Asianet Suvarna News Asianet Suvarna News

ಎಐ ತಂತ್ರಜ್ಞಾನದಲ್ಲಿ ಕಾಣಿಸಿಕೊಂಡ ನಟ ಸುಧೀರ್‌! ಕಳೆದುಕೊಂಡ ಅಪ್ಪನನ್ನು ನೋಡಿ ತರುಣ್‌ ಕಣ್ಣೀರು

ಡಾನ್ಸ್‌ ಕರ್ನಾಟಕ ಡಾನ್ಸ್‌ ವೇದಿಕೆ ಮೇಲೆ ನವದಂಪತಿ ತರುಣ್‌ ಸುಧೀರ್‌ ಮತ್ತು ಸೋನಲ್‌ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅಪ್ಪ ಸುಧೀರ್‌ರನ್ನು ನೋಡಿ ತರುಣ್‌ ಕಣ್ಣೀರಾಗಿದ್ದಾರೆ. 
 

Actor Sudheer appeared through AI technology in DKD Tarun Sudheer tears up seeing his lost father suc
Author
First Published Sep 1, 2024, 3:43 PM IST | Last Updated Sep 1, 2024, 3:43 PM IST

ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮೊಂಥೆರೋ ಅವರ ಅದ್ಧೂರಿ ವಿವಾಹ ಇದೇ 11ರಂದು ಬೆಂಗಳೂರಿನ ನಡೆದಿದೆ.  ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಈ ಜೋಡಿ  ತಮ್ಮ ನಾಲ್ಕು ವರ್ಷದ  ಪ್ರೀತಿಗೆ ಮದುವೆ ಎಂಬ ಅಧಿಕೃತ ಮುದ್ರೆ ಒತ್ತಿದ್ದಾರೆ.  ಹಿಂದೂ ಸಂಪ್ರದಾಯದಂತೆ ಮದುವೆ ನಡೆದಿತ್ತು. ಸೋನಲ್​ ಅವರ ಹುಟ್ಟುಹಬ್ಬದಂದೇ ಮದುವೆಯಾಗಿದ್ದು  ವಿಶೇಷವೇ. ಈ ವಿವಾಹಕ್ಕೆ ಕನ್ನಡದ ಸ್ಟಾರ್ ಕಲಾವಿದರ ದಂಡು, ರಾಜಕೀಯ ಗಣ್ಯರು ಭಾಗಿಯಾದರು.  ದಕ್ಷಿಣ ಭಾರತ ಶೈಲಿಯಲ್ಲಿ ಕಲ್ಯಾಣ ಮಂಟಪದ ಅಲಂಕಾರ ಮಾಡಲಾಗಿತ್ತು. ವಿಷ್ಣುವಿನ ದಶಾವತಾರಗಳ ಮಧ್ಯೆ ಕಮಲ ಮಂಟಪ ನಿರ್ಮಾಣ ಮಾಡಲಾಗಿತ್ತು. ಕಲಾಂಜನಿ ವೆಡ್ಡಿಂಗ್ಸ್ ನ ಕಿರಣ್  ನೇತೃತ್ವದಲ್ಲಿ ಧಾರೆ ಮುಹೂರ್ತದ ಸೆಟ್  ಹಾಕಲಾಗಿತ್ತು. ಇದೀಗ ಈ ಜೋಡಿ ಕ್ರೈಸ್ತ ಸಂಪ್ರದಾಯದಂತೆ ಮಂಗಳೂರಿನಲ್ಲಿ ಮದುವೆ ಮಾಡಿಕೊಳ್ಳುತ್ತಿದ್ದಾರೆ.   

