ಮಲ್ಲಸಂದ್ರ ಮತ್ತು ಗುಬ್ಬಿ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ನಡೆಯುತ್ತಿರುವ ಕಾಮಗಾರಿಯಿಂದಾಗಿ, ಆಗಸ್ಟ್ 2026ರ ನಿಗದಿತ ದಿನಾಂಕಗಳಲ್ಲಿ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ ಮತ್ತು ಮಾರ್ಗ ಬದಲಾವಣೆ ಮಾಡಲಾಗಿದೆ. ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್, ಸಿದ್ಧಗಂಗಾ ಎಕ್ಸ್‌ಪ್ರೆಸ್ ಸೇರಿದಂತೆ ಪ್ರಮುಖ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಂಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 48 (LC-48) ರಲ್ಲಿ ಆರ್‌ಸಿಸಿ ಬಾಕ್ಸ್‌ಗಳನ್ನು ಅಳವಡಿಸಲು ತಾತ್ಕಾಲಿಕ ಗಿರ್ಡರ್‌ಗಳನ್ನು ಹಾಕುವ ಮತ್ತು ತೆರವುಗೊಳಿಸುವ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಕೆಳಗಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗುತ್ತದೆ, ಭಾಗಶಃ ರದ್ದುಗೊಳಿಸಲಾಗುತ್ತದೆ, ಮಾರ್ಗ ಬದಲಾಯಿಸಲಾಗುತ್ತದೆ, ಸಮಯ ಮರುನಿಗದಿಗೊಳಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗುತ್ತದೆ:
1.ರೈಲುಗಳ ಸಂಚಾರ ರದ್ದು:
ದಿನಾಂಕ 19.08.2026 ಮತ್ತು 26.08.2026 ರಂದು ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16239), ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್ (16240), ಕೆಎಸ್‌ಆರ್ ಬೆಂಗಳೂರು-ಮೈಸೂರು ಒಡೆಯರ್ ಎಕ್ಸ್‌ಪ್ರೆಸ್ (12614), ಕೆಎಸ್‌ಆರ್ ಬೆಂಗಳೂರು-ತುಮಕೂರು ಮೆಮು (66567) ಮತ್ತು ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು (66572) ರೈಲುಗಳ ಸಂಚಾರ ರದ್ದಾಗಲಿವೆ.
ದಿನಾಂಕ 19.08.2026, 22.08.2026 ಮತ್ತು 26.08.2026 ರಂದು ಯಲಹಂಕ-ಅರಸೀಕೆರೆ ಮೆಮು (66505) ಹಾಗೂ ಅರಸೀಕೆರೆ-ಯಲಹಂಕ ಮೆಮು (66506) ರೈಲುಗಳ ಸಂಚಾರ ರದ್ದಾಗಲಿವೆ.
ರೈಲುಗಳ ಸಂಚಾರ ಭಾಗಶಃ ರದ್ದು
ದಿನಾಂಕ 19.08.2026, 22.08.2026, 23.08.2026 ಮತ್ತು 26.08.2026 ರಂದು ಹೊರಡುವ ರೈಲು ಸಂಖ್ಯೆ 20652 ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಅರಸೀಕೆರೆ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ಅರಸೀಕೆರೆಯಲ್ಲಿಯೇ ಪ್ರಯಾಣ ಮುಕ್ತಾಯಗೊಳಿಸಲಿದೆ.
ದಿನಾಂಕ 19.08.2026, 22.08.2026, 23.08.2026 ಮತ್ತು 26.08.2026 ರಂದು ಹೊರಡುವ ರೈಲು ಸಂಖ್ಯೆ 12725 ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ಧಗಂಗಾ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದ್ದು, ಕೆಎಸ್‌ಆರ್ ಬೆಂಗಳೂರು ಬದಲಿಗೆ ಅರಸೀಕೆರೆಯಿಂದಲೇ ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.
ದಿನಾಂಕ 19.08.2026 ಮತ್ತು 26.08.2026 ರಂದು ಹೊರಡುವ ರೈಲು ಸಂಖ್ಯೆ 12726 ಧಾರವಾಡ-ಕೆಎಸ್‌ಆರ್ ಬೆಂಗಳೂರು ಸಿದ್ಧಗಂಗಾ ಎಕ್ಸ್‌ಪ್ರೆಸ್ ಅರಸೀಕೆರೆ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ಅರಸೀಕೆರೆಯಲ್ಲಿಯೇ ಪ್ರಯಾಣ ಮುಕ್ತಾಯಗೊಳಿಸಲಿದೆ.
ರೈಲುಗಳ ಮಾರ್ಗ ಬದಲಾವಣೆ
ದಿನಾಂಕ 18.08.2026 ಮತ್ತು 25.08.2026 ರಂದು ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ-ಹಾಸನ-ನೆಲಮಂಗಲ-ಯಶವಂತಪುರ ಮಾರ್ಗವಾಗಿ ಸಂಚರಿಸಲಿದ್ದು, ತಿಪಟೂರು ಹಾಗೂ ತುಮಕೂರು ನಿಲ್ದಾಣಗಳಲ್ಲಿ ನಿಲ್ಲುವುದಿಲ್ಲ.
ದಿನಾಂಕ 19.08.2026 ಮತ್ತು 26.08.2026 ರಂದು ಹೊರಡುವ ರೈಲು ಸಂಖ್ಯೆ 20676 ಮೈಸೂರು-ಬೆಳಗಾವಿ ವಿಶ್ವಮಾನವ ಎಕ್ಸ್‌ಪ್ರೆಸ್ ಮೈಸೂರು-ಹೊಳೆನರಸೀಪುರ-ಹಾಸನ-ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದ್ದು, ಪಾಂಡವಪುರದಿಂದ ತಿಪಟೂರು ನಡುವಿನ ಯಾವುದೇ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ದಿನಾಂಕ 19.08.2026, 22.08.2026, 23.08.2026 ಮತ್ತು 26.08.2026 ರಂದು ಹೊರಡುವ ರೈಲು ಸಂಖ್ಯೆ 20689 ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು ಚಿಕ್ಕಬಾಣಾವರ-ನೆಲಮಂಗಲ-ಹಾಸನ-ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದ್ದು, ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.


