ತುಮಕೂರು (ಅ.21): ಬೆಳ್ಳಂಬೆಳಗ್ಗೆ ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ತುಮಕೂರಿನಲ್ಲಿ ನಡೆದಿದೆ. 

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರದ ಬಳಿ ಅವಘಡ ಸಂಭವಿಸಿದ್ದು, ದರ್ಶನ್ [21], ಭರತ್ [23] ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೃತರಿಬ್ಬರೂ ಚಿಕ್ಕನಾಯಕನಹಳ್ಳಿಯ ಹುಳಿಯಾರಿನವರೆನ್ನಲಾಗಿದೆ. ಮೈಸೂರಿನಿಂದ ಮದುವೆ ಕಾರ್ಯಕ್ರಮ ಮುಗಿಸಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆಯಾಗಿದೆ. 

ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.