Asianet Suvarna News Asianet Suvarna News

Constitution Day: ಸಂವಿಧಾನದ ಬಗ್ಗೆ ನೀವು ತಿಳಿದಿರಬೇಕಾದ ಸಂಗತಿಗಳು

ನಮ್ಮ ದೇಶದ ಸಂವಿಧಾನದ ವೈಶಿಷ್ಟ್ಯ, ಅದರ ಸೊಗಸು, ಅದರ ಹೆಗ್ಗಳಿಕೆ ಇತ್ಯಾದಿಗಳ ಬಗ್ಗೆ 'ಸಂವಿದಾನದ ದಿನ'ದ ಹಿನ್ನೆಲೆಯಲ್ಲಿ ನೀವು ತಿಳಿದಿರಬೇಕಾದ ಸಂಗತಿಗಳು ಇಲ್ಲಿವೆ.

 

 

26th November Constitution Day All You Need To Know About Indian Constitution
Author
Bengaluru, First Published Nov 26, 2021, 7:00 AM IST

- ಜಗತ್ತಿನಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ (Written Constitution) ನಮ್ಮದು. ನಮ್ಮ ದೇಶದ ಸಂವಿಧಾನಕ್ಕೆ (Constitution) ತನ್ನದೇ ಆದಂತಹ ಇತಿಹಾಸ, ಮಹತ್ವ ಹಾಗೂ ಲಿಖಿತ ಸ್ವರೂಪವಿದೆ.

- ಭಾರತದ ಸಂವಿಧಾನವು ಡಿಸೆಂಬರ್ 9, 1947 ರಿಂದ ನವೆಂಬರ್ 26, 1949ರ ಮಧ್ಯ ರಚನೆಗೊಂಡಿತು. ಡಾ. ಬಾಬಾಸಾಹೇಬ್ ಅಂಬೇಡ್ಕರ್ (Dr. B R Ambedkar) ಅವರ ನೇತೃತ್ವದಲ್ಲಿ ರಚಿಸಲ್ಪಟ್ಟ ಭಾರತದ ಸಂವಿಧಾನವು (Constitution Of India) ಜನವರಿ 26, 1950ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ 26 ರಂದು ಗಣರಾಜ್ಯೋತ್ಸವ (Republic Day) ಆಚರಿಸಲಾಗುತ್ತದೆ. ಅದೇ ರೀತಿ ನವೆಂಬರ್ 26ನ್ನು ಸಂವಿಧಾನ ದಿನ ಎಂದು ಆಚರಿಸಲಾಗುತ್ತಿದೆ.

- ಹಿಂದೆ ಸಂವಿಧಾನ ರಚನಾ ದಿನವನ್ನು 'ರಾಷ್ಟ್ರೀಯ ಕಾನೂನು ದಿವಸ' (Law day) ಎಂದು ಆಚರಿಸಲಾಗುತ್ತಿತ್ತು. 2015ರಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಜಯಂತಿ ವರ್ಷದಂದು 'ರಾಷ್ಟ್ರೀಯ ಕಾನೂನು ದಿನ' ಎಂಬುದನ್ನು ಬದಲಿಸಿ 'ಸಂವಿಧಾನ ದಿವಸ' ಎಂದು ಕರೆಯಲಾಗುತ್ತಿದೆ.

- ವಿಶೇಷ ಎಂದರೆ ನಮ್ಮ ಭಾರತದ ಸಂವಿಧಾನವನ್ನು ಟೈಪ್ ಮಾಡಿಲ್ಲ ಅಥವಾ ಮುದ್ರಣವನ್ನೂ ಮಾಡಿಲ್ಲ. ಅದನ್ನು ಇಂಗ್ಲೀಷ್ ಹಾಗೂ ಹಿಂದಿ ಭಾಷೆಯಲ್ಲಿ (English And Hindi Language) ಕೈಬರಹದ ರೂಪದಲ್ಲಿದೆ.

