C T Ravi
(Search results - 57)stateNov 9, 2020, 9:23 AM IST
ಅಕ್ರಮ ಆಸ್ತಿ ವಿಚಾರಣೆ: ಸಿ.ಟಿ. ರವಿ ಅರ್ಜಿ ವಜಾ
ಅಕ್ರಮ ಆಸ್ತಿಗಳಿಕೆ ಆರೋಪ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಶಾಸಕ ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಇತ್ತೀಚೆಗೆ ಆದೇಶಿಸಿದೆ.
Karnataka DistrictsOct 24, 2020, 3:02 PM IST
ಅಕ್ಕಿ ಉಚಿತವಾಗಿ ಕೊಡ್ತೀವಿ, ಕೊರೋನಾ ಲಸಿಕೆಗೆ ಏಕೆ ವಿರೋಧ? ಸಿ.ಟಿ. ರವಿ
ಬಿಜೆಪಿ ಗೆದ್ದರೆ ಬಿಹಾರದಲ್ಲಿ ಕೊರೋನಾ ಸೋಂಕಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವುದನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಮರ್ಥಿಸಿಕೊಂಡಿದ್ದಾರೆ.
PoliticsOct 22, 2020, 3:43 PM IST
ಕಾಂಗ್ರೆಸ್ನ ಹುಟ್ಟುಗುಣ ಸುಟ್ಟರೂ ಹೋಗದು: ಸಿಟಿ ರವಿ
ಮಕ್ಕಳ ಪ್ರವಾಸದಲ್ಲೂ ಜಾತಿಯ ವಿಷ ಬೀಜ ಬಿತ್ತುವ, ನಿರ್ದಿಷ್ಟಕೋಮಿಗೆ ಮಾತ್ರ ಶಾದಿಭಾಗ್ಯ ಯೋಜನೆ ತಂದು ಮತಬ್ಯಾಂಕ್ ರಾಜಕಾರಣ ಮಾಡುವ ಕಾಂಗ್ರೆಸ್ನದು ಹುಟ್ಟುಗುಣ. ಅದು ಸುಟ್ಟರೂ ಹೋಗದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟೀಕಿಸಿದ್ದಾರೆ.
PoliticsOct 22, 2020, 1:25 PM IST
'ಕಾಂಗ್ರೆಸ್ಗೆ ಭಾರತದಲ್ಲಿ ಮತದಾರರೇ ಇಲ್ಲ, ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ನಿಂತರೆ ಗೆಲ್ಲಬಹುದು'
ಶಾಸಕ ಜಮೀರ್ ಅಹ್ಮದ್ ಹೇಳಿದಂತೆ ಸಿದ್ದರಾಮಯ್ಯ ಅವರು ಮತ್ತೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ. ಕಾಂಗ್ರೆಸ್ಗೆ ಭಾರತದಲ್ಲಿ ಮತದಾರರೇ ಇಲ್ಲದಂತೆ ಆಗಿದೆ. ಹೀಗಾಗಿ, ಸಿದ್ದರಾಮಯ್ಯ ಅವರು ಬೇಕಾದರೆ ಪಾಕಿಸ್ತಾನದಲ್ಲಿ ನಿಂತರೆ ಗೆಲ್ಲಬಹುದು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ವ್ಯಂಗ್ಯವಾಡಿದರು.
PoliticsOct 21, 2020, 2:58 PM IST
'ಕಾಂಗ್ರೆಸ್ ಮುಖಂಡರು ಪಾಕಿಸ್ತಾನಕ್ಕೆ ಹೋಗಿ ಗೆಲ್ಲಲಿ'
ಉಪ ಚುನಾವಣೆಯಲ್ಲಿ ಗೆಲ್ಲುವ ಕನಸು ಕಾಣುತ್ತಿರುವ ಕಾಂಗ್ರೆಸ್ ಮುಖಂಡರು ಪಾಕಿಸ್ತಾನಕ್ಕೆ ಹೋಗಿ ಗೆಲ್ಲಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಚಿವ ಸಿ.ಟಿ. ರವಿ ಹೇಳಿದ್ದಾರೆ.