ಇದರ ನಡುವೆಯೇ, ಈ ಜೋಡಿ ಡಾನ್ಸ್​ ಕರ್ನಾಟಕ ಡಾನ್ಸ್​ ವೇದಿಕೆಯ ಮೇಲೆ ಜೋಡಿ ಕಾಣಿಸಿಕೊಂಡಿದ್ದು, ಅದರ ಪ್ರೊಮೋ ಬಿಡುಗಡೆಯಾಗಿದೆ. ಇದರಲ್ಲಿ ತರುಣ್‌ ಅವರ ತಂದೆ, ಸ್ಯಾಂಡಲ್‌ವುಡ್‌ನ ಖ್ಯಾತ ವಿಲನ್‌ ಸುಧೀರ್‌ ಅವರು ಎಐ ತಂತ್ರಜ್ಞಾನದ ಮೂಲಕ ವೇದಿಕೆಯ ಮೇಲೆ ಆಗಮಿಸಿದ್ದು, ನೂತನ ವಧು-ವರರಿಗೆ ಆಶೀರ್ವಾದ ಮಾಡಿದರು. 1999 ರಲ್ಲಿ ಸುಧೀರ್‌ ನಿಧನರಾದರು. ಎಲ್ಲರಿಗೂ ತಿಳಿದಿರುವಂತೆ ಸುಧೀರ್ ಕನ್ನಡ ಚಿತ್ರರಂಗದ ಪ್ರಖ್ಯಾತ ಖಳನಟ ಮತ್ತು ಪೋಷಕ ನಟ. ಸುಮಾರು 350 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.  ಇವರು ತಮ್ಮ ಅದ್ಭುತ ಅಭಿನಯದಿಂದ ವಿಭಿನ್ನ ಛಾಪನ್ನು ಮೂಡಿಸಿದ್ದಾರೆ. ಇವರಿಗೆ ನಂದ ಕಿಶೋರ್ ಮತ್ತು ತರುಣ ಸುಧೀರ್ ಎಂಬ ಮಕ್ಕಳಿದ್ದಾರೆ. ಇಬ್ಬರೂ ಪ್ರಸ್ತುತ ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕರೆಂದೇ ಖ್ಯಾತರಾಗಿದ್ದು, ಇದೀಗ ಸುಧೀರ್‌ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.  

ಬೆಳಕಿನ ಕವಿತೆ... ಎನ್ನುತ್ತಲೇ ಡಾನ್ಸ್ ವೇದಿಕೆ ಮೇಲೆ ಪ್ರೇಮಕಾವ್ಯ ಬರೆದ ತರುಣ್-ಸೋನಲ್ ನವದಂಪತಿ

ಕೃತಕ ಬುದ್ಧಿಮತ್ತೆಯ ಮೂಲಕ ತಂದೆ ಬಂದು ಆಶೀರ್ವಾದ ಮಾಡಿರುವುದಕ್ಕೆ ತರುಣ್‌ ಸುಧೀರ್‌ ಅಕ್ಷರಶಃ ಕಣ್ಣೀರಾದರು. ಸುಧೀರ್‌ ಅವರನ್ನು ನೋಡಿ ಸೋನಲ್‌ ಕೂಡ ಭಾವುಕರಾಗಿ ಸುಧೀರ್‌ ಅವರ ಕೈಯನ್ನು ಬಲವಾಗಿ ಹಿಡಿದುಕೊಂಡರು. ಒಂದು ಆತ್ಮೀಯ, ಭಾವುಕ ಕ್ಷಣಕ್ಕೆ ಡಾನ್ಸ್ ಕರ್ನಾಟಕ ಡಾನ್ಸ್‌ ವೇದಿಕೆ ಸಾಕ್ಷಿಯಾಯಿತು. ಇದಾದ ಬಳಿಕ, ಈ ಜೋಡಿ ವೇದಿಕೆ ಮೇಲೆ ಪ್ರೇಮದ ಕಿಚ್ಚು ಹೊತ್ತಿಸಿದ್ದಾರೆ. 2022ರಲ್ಲಿ ಬಿಡುಗಡೆಯಾದ ಬನಾರಸ್​ ಚಿತ್ರದ ಬೆಳಕಿನ ಕವಿತೆ, ಬೆರಗಿಗೆ ಸೋತೆ ಹಾಡಿಗೆ ಸ್ಟೆಪ್​ ಹಾಕಿದ್ದಾರೆ. ಈ ಚಿತ್ರದಲ್ಲಿ ಝೈದ್​ ಖಾನ್​ ಜೊತೆ ಸೋನಲ್​ ಅವರು ಹೀರೋಯಿನ್​ ಆಗಿ ನಟಿಸಿದ್ದರು. ಇದೇ ಕಾರಣದಿಂದ ಈ ಹಾಡನ್ನು ಡಿಕೆಡಿ ವೇದಿಕೆಯ ಮೇಲೆ ಆಯ್ಕೆ ಮಾಡಲಾಗಿದೆ. ಇವರಿಬ್ಬರೂ ರೊಮಾಂಟಿಕ್​ ಸ್ಟೆಪ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. 
 