- ಭಾರತ ಸಂವಿಧಾನದ ಮೂಲ ಪ್ರತಿಗಳನ್ನು ವಿಶೇಷ ಹೀಲಿಯಂ ತುಂಬಿದ ಕವಚಗಳಲ್ಲಿ ಸಂರಕ್ಷಿಸಲಾಗಿದ್ದು, ಅದು ಭಾರತದ ಸಂಸತ್ ಭವನದ ಗ್ರಂಥಾಲಯದಲ್ಲಿದೆ.

- ಭಾರತ ಸಂವಿಧಾನವನ್ನು ಬೇರೆ ಕಡೆಗಳಿಂದ ಪಡೆದ ಅಂಶಗಳ ಚೀಲ ಎಂದು ಕರೆಯಲಾಗುತ್ತಿದೆ. ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವದ ಪರಿಕಲ್ಪನೆಗಳನ್ನು ಫ್ರಾನ್ಸ್ (France) ದೇಶದ ಸಂವಿಧಾನದಿಂದ ಪಡೆಯಲಾಗಿದೆ. ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಸೋವಿಯತ್ ಒಕ್ಕೂಟದಿಂದ ಪಡೆಯಲಾಗಿದ್ದು, ರಾಜ್ಯ ನಿರ್ದೇಶನ ತತ್ವಗಳು ಐರ್ಲೆಂಡ್ ಸಂವಿಧಾನದ ಕೊಡುಗೆಗಳಾಗಿವೆ. ಜಪಾನ್ (Japan) ದೇಶದಿಂದ ಸರ್ವೋಚ್ಛ ನ್ಯಾಯಾಲಯದ ಕಾರ್ಯನಿರ್ವಹಣೆಯ ಕಾನೂನು ಪಡೆಯಲಾಗಿದೆ.

- ಭಾರತದ ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್, 5 ಅನುಬಂಧಗಳು ಹಾಗೂ 98 ತಿದ್ದುಪಡಿಗಳಿವೆ. ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರಿದ್ದರು. ಅವರಲ್ಲಿ 15 ಮಂದಿ ಮಹಿಳಾ ಸದಸ್ಯರಿದ್ದರು. ಅದರ ಕರಡನ್ನು 1949ರ ನವೆಂಬರ್‌ ತಿಂಗಳಿನಲ್ಲಿ ಸಲ್ಲಿಸಲಾಯಿತು. ಸಲ್ಲಿಸಿದ ಬಳಿಕವೂ ಅದನ್ನು ಪೂರ್ಣಗೊಳಿಸಲು ಮೂರು ವರ್ಷ ಬೇಕಾಯಿತು. ಸಂವಿಧಾನ ರಚನಾ ಸಮಿತಿಯಲ್ಲಿದ್ದ ಎಲ್ಲ 284 ಮಂದಿ ಸದಸ್ಯರು 1950ರ ಜನವರಿ 24ರಂದು ಈ ದಾಖಲೆಗೆ ಸಹಿ ಮಾಡಿದರು. 1950ರ ಜನವರಿ 26ರಂದು ಇದು ಅಸ್ತಿತ್ವಕ್ಕೆ ಬಂತು. ಭಾರತದ ರಾಷ್ಟ್ರಲಾಂಛನವನ್ನೂ ಅದೇ ದಿನ ಅಳವಡಿಸಿಕೊಳ್ಳಲಾಯಿತು.

- ಭಾರತದ ಸಂವಿಧಾನವನ್ನು ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಏಕೆಂದರೆ ಕಳೆದ 70 ವರ್ಷಗಳಲ್ಲಿ ಕೇವಲ ನೂರಕ್ಕೂ ಕಡಿಮೆ ತಿದ್ದುಪಡಿಗಳನ್ನು ನಮ್ಮ ಸಂವಿಧಾನಕ್ಕೆ ಮಾಡಲಾಗಿದೆ.