Karnataka DistrictsOct 21, 2020, 1:26 PM IST
ನಾನು ಬಸನಗೌಡ ಪಾಟೀಲ್ ಯತ್ನಾಳ್ನಷ್ಟು ಬುದ್ಧಿವಂತನಲ್ಲ: ಸಿ.ಟಿ. ರವಿ
ಸಮಗ್ರ ಕರ್ನಾಟಕ್ಕೆ ಯೋಗ ಮತ್ತು ಯೋಗ್ಯತೆ ಇದ್ದವರು ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು, ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿರಬಹುದು. ಆದರೆ ನಾನು ಯತ್ನಾಳ್ನಷ್ಟು ಬುದ್ಧಿವಂತನಲ್ಲ. ಪಕ್ಷದ ನೆಲೆಯಲ್ಲಿ ಕೆಲಸ ಮಾಡಲಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
stateOct 8, 2020, 12:20 PM IST
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ, ಅಂಗೀಕಾರ ಮಾಡೋದು ಸಿಎಂಗೆ ಬಿಟ್ಟ ವಿಚಾರ: ಸಿ.ಟಿ. ರವಿ
ಅಧಿಕಾರ ಹಂಚಿಕೆ ಅದು ಕಾಲಕಾಲಕ್ಕೆ ಬದಲಾಗುತ್ತಾ ಇರುತ್ತದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಅಂಗೀಕಾರ ಮಾಡೋದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರವಾಗಿದೆ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ.
stateOct 4, 2020, 8:30 AM IST
ಕನ್ನಡ ಭವನ, ಕಲಾಕ್ಷೇತ್ರ, ಭಾಷಾ ಭಾರತಿ ದುರಸ್ತಿ ಅಕ್ರಮ: ತನಿಖೆಗೆ ಸಿ.ಟಿ.ರವಿ ಆದೇಶ
ಕನ್ನಡ ಭವನ, ರವೀಂದ್ರ ಕಲಾಕ್ಷೇತ್ರ ಮತ್ತು ಕುವೆಂಪು ಭಾಷಾ ಭಾರತೀ ಪ್ರಾಧಿಕಾರದಲ್ಲಿ ವಿವಿಧ ದುರಸ್ತಿ ಕಾಮಗಾರಿಗಳ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತು ತನಿಖೆ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಆದೇಶ ನೀಡಿದ್ದಾರೆ.
Karnataka DistrictsOct 3, 2020, 9:41 AM IST
ಒಬ್ಬರಿಗೆ ಒಂದು ಹುದ್ದೆ ಪಕ್ಷದ ಅಲಿಖಿತ ನಿಯಮ: ಸಿ.ಟಿ.ರವಿ
ಒಬ್ಬರಿಗೆ ಒಂದು ಹುದ್ದೆ, ಇದು ಪಕ್ಷದೊಳಗಿನ ಅಲಿಖಿತ ನಿಯಮ. ಕೆಲವು ಸಂದರ್ಭಗಳಲ್ಲಿ ವರಿಷ್ಠರು ಈ ನಿಯಮವನ್ನು ಬದಲಾವಣೆ ಮಾಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
PoliticsOct 1, 2020, 10:30 AM IST
ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿಯದ್ದೇ ಜಯ : ಸಚಿವ ಸಿ.ಟಿ.ರವಿ
ಬೆಂಗಳೂರು(ಅ.01): ಘೋಷಣೆಯಾಗಿರುವ ಎಲ್ಲಾ ಚುನಾವಣೆಗಳಲ್ಲಿಯೂ ಗೆಲುವು ಸಾಧಿಸುವ ಮೂಲಕ ನಮ್ಮ ಶಕ್ತಿಯನ್ನು ಪ್ರದರ್ಶಿಸುತ್ತೇವೆ. ಅಲ್ಲದೆ, ಹಿರಿಯರ ಮಾರ್ಗದರ್ಶನ, ಕಿರಿಯರ ಬೆಂಬಲದೊಂದಿಗೆ ಪಕ್ಷ ಈಗ ನೀಡಿರುವ ಹೊಸ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