 ಅಂದಹಾಗೆ ತರುಣ್​ ಮತ್ತು ಸೋನಲ್​  ನಡುವಿನ ವಯಸ್ಸಿನ ಅಂತರ  11 ವರ್ಷ. ತರುಣ್ ಸುಧೀರ್‌ಗೆ 41 ವರ್ಷ ವಯಸ್ಸಾಗಿದೆ. ಇನ್ನು ನಟಿ ಸೋನಲ್ ಮೊಂಥೆರೋಗೆ 29 ವರ್ಷ ವಯಸ್ಸಾಗಿದೆ. ಸೋನಲ್‌  ಎಕ್ಕ ಸಕ್ಕ ಎಂಬ ತುಳು ಸಿನಿಮಾ ಮೂಲಕ ಎಂಟ್ರಿ ಕೊಟ್ಟರು.  ಬಳಿಕ ಯಮುನಕ್ಕ ಸೇರಿದಂತೆ ಕೆಲವು ತುಳು ಚಿತ್ರಗಳಲ್ಲಿ ನಟಿಸಿದ್ದಾರೆ. 2018ರಲ್ಲಿ ಅಭಿಸಾರಿಕೆ ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಎಂಟ್ರಿ ಕೊಟ್ಟರು. 2019ರಲ್ಲಿ ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. ಬಳಿಕ ತರುಣ್ ನಿರ್ದೇಶನದ ರಾಬರ್ಟ್ ಚಿತ್ರದಲ್ಲಿ ಸೋನಲ್ ಪ್ರಮುಖ ಪಾತ್ರದಲ್ಲಿ ನಟಿಸಿದರು. ಆನಂತರ ಶುಗರ್‌ ಫ್ಯಾಕ್ಟರಿ, ಬನಾರಸ್‌, ಗರಡಿ, ಮದುವೆ ದಿಬ್ಬಣ, ಡೆಮೊ ಪೀಸ್‌, ಶಂಭೋ ಶಿವ ಶಂಕರ್‌ ಸಿನಿಮಾಗಳಲ್ಲಿ ನಟಿಸಿದರು. ಬಳಿಕ ಉಪೇಂದ್ರ ನಟನೆಯ ಬುದ್ಧಿವಂತ 2, ರೋಲೆಕ್ಸ್ ಹಾಗೂ ಮಾರ್ಗರೆಟ್ ಲವ್ ಆಫ್ ರಾಮಾಚಾರಿ ಚಿತ್ರದಲ್ಲಿ ಸೋನಲ್ ಅಭಿನಯಿಸಿದ್ದಾರೆ.  

ದರ್ಶನ್​ ನೆನೆದು ಕಣ್ಣೀರಾದ ತರುಣ್​ ಸುಧೀರ್​: ಜೈಲಿಗೆ ಹೋಗ್ತೇವೆ ಎಂದ ಸೋನಲ್ ಹೇಳಿದ್ದೇನು?

 
 
 
 
 
 
 
 
 
 
 
 
 
 
 

A post shared by Zee Kannada (@zeekannada)

Latest Videos
Follow Us:
Download App:
  • android
  • ios