- ಸಂವಿಧಾನ ಕರಡು ರಚನಾ ಸಮಿತಿ 1945ರ ಜುಲೈ ತಿಂಗಳಿನಲ್ಲಿ ಆಗ ಭಾರತವನ್ನು ಆಳುತ್ತಿದ್ದ ಇಂಗ್ಲೆಂಡ್‌ನಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಆ ಸರ್ಕಾರವು ಭಾರತದ ಸ್ವಾತಂತ್ರ್ಯ ಚಳುವಳಿಯ ತೀವ್ರತೆ ಅರಿಯುವುದರೊಂದಿಗೆ ಭಾರತದ ಕುರಿತು ತನ್ನ ಧೋರಣೆ ಬದಲಿಸಿಕೊಂಡಿತ್ತು. ಭಾರತಕ್ಕೆ ಪ್ರತ್ಯೇಕ ಸಂವಿಧಾನದ ಬೇಡಿಕೆ ಈಡೇರಿಸಲು ಬ್ರಿಟೀಷ್ ಸಂಸತ್ತಿನ 3 ಮಂತ್ರಿಗಳ ಸಂಪುಟ ಉಪ ಸಮಿತಿಯನ್ನು ರಚಿಸಿ ಭಾರತಕ್ಕೆ ಕಳುಹಿಸಿತ್ತು. ನಂತರ ಸಂವಿಧಾನ ರಚನಾ ಕರಡು ಸಮಿತಿ ರಚಿಸಲಾಯಿತು.

- 1946ರ ಡಿಸೆಂಬರ್ 9ರಂದು ಸಂವಿಧಾನ ಕರಡು ರಚನಾ ಸಮಿತಿ ಕಾರ್ಯಾರಂಭ ಮಾಡಿತ್ತು. ಮುಂದೆ 1947ರಲ್ಲಿ ದೇಶಕ್ಕೆ ಸಂಪೂರ್ಣ ಸ್ವಾತಂತ್ರ್ಯ ಲಭಿಸಿದಾಗ ಸಂವಿಧಾನ ರಚನಾ ಸಮಿತಿಯು ಸಂಪೂರ್ಣ ಸ್ವಾಯತ್ತತೆ ಪಡೆದುಕೊಳ್ಳುವುದರೊಂದಿಗೆ ತನ್ನ ಕೆಲಸ ಮುಂದುವರೆಸಿತ್ತು.

- 1946ರಲ್ಲಿ ಬ್ರಿಟಿಷ್ ಭಾರತದ ಪ್ರಾಂತ್ಯಗಳ 296 ಸ್ಥಾನಗಳಿಗೆ ಚುನಾವಣೆ ನಡೆದು ಭಾರತದ ಜನತೆ ಪ್ರಾಂತೀಯ ಸಭೆಗಳ ಸದಸ್ಯರನ್ನು ಆಯ್ಕೆ ಮಾಡಿದ್ದರು. ಆ ಸಭೆಗಳು ಸಂವಿಧಾನ ರಚನಾ ಸಭೆಯ ಸದಸ್ಯರನ್ನು ಆರಿಸಿದರು.

