ನಟಿ ಸುಧಾರಾಣಿ ಠುಮಕ ಠುಮಕ ಹಾಡಿಗೆ ಭರ್ಜರಿ ಸ್ಟೆಪ್​ ಹಾಕಿದ್ದಾರೆ. ವಿಡಿಯೋ ವೈರಲ್​ ಆಗಿದ್ದು, ಅಭಿಮಾನಿಗಳು ಶ್ಲಾಘನೆಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.  

ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋಯಿನ್ ಎಂದೇ ಖ್ಯಾತಿ ಪಡೆದಿರುವ ನಟಿ ಸುಧಾರಾಣಿ (Sudharani). ಬಾಲ ಕಲಾವಿದೆಯಾಗಿ ಕನ್ನಡದ ಮೇರು ನಟ ಡಾ.ರಾಜ್​ಕುಮಾರ್ ಅವರೊಂದಿಗೆ ಕೆಲವು ಚಿತ್ರಗಳಲ್ಲಿ ನಟಿಸಿ ನಂತರ ನಾಯಕಿಯಾಗಿ ಹಲವಾರು ಹಿಟ್​ ಚಿತ್ರಗಳನ್ನು ನೀಡಿದ ನಟಿಯೀಕೆ. ದೇವತಾ ಮನುಷ್ಯ ಚಿತ್ರದಲ್ಲಿ ಸುಧಾರಾಣಿ ರಾಜ್​ಕುಮಾರ್ ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಾಜ್ ಅಭಿನಯದ ‘ಭಾಗ್ಯವಂತ’ ಹಾಗೂ ‘ಜೀವನ ಚೈತ್ರ’ ಚಿತ್ರದಲ್ಲೂ ಸುಧಾರಾಣಿ ಅಭಿನಯಕ್ಕೆ ಮನಸೋಲದವರೇ ಇಲ್ಲ. ಈಗ ನಟಿಗೆ 50 ವರ್ಷ. ಆದರೂ ಫಿಟ್​ ಆ್ಯಂಡ್​ ಫೈನ್​ ಆಗಿರುವ ಸುಧಾರಾಣಿ ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಶ್ರೀರಸ್ತು, ಶುಭಮಸ್ತು ಧಾರಾವಾಹಿಯಲ್ಲಿ ತುಳಸಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಮೂರು ವರ್ಷವಿದ್ದಾಗಲೇ ಬಾಲನಟಿಯಾಗಿ ನಟನೆ ಆರಂಭಿಸಿರುವ ಸುಧಾರಾಣಿ ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಮೇರು ಕಲಾವಿದರ ಜೊತೆ ನಟಿಸಿದ್ದಾರೆ ಈಕೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಯಶಸ್ಸು ಪಡೆದಿದ್ದಾರೆ.

 ಸೊಸೆಯೇ ಖುದ್ದಾಗಿ ವಿಧವೆ ಅತ್ತೆಗೆ ಮತ್ತೊಂದು ಮದುವೆ ಮಾಡಿ ಮಗಳ ರೀತಿಯಲ್ಲಿ ಜವಾಬ್ದಾರಿ ನಿಭಾಯಿಸಿರುವ ವಿಭಿನ್ನ ಕಥಾ ಹಂದರ ಹೊಂದಿರುವ ಶ್ರೀರಸ್ತು ಶುಭಮಸ್ತು ಸೀರಿಯಲ್​ ಪ್ರೇಕ್ಷಕರ ಮನಸ್ಸನ್ನು ಗೆಲ್ಲುತ್ತಿದೆ. ಈ ಧಾರಾವಾಹಿಯಲ್ಲಿನ ಎಲ್ಲಾ ಪಾತ್ರಧಾರಿಗಳೂ ತಮ್ಮ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಧ್ಯ ವಯಸ್ಕರ ನಡುವಿನ ಪ್ರೀತಿ, ಮದುವೆ ಹಾಗೂ ಕುಟುಂಬಸ್ಥರು ಮತ್ತು ಸಮಾಜ ಅವರನ್ನು ಹೇಗೆ ಸ್ವೀಕರಿಸುತ್ತೆ ಎನ್ನುವ ಈ ಧಾರಾವಾಹಿಯ ವಿಷಯ ಹಲವರಿಗೆ ಆಪ್ತವಾಗಿದೆ. ಸೊಸೆ ಎಂದರೆ ಹೀಗಿರಬೇಕು ಎನ್ನುತ್ತಿದ್ದಾರೆ ಹಲವು ಮಹಿಳೆಯರು. ಈ ಧಾರಾವಾಹಿಯ ನಟಿ ತುಳಸಿ (ಸುಧಾರಾಣಿ) ಮದುವೆಯಾಗಿ ಹೋದ ಮೇಲೆ ಪತಿ ಮಾಧವ್​ (ಅಜಿತ್​ ಹಂದೆ) ಮನೆಯ ಕಾರಣದಿಂದ ಹಿಂಸೆ ಅನುಭವಿಸುತ್ತಿದ್ದಾಳೆ ನಿಜ. ಆದರೆ ಎಲ್ಲವೂ ಒಳ್ಳೆಯದಾಗುತ್ತದೆ, ಅದೂ ತುಳಸಿಯಿಂದಲೇ ಎನ್ನುವುದು ಸೀರಿಯಲ್ ಪ್ರಿಯರ ಅನಿಸಿಕೆ. 

ವೀರ್​