ಕುಣಿಗಲ್‌ನಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಹೆಸರಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದ್ದು, ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಲು ಬಿ.ಎಸ್‌.ಯಡಿಯೂರಪ್ಪ ಅವರು ಕುಟುಂಬ ಸಮೇತ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಲಾಗಿದೆ. 

ಮಂಗಳೂರು(ಅ.17): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕುಣಿಗಲ್‌ ತಾಲೂಕಿನ ಶ್ರೀಕ್ಷೇತ್ರ ಎಡೆಯೂರು ಸಿದ್ಧಲಿಂಗೇಶ್ವರರ ದೇವಾಲಯಕ್ಕೆ ಪತ್ನಿ ಹೆಸರಲ್ಲಿ ಸಮುದಾಯ ಭವನ ನಿರ್ಮಿಸುತ್ತಿದ್ದು ಶಂಕುಸ್ಥಾಪನೆ ನಡೆಸುವ ಸ್ಥಳವನ್ನು ಜಿಲ್ಲಾಧಿಕಾರಿ ಪರಿಶೀಲಿಸಿದ್ದಾರೆ.

ಸಿಎಂ ಕುಟುಂಬ ಸಮೇತ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಂಕುಸ್ಥಾಪನೆ ನೆರವೇರಿಸಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಸ್ಥಳವನ್ನು ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ್ದಾರೆ.

ಮತದಾರರಿಗೆ ಹಂಚಲು ತಂದಿದ್ದ ಮದ್ಯ ನಾಶ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆದೇವರಾದ ಶ್ರೀ ಸಿದ್ದಲಿಂಗೇಶ್ವರ ದೇವಾಲಯದ ಆವರಣದಲ್ಲಿ ಪತ್ನಿ ದಿ.ಮೈತ್ರಾದೇವಿ ಅವರ ಹೆಸರಿನಲ್ಲಿ ಸಮುದಾಯ ಭವನವನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅದೇ ರೀತಿ ಈ ಹಿಂದೆ ತಾವು ಮುಖ್ಯಮಂತ್ರಿ ಆಗಿದ್ದಾಗ ಮಂಜೂರು ಮಾಡಿದ್ದ ದೇವಾಲಯದ ಕಾಮಗಾರಿಗಳು ಪೂರ್ಣಗೊಂಡಿರುವ ನವೀಕೃತ ಎರಡನೇ ಹಂತದ ದೇವಾಲಯದ ಪ್ರಾಂಗಣ, ರುದ್ರಾಭಿಷೇಕ ಮಂಟಪ ಹಾಗೂ ಸಿದ್ದಲಿಂಗೇಶ್ವರರ ಪವಾಡ ದೃಶ್ಯಗಳನ್ನು ಉದ್ಘಾಟಿಸಲಿದ್ದಾರೆ.

ರಸ್ತೆ ಮಧ್ಯೆ ಶಾಲಾ ಬಸ್‌ ನಿಲ್ಲಿಸಿ ಕುಡಿಯಲು ಕುಳಿತ ಚಾಲಕ

ಶುಕ್ರವಾರ ಬೆಳಗ್ಗೆ 9 ಗಂಟೆಗೆ ಆಗಮಿಸಲಿರುವ ಮುಖ್ಯಮಂತ್ರಿ ಮೊದಲಿಗೆ ಶ್ರೀ ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ಕುಟುಂಬ ಸಮೇತರಾಗಿ ತಮ್ಮ ಮನೆದೇವ ಶ್ರೀ ಸಿದ್ದಲಿಂಗೇಶ್ವರನಿಗೆ ಅರ್ಚನೆ, ಮಹಾ ರುದ್ರಾಭಿಷೇಕ, ರಾಜೋಪಚಾರ ಸೇರಿದಂತೆ ಹಲವಾರು ಸೇವೆಗಳನ್ನು ಸಲ್ಲಿಸಿ ದೇವಾಲಯದ ಒಳಾಂಗಣದ ಹಲವಾರು ಕಾಮಗಾರಿಗಳನ್ನು ಉದ್ಘಾಟಿಸುವರು. ನಂತರ ಪತ್ನಿ ಮೈತ್ರಾದೇವಿ ಅವರ ನೆನಪಿಗಾಗಿ ದೇವಾಲಯದ ಮುಂಭಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನಡೆಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮೈಸೂರು: ವಾಲ್ಮೀಕಿ ಜಯಂತಿಯಲ್ಲಿ ಕಲ್ಲು ತೂರಾಟ, 32 ಜನರಿಗೆ ನ್ಯಾಯಾಂಗ ಬಂಧನ

ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮೀಜಿ, ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ದರಾಮ ಸ್ವಾಮೀಜಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಂಗನಾಥ್‌, ಜಿಪಂ ಅಧ್ಯಕ್ಷೆ ಲತಾ, ಸಂಸದರಾದ ಡಿ.ಕೆ. ಸುರೇಶ್‌, ಜಿ.ಎಸ್‌.ಬಸವರಾಜು ಸೇರಿದಂತೆ ಜಿಲ್ಲೆಯ ಹಲವಾರು ಶಾಸಕರು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರೌಡಿಶೀಟರ್‌ ದಂಪತಿಯಿಂದ ಸನ್ಮಾನ ಸ್ವೀಕರಿಸಿದ ಪೊಲೀಸ್‌ ಆಯುಕ್ತರು!

ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ಸ್ಥಳೀಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಮುಖ್ಯಮಂತ್ರಿಗಳ ಕಾರ್ಯಕ್ರಮದ ಯೋಜನೆಯನ್ನು ತಿಳಿಸಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್‌, ತಹಸೀಲ್ದಾರ್‌ ವಿಶ್ವನಾಥ್‌, ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್‌ ಸೇರಿದಂತೆ ದೇವಾಲಯದ ಅರ್ಚಕರು ಇದ್ದರು.