- ಕರಡು ಸಮಿತಿ ಸದಸ್ಯರು ಸಂವಿಧಾನ ರಚನಾಸಭೆಯಲ್ಲಿ ಭಾರತದ ವಿವಿಧ ಪ್ರದೇಶಗಳಿಗೆ ಹಾಗೂ ಸಮುದಾಯಗಳಿಗೆ ಸೇರಿದ ಸದಸ್ಯರು ಇದ್ದರು. ಬೇರೆ ಬೇರೆ ರಾಜಕೀಯ ವಿಚಾರಧಾರೆಗಳನ್ನು ಪ್ರತಿನಿಧಿಸುವ ಸದಸ್ಯರೂ ಅಲ್ಲಿ ಇದ್ದರು. ಜವಾಹರ್‌ಲಾಲ್ ನೆಹರೂ, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಅಬುಲ್ ಕಲಂ ಆಝಾದ್ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ ಅವರಲ್ಲಿ ಪ್ರಮುಖರು. ಪರಿಶಿಷ್ಟ ವರ್ಗಗಳಿಗೆ ಸೇರಿದ ಮೂವತ್ತಕ್ಕೂ ಹೆಚ್ಚು ಸದಸ್ಯರಿದ್ದರು. ಆಂಗ್ಲೋ-ಇಂಡಿಯನ್ ಸಮುದಾಯವನ್ನು ಫ್ರಾಂಕ್ ಆಂಟನಿ ಅವರೂ ಪಾರ್ಸಿ ಜನರನ್ನು ಎಚ್.ಪಿ. ಮೋದಿ ಅವರೂ ಪ್ರತಿನಿಧಿಸಿದ್ದರು. ಆಂಗ್ಲೊ-ಇಂಡಿಯನ್ನರ ಹೊರತಾದ ಎಲ್ಲ ಕ್ರೈಸ್ತರನ್ನು ಪ್ರತಿನಿಧಿಸಿದ ಖ್ಯಾತ ಕ್ರೈಸ್ತರಾದ ಹರೇಂದ್ರ ಕುಮಾರ್ ಮುಖರ್ಜಿಯವರು ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷರಾಗಿ ಇದ್ದರು. ಸಂವಿಧಾನ ತಜ್ಞರಾದ ಅಲ್ಲಾಡಿ ಕೃಷ್ಣಸ್ವಾಮಿ, ಡಾ. ಬಿ.ಆರ್. ಅಂಬೇಡ್ಕರ್, ಬಿ.ಎನ್. ರಾಜು ಮತ್ತು ಕೆ.ಎಂ. ಮುನ್ಷಿ ಅವರೂ ಸಭೆಯ ಸದಸ್ಯರಾಗಿದ್ದರು. ಸರೋಜಿನಿ ನಾಯ್ಡು ಮತ್ತು ವಿಜಯಲಕ್ಷ್ಮಿ ಪಂಡಿತ್ ಅವರು ಪ್ರಮುಖ ಮಹಿಳಾ ಸದಸ್ಯರಾಗಿದ್ದರು. ಡಾ. ಸಚ್ಚಿದಾನಂದ ಸಿನ್ಹಾ ಅವರು ಸಂವಿಧಾನರಚನಾ ಸಭೆಯ ತಾತ್ಕಲಿಕ ಅಧ್ಯಕ್ಷರಾಗಿದ್ದರು. ನಂತರ, ಡಾ. ರಾಜೇಂದ್ರ ಪ್ರಸಾದ್ ಅವರು ಅಧ್ಯಕ್ಷರಾಗಿಯೂ ಬಿ.ಆರ್. ಅಂಬೇಡ್ಕರ್ ಅವರು ಕರಡು ಸಮಿತಿ ಅಧ್ಯಕ್ಷರಾಗಿಯೂ ಆಯ್ಕೆಯಾದರು.

Health Survey: ಹೆಣ್ಮಕ್ಳೇ ಸ್ಟ್ರಾಂಗ್‌ ಗುರು... ಭಾರತದಲ್ಲೀಗ ಗಂಡಿಗಿಂತ ಹೆಣ್ಣು ಮಕ್ಕಳೇ ಹೆಚ್ಚು!

- ಸಂವಿಧಾನ ರಚನೆಯಾಗಲು ಎರಡು ವರ್ಷ 11 ತಿಂಗಳು 18 ದಿನಗಳ ಕಾಲ ಹಿಡಿಯಿತು. ಒಟ್ಟು ಸಂವಿಧಾನ ರಚನಾ ಸಮಿತಿಯು 166 ದಿನ ಸಮಾವೇಶಗೊಂಡಿತು. ಈ ಸಮಾವೇಶಗಳಿಗೆ ಸಾರ್ವಜನಿಕರಿಗೂ ಹಾಗು ಪತ್ರಕರ್ತರಿಗೂ ಪ್ರವೇಶವಿತ್ತು.

