಬಾರಿಸಿದ್ದ ಆತಿಥೇಯ ಆಸ್ಟ್ರೇಲಿಯಾ ನಾಲ್ಕನೇ ದಿನವೂ ಸಾಕಷ್ಟು ಎಚ್ಚರಿಕೆಯ ಆಟಕ್ಕೆ ಮೊರೆ ಹೋಯಿತು. 7ನೇ ವಿಕೆಟ್ಗೆ ಕ್ಯಾಮರೋನ್ ಗ್ರೀನ್ ಹಾಗೂ ಪ್ಯಾಟ್ ಕಮಿನ್ಸ್ ಜೋಡಿ 213 ಎಸೆತಗಳನ್ನು ಎದುರಿಸಿ 57 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಮುನ್ನಡೆ ದಕ್ಕಿಸಿಕೊಡುವಲ್ಲಿ ಯಶಸ್ವಿಯಾದರು.
CricketDec 28, 2020, 3:50 PM IST
ಬಾಕ್ಸಿಂಗ್ ಡೇ ಟೆಸ್ಟ್; 3ನೇ ದಿನ ಭಾರತದ ಬಿಗಿ ಹಿಡಿತ, ಸಂಕಷ್ಟದಲ್ಲಿ ಆಸೀಸ್ ಪಡೆ!
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ 2ನೇ ಪಂದ್ಯದಲ್ಲಿ ಭರ್ಜರಿಯಾಗಿ ಕಮ್ಬ್ಯಾಕ್ ಮಾಡಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಪಂದ್ಯದ ಮೇಲಿನ ಹಿಡಿತ ಬಿಗಿಗೊಳಿಸಿದೆ. 3ನೇ ದಿನದಾಟದ ಹೈಲೈಟ್ಸ್ ಇಲ್ಲಿದೆ.
CricketDec 27, 2020, 2:57 PM IST
ಬಾಕ್ಸಿಂಗ್ ಡೇ ಟೆಸ್ಟ್: ರಹಾನೆಯಾಟಕ್ಕೆ ಜೈಹೋ ಎಂದ ನೆಟ್ಟಿಗರು
ಒಂದು ಹಂತದಲ್ಲಿ ಟೀಂ ಇಂಡಿಯಾ 64 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್ಗಿಳಿದ ಅಜಿಂಕ್ಯ ರಹಾನೆ ಕ್ಲಾಸ್ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಪಂಡಿತರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಆರಂಭದಿಂದಲೇ ಎಚ್ಚರಿಕೆಯ ಬ್ಯಾಟಿಂಗಿಗೆ ಮೊರೆ ಹೋದ ರಹಾನೆ ಮಧ್ಯಮ ಕ್ರಮಾಂಕದಲ್ಲಿ ಹನುಮ ವಿಹಾರಿ ಹಾಗೂ ರಿಷಭ್ ಪಂತ್ ಜತೆ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಬಲ ತುಂಬಿದರು.
CricketDec 27, 2020, 1:07 PM IST
ಬಾಕ್ಸಿಂಗ್ ಡೇ ಟೆಸ್ಟ್: ರಹಾನೆ ಶತಕ, ಭಾರತಕ್ಕೆ 82 ರನ್ಗಳ ಮುನ್ನಡೆ
ಮೊದಲ ದಿನದಾಟದಂತ್ಯಕ್ಕೆ ಒಂದು ವಿಕೆಟ್ ಕಳೆದುಕೊಂಡು 36 ರನ್ ಗಳಿಸಿದ್ದ ಟೀಂ ಇಂಡಿಯಾ ಎರಡನೇ ದಿನದಾಟವನ್ನು ಅತ್ಯಂತ ಎಚ್ಚರಿಕೆಯಿಂದ ಆರಂಭಿಸಿತು. ಎರಡನೇ ವಿಕೆಟ್ಗೆ ಪೂಜಾರ ಮತ್ತು ಗಿಲ್ ಜೋಡಿ 61 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಗಿಲ್ 45 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ ಆಟ ಕೇವಲ 17 ರನ್ಗಳಿಗೆ ಸೀಮಿತವಾಯಿತು.
CricketDec 27, 2020, 12:23 PM IST
ಬಾಕ್ಸಿಂಗ್ ಡೇ ಟೆಸ್ಟ್: ಭರ್ಜರಿ ಶತಕ ಬಾರಿಸಿದ ಅಜಿಂಕ್ಯ ರಹಾನೆ
ಟೀಂ ಇಂಡಿಯಾ ಕೇವಲ 63 ರನ್ಗಳಿಗೆ 3 ವಿಕೆಟ್ ಕಳೆದುಕೊಂಡಾಗ ಕ್ರೀಸ್ಗಿಳಿದ ರಹಾನೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ನಾಯಕನ ಆಟ ಪ್ರದರ್ಶಿಸಿದ್ದಾರೆ. ಸಾಕಷ್ಟು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ರಹಾನೆ 195 ಎಸೆತಗಳನ್ನು ಎದುರಿಸಿ 11 ಬೌಂಡರಿಗಳ ನೆರವಿನಿಂದ ಟೆಸ್ಟ್ ವೃತ್ತಿಜೀವನದ 12ನೇ ಶತಕ ಪೂರೈಸಿದರು.
CricketDec 27, 2020, 10:17 AM IST
ಬಾಕ್ಸಿಂಗ್ ಡೇ ಟೆಸ್ಟ್: ನಾಯಕ ರಹಾನೆ ಆಕರ್ಷಕ ಅರ್ಧಶತಕ
ಆಸ್ಟ್ರೇಲಿಯಾ ತಂಡವನ್ನು ಮೊದಲ ಇನಿಂಗ್ಸ್ನಲ್ಲಿ ಕೇವಲ 195 ರನ್ಗಳಿಗೆ ನಿಯಂತ್ರಿಸಿದ್ದ ಭಾರತ ತಂಡ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ಗೆ ಮೊರೆ ಹೋಗಿದೆ.
CricketDec 27, 2020, 8:02 AM IST
ಬಾಕ್ಸಿಂಗ್ ಡೇ ಟೆಸ್ಟ್: ಗಿಲ್-ಪೂಜಾರ ಔಟ್..!
ಮೊದಲ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 36 ರನ್ ಬಾರಿಸಿದ್ದ ಟೀಂ ಇಂಡಿಯಾ ಎರಡನೇ ದಿನವನ್ನು ತುಂಬ ಎಚ್ಚರಿಕೆಯಿಂದಲೇ ಆರಂಭಿಸಿತು. ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಮಂದಗತಿಯ ಬ್ಯಾಟಿಂಗ್ ಮೊರೆಹೋದರೆ, ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿರುವ ಗಿಲ್ ಆಕರ್ಷಕ ಬೌಂಡರಿಗಳ ಮೂಲಕ ಗಮನ ಸೆಳೆದರು.
CricketDec 26, 2020, 4:58 PM IST
ಬಾಕ್ಸಿಂಗ್ ಡೇ ಟೆಸ್ಟ್: ಕ್ರಿಕೆಟ್ ಪಂಡಿತರ ಮನಗೆದ್ದ ರಹಾನೆ ನಾಯಕತ್ವ
ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅದರಲ್ಲೂ ಅಡಿಲೇಡ್ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಆಘಾತಕಾರಿ ಸೋಲು ಕಂಡಿತ್ತು.