stateSep 10, 2020, 8:11 AM IST
ಬೆಂಗಳೂರಿನ 4 ಕಡೆ ಕಲಾಕ್ಷೇತ್ರ ನಿರ್ಮಾಣ: ಸಿ.ಟಿ.ರವಿ
ಕಳೆದ ಬಜೆಟ್ನಲ್ಲಿ ಘೋಷಿಸಿದಂತೆ ರಾಜಧಾನಿ ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ರಂಗಮಂದಿರ ನಿರ್ಮಿಸಲು ವಾರದೊಳಗೆ ಭೂಮಿ ಗುರುತಿಸಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
PoliticsAug 20, 2020, 3:27 PM IST
ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ, ನಮ್ಮದೇನಿದ್ರು ಏಕ್ ಮಾರ್ ದೋ ತುಕ್ಡ ಕ್ರಮ: ಸಿ.ಟಿ.ರವಿ
ಒಂದು ಘಟನೆಯ ಮೇಲೆ ಎಲ್ಲವನ್ನು ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ಈ ಹಿಂದೆ ನಡೆದಿರುವ ಹಲವಾರು ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರಗಳನ್ನ ಕಲೆ ಹಾಕುವ ಕೆಲಸ ನಡೆಯುತ್ತಿದೆ. ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ.
PoliticsAug 12, 2020, 12:45 PM IST
ಧರ್ಮದ ಅವಹೇಳನ ಅರೋಪ: ಕಾಂಗ್ರೆಸ್ ವಿರುದ್ಧ ಸಚಿವ ಸಿ.ಟಿ.ರವಿ ವಾಗ್ದಾಳಿ
ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ನಗರದ ಕಾವಲ್ ಬೈರಸಂದ್ರದಲ್ಲಿ ನಿನ್ನೆ(ಮಂಗಳವಾರ) ರಾತ್ರಿ ಹಿಂಸಾಚಾರ ನಡೆಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
stateAug 7, 2020, 9:53 AM IST
ಭೂಕುಸಿತ: ಕೊಡಗು, ಚಿಕ್ಕಮಗಳೂರಿಗೆ ಸಚಿವ ಸೋಮಣ್ಣ, ಸಿ.ಟಿ. ರವಿ ದೌಡು
ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತೀವ್ರ ನೆರೆ ಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ(ಶುಕ್ರವಾರ) ತಮ್ಮ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡುವುದಾಗಿ ಕೊಡಗು ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ಸಿ.ಟಿ. ರವಿ ಹೇಳಿದ್ದಾರೆ.
PoliticsAug 1, 2020, 3:36 PM IST
ಕೊರೋನಾ ಭ್ರಷ್ಟಾಚಾರದ ಬಗ್ಗೆ ಸಿದ್ದರಾಮಯ್ಯ ಆರೋಪ: ಸಿದ್ದುಗೆ ಸಿ.ಟಿ. ರವಿ ಟಾಂಗ್
ಭ್ರಷ್ಟಾಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡ್ತಾರೆ. ರಿ ಡ್ಯೂವ್ ಎಂಬ ಹೊಸ ಪರಿಭಾಷೆ ಜನಕ ಯಾರು ಸಿದ್ದರಾಮಯ್ಯನವರೇ ಎಂದು ಕನ್ನಡ ಸಂಸ್ಕೃತಿ ಸಚಿವ ಸಿ. ಟಿ. ರವಿ ಅವರು ಆರೋಪಿಸಿದ್ದಾರೆ.