2024ರ ಮಾರ್ಚ್‌ನಿಂದ ಜಿಪಿಎಸ್‌ ಆಧಾರಿತ ಟೋಲ್‌ ಕಲೆಕ್ಷನ್‌: ಗಡ್ಕರಿ

ಮುಂದಿನ ವರ್ಷ ಮಾರ್ಚ್ ವೇಳೆಗೆ ದೇಶದಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

Union Minister Nitin Gadkari said that GPS based toll collection system will be launched in the country by March next year akb

ನವದೆಹಲಿ: ಮುಂದಿನ ವರ್ಷ ಮಾರ್ಚ್ ವೇಳೆಗೆ ದೇಶದಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಬುಧವಾರ ಈ ಬಗ್ಗೆ ಮಾತನಾಡಿದ ಅವರು ‘ಟ್ರಾಫಿಕ್‌ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಹೆದ್ದಾರಿಗಳಲ್ಲಿ ಪ್ರಯಾಣಿಸುವ ಚಾಲಕರು ನಿಖರವಾದ ದೂರಕ್ಕೆ ಶುಲ್ಕ ನಿಗದಿಪಡಿಸುವ ಉದ್ದೇಶದಿಂದ ಈಗಿರುವ ಹೆದ್ದಾರಿ ಟೋಲ್‌ ಪ್ಲಾಜಾಗಳಲ್ಲಿ ಜಿಪಿಎಸ್‌ ಆಧಾರಿತ ಟೋಲ್‌ ವ್ಯವಸ್ಥೆಯನ್ನು ಅಳವಡಿಸುವುದು ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲಾಗುವುದು’ ಎಂದಿದ್ದಾರೆ.

ಅಲ್ಲದೇ ಹೆದ್ದಾರಿಯಲ್ಲಿ ವಾಹನ ನಿಲ್ಲಿಸದೆ ಸ್ವಯಂಚಾಲಿತ ಟೋಲ್ ಸಂಗ್ರಹವನ್ನು ಸಕ್ರಿಯಗೊಳಿಸಲು ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆಯ (ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾಗಳು) ಎರಡರ ಪ್ರಾಯೋಗಿಕ ಯೋಜನೆಗಳನ್ನು ನಡೆಸಲಾಗಿದೆ’ ಎಂದಿದ್ದಾರೆ.

ಇದೇ ವೇಳೆ, 1000 ಕಿ.ಮೀ.ಗಿಂತ ಕಮ್ಮಿ ಅಂತರದ ಹೈವೇಗಳನ್ನು ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ನಿರ್ಮಿಸಲು 1.5-2 ಲಕ್ಷ ಕೋಟಿ ರು. ವಿನಿಯೋಗಿಸಲಾಗುವುದು ಎಂದರು.

ನಕಲಿ ಟೋಲ್ ಪ್ಲಾಜಾ ನಿರ್ಮಿಸಿ ಒಂದೂವರೆ ವರ್ಷದಿಂದ ವಾಹನ ಸವಾರರ ಸುಲಿಗೆ

5 ವರ್ಷದಲ್ಲಿ ಅಮೆರಿಕ ರಸ್ತೆಗಳಿಗೆ ನಮ್ಮ ರಸ್ತೆಗಳ ಸ್ಪರ್ಧೆ: ಗಡ್ಕರಿ

ತಿರುವನಂತಪಪುರಂ: ಇನ್ನು 5 ವರ್ಷಗಳಲ್ಲಿ ಭಾರತದಲ್ಲಿ ಅಮೆರಿಕದ ರಸ್ತೆಗಳಿಗೆ ಸಮನಾದ ರೀತಿಯಲ್ಲಿ ರಸ್ತೆ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ರಸ್ತೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 

ಮನೋರಮಾ ಇಯರ್ ಬುಕ್ - 2024 ರಲ್ಲಿ ಪ್ರಕಟವಾದ ಸಂದರ್ಶನದಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವ ಅವರು 'ದೇಶದಲ್ಲಿ ಮೆಟ್ರೋ ದಟ್ಟಣೆಯನ್ನು ನಿವಾರಿಸಲು, ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲು ಮತ್ತು ರಸ್ತೆ ಅಪಘಾತಗಳನ್ನು ತಪ್ಪಿಸಲು ಸರ್ಕಾರವು ಪ್ರಯತ್ನಿಸುತ್ತಿದೆ. ನಾವು ಉತ್ತಮ ಕೆಲಸವನ್ನು ಪ್ರೋತ್ಸಾಹಿಸುತ್ತೇವೆ. ಅದಕ್ಕಾಗೇ ರಸ್ತೆ ನಿರ್ಮಾಣದಲ್ಲಿ ದೇಶವು 7 ವಿಶ್ವ ದಾಖಲೆಗಳನ್ನು ನಿರ್ಮಿ ಸಿದೆ. 5 ವರ್ಷಗಳ ಬಳಿಕ ನಮ್ಮ ದೇಶದ ರಸ್ತೆ ಜಾಲವು ಎಲ್ಲ ರೀತಿಯಲ್ಲೂ ಅಮೆರಿಕದ ರಸ್ತೆಗಳಷ್ಟೇ ಗುಣಮಟ್ಟ ಹೊಂದಿರುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದರು.

ಮಹಿಳಾ ಟೋಲ್ ಸಿಬ್ಬಂದಿ ಮೇಲೆ ಮಹಿಳೆಯಿಂದ ಹಲ್ಲೆ, ವೈರಲ್ ವಿಡಿಯೋ ಬೆನ್ನಲ್ಲೇ ಅರೆಸ್ಟ್!

Latest Videos
Follow Us:
Download App:
  • android
  • ios