- ಭಾರತದ ಸಂವಿಧಾನದ ಪೀಠಿಕೆ ಹೀಗಿದೆ: 'ಭಾರತ ವಾಸಿಗಳಾದ ನಾವು, ಭಾರತವನ್ನು ಸಾರ್ವಭೌಮ ಸಮಾಜವಾದಿ ಜಾತ್ಯಾತೀತ (1976ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಂದ ಸೇರಿಸಲ್ಪಟ್ಟದ್ದು) ಲೋಕತಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ ಈ ಕೆಳಗಿನ ಹಕ್ಕುಗಳಾದ: ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ; ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಗಳನ್ನು ದೊರಕಿಸಿ, ವೈಯುಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ ಭ್ರಾತೃತ್ವತೆ ಯನ್ನು ಪ್ರೋತ್ನಾಹಿಸಲು ನಿರ್ಧರಿಸಿ; ನಮ್ಮ ಸಂವಿಧಾನ ರಚನಾ ಸಭೆಯಲ್ಲಿ ಈ 1949ರ ನವೆಂಬರ್ ಮಾಹೆಯ 26ನೇ ದಿನದಂದು, ನಾವಾಗಿ ನಾವೇ ಈ ಸಂವಿಧಾನವನ್ನು ಸ್ವೀಕರಿಸಿ, ಶಾಸನವನ್ನಾಗಿ ವಿಧಿಸಿಕೊಳ್ಳುತ್ತೇವೆ.

- ಆದರೂ ನಮ್ಮ ಸಂವಿಧಾನದ ಪೀಠಿಕೆಯು ಭಾರತದ ಸಂವಿಧಾನದ ಒಂದು ಭಾಗವಲ್ಲ. ಏಕೆಂದರೆ ಇದನ್ನು ನ್ಯಾಯಾಲಯದಲ್ಲಿ ಪ್ರಯೋಗಿಸಲು ಸಾಧ್ಯವಿಲ್ಲ. ಹಾಗಿದ್ದರೂ, ಸಂವಿಧಾನದಲ್ಲಿ ದ್ವಂದ್ವ ಇರುವಂತೆ ಕಂಡುಬರುವಲ್ಲಿ ಪೀಠಿಕೆಯನ್ನು ಉಪಯೋಗಿಸಿ ದ್ವಂದ್ವ ನಿವಾರಿಸಬಹುದಾದ ಕಾರಣ ಸರ್ವೋಚ್ಛ ನ್ಯಾಯಾಲಯವು ಪೀಠಿಕೆಯನ್ನು ಸಂವಿಧಾನದ ಒಂದು ಅಂಗವಾಗಿ ಪರಿಗಣಿಸಿದೆ. ಸಂವಿಧಾನದ ಮೂಲ ಪೀಠಿಕೆಯ ತಿದ್ದುಪಡಿ ಇದಕ್ಕೆ ಉದಾಹರಣೆ, 'ಕೇಶವಾನಂದ ಭಾರತಿ ಮತ್ತು ಕೇರಳ ಸರ್ಕಾರ' ಪ್ರಕರಣ. ಅದಾಗ್ಯೂ, ಪೀಠಿಕೆಯನ್ನು ಸಂವಿಧಾನದ ಲೇಖನದಲ್ಲಿ ದ್ವಂದ್ವ ಇದ್ದಾಗ ಮಾತ್ರ, ಮತ್ತಷ್ಟು ಅರ್ಥವತ್ತಾಗಿಸುವ ಸಾಧನವನ್ನಾಗಿ ಬಳಸಬಹುದೇ ಹೊರತು, ಹಕ್ಕು ಸಾಧಿಸುವ ಸಂವಿಧಾನದ ಒಂದು ಪ್ರತ್ಯೇಕ ವಿಭಾಗವೆಂದು ಪರಿಗಣಿಸಲಾಗದು. ಪೀಠಿಕೆಯ ಮೂಲಪ್ರತಿಯಲ್ಲಿ "ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ" ಎಂದಿತ್ತು. ಎರಡು ಹೆಚ್ಚಿನ ಪದಗಳಾದ "ಸಮಾಜವಾದಿ" ಮತ್ತು "ಜಾತ್ಯಾತೀತ" ಪದಗಳನ್ನು 1976ರಲ್ಲಿ ಸಂವಿಧಾನದ 42ನೆ ತಿದ್ದುಪಡಿಯಲ್ಲಿ ಸೇರಿಸಲಾಯಿತು.

