ಓಣಂ ಹಬ್ಬ: ಹುಬ್ಬಳ್ಳಿ-ಕೊಚುವೇಲಿ ನಡುವೆ ಓಡಲಿದೆ ವಿಶೇಷ ರೈಲು
Onam Festival Special Train ಓಣಂ ಹಬ್ಬದ ಪ್ರಯುಕ್ತ ಹುಬ್ಬಳ್ಳಿ-ಕೊಚುವೇಲಿ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ಸೆಪ್ಟೆಂಬರ್ 13 ರಂದು ಹುಬ್ಬಳ್ಳಿಯಿಂದ ಹೊರಡುವ ರೈಲು, ಮರುದಿನ ಕೊಚುವೇಲಿ ತಲುಪಲಿದೆ.
ಬೆಂಗಳೂರು (ಸೆ.10): ಓಣಂ ಹಬ್ಬದ ಪ್ರಯುಕ್ತ ಹುಬ್ಬಳ್ಳಿ-ಕೊಚುವೇಲಿ ನಡುವೆ ವಿಶೇಷ ರೈಲು ಓಡಾಟ ನಡೆಸಲಿದೆ ಎಂದು ಎಸ್‌ಡಬ್ಲ್ಯುಆರ್ ತಿಳಿಸಿದೆ. ಸೆಪ್ಟೆಂಬರ್ 15 ಭಾನುವಾರ ಓಣಂ ಹಬ್ಬ ಇದ್ದು, ಇದರ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತಪ್ಪಿಸಲು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ ಮತ್ತು ಕೇರಳದ ಕೊಚುವೇಲಿ ನಿಲ್ದಾಣಗಳ ನಡುವೆ ಹೆಚ್ಚುವರಿ ರೈಲು ಓಡಾಟ ನಡೆಸಲಿದೆ. ಎಸ್ಎಸ್ಎಸ್ ಹುಬ್ಬಳ್ಳಿ-ಕೊಚುವೇಲಿ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ಹೆಸರಿನ ರೈಲು ಪ್ರಯಾಣ ಮಾಡಲಿದೆ. ಸೆ.13ರಂದು 6:55ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 6:45 ಕ್ಕೆ ಕೊಚುವೇಲಿ ತಲುಪಲಿದೆ. ಸೆ.14 ರಂದು ಮಧ್ಯಾಹ್ನ 12:50ಕ್ಕೆ ಕೊಚುವೇಲಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:50ಕ್ಕೆ ಹುಬ್ಬಳ್ಳಿ ತಲುಪಲಿದೆ.
ಈ ರೈಲು ಎರಡೂ ದಿಕ್ಕುಗಳಲ್ಲಿ ಎಸ್ಎಂಎಂ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗಣ್ಣೂರ್, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಪ್ರಯಾಣಿಕರು ರೈಲು ವ್ಯವಸ್ಥೆಯನ್ನು ಸದುಪಯೋಗಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.
ರ್ನಾಟಕಕ್ಕೆ ಸಂತಸದ ಸುದ್ದಿ: ಹುಬ್ಬಳ್ಳಿ-ಪುಣೆ ನಡುವೆ ಶೀಘ್ರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು..!
ಈ ವಿಶೇಷ ರೈಲಿನಲ್ಲಿ ಎರಡು ಎಸಿ-2 ಟೈಯರ್, ನಾಲ್ಕು ಎಸಿ -3 ಟೈಯರ್, ಹತ್ತು ಸ್ಲೀಪರ್ ಕ್ಲಾಸ್, ಎರಡು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎರಡು ಎಸ್ಎಲ್ಆರ್ / ಡಿ ಬೋಗಿಗಳು ಸೇರಿದಂತೆ ಒಟ್ಟು 20 ಬೋಗಿಗಳು ಒಳಗೊಂಡಿರುತ್ತದೆ.
Shivamogga: ಶಿವಮೊಗ್ಗಕ್ಕೆ ಬರಲಿದೆ ವಂದೇ ಭಾರತ್ ರೈಲು!