Stop Violence against Women: ಹೆಣ್ಣಿಗೆ ದೌರ್ಜನ್ಯರಹಿತ ಭವಿಷ್ಯದ ಅಗತ್ಯವೇನಿದೆ?

- ಪೀಠಿಕೆಯು ನಮ್ಮ ಸಂವಿಧಾನದ ದಿಕ್ಸೂಚಿಯಂತೆ ಕೆಲಸ ಮಾಡುತ್ತದೆ ಮತ್ತು ನ್ಯಾಯಾಧೀಶರು ಸಂವಿಧಾನವನ್ನು ಇದೇ ದಾರಿಯಲ್ಲಿ ವ್ಯಾಖ್ಯಾನಿಸಿ ಮುನ್ನಡೆಸುತ್ತಾರೆ. ಭಾರತದ ಸಂವಿಧಾನದ ಪೀಠಿಕೆಯಲ್ಲಿ ವ್ಯಕ್ತಪಡಿಸಿರುವ ಹಾಗು ತಿದ್ದುಪಡಿ ಮಾಡಲು ಸಾದ್ಯವಿಲ್ಲದ ಆಶಯಗಳನ್ನು ಬಹಳಷ್ಟು ಸಂದರ್ಭಗಳಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ. ಪೀಠಿಕೆಯು ಸಂವಿಧಾನದ ಒಂದು ಭಾಗವಾದರೂ ಅದನ್ನು ಅಥವಾ ಅದರ ಯಾವುದೇ ಅಂಶವನ್ನು ಕಾನೂನು ಎಂದು ಪರಿಗಣಿಸಿ ಅದನ್ನು ಜಾರಿ (ಹೇರುವಂತಿಲ್ಲ) ಮಾಡುವಂತಿಲ್ಲ.

- ಭಾರತದ ಎಲ್ಲ 18 ವರ್ಷಗಳ ವಯೋಮಿತಿಯ ಮೇಲಿರುವ ಕಾನೂನುಬದ್ಧ ಮತ ಚಲಾಯಿಸುವ ಅಧಿಕಾರ ಹೊಂದಿರುವ ಪ್ರಜೆಗಳು ಧರ್ಮ, ಜಾತಿ, ಮತ, ಲಿಂಗ ಅಥವಾ ಶಿಕ್ಷಣ ಮಟ್ಟದ ಭೇದವಿಲ್ಲದೇ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. ಪ್ರಜಾಪ್ರಭುತ್ವದ ಗಣತಂತ್ರದಲ್ಲಿ, ಆ ರಾಜ್ಯದ ಮುಖ್ಯಸ್ತನನ್ನು ಒಂದು ನಿರ್ದಿಷ್ಟ ಅವಧಿಗೆ ಮಾತ್ರ ಆರಿಸಲಾಗುವುದು. ರಾಷ್ಟ್ರಪತಿಯನ್ನು 5 ವರ್ಷಗಳ ಒಂದು ನಿರ್ಧಿಷ್ಟ ಅವಧಿಗೆ ಚುನಾಯಿಸಲಾಗುವುದು.

ZyCov-D Vaccine : ಮಕ್ಕಳ ಲಸಿಕೆ ಸೂಜಿ ಮುಕ್ತ... ಚಮತ್ಕಾರಿ ವ್ಯವಸ್ಥೆ

Follow Us:
Download App:
  • android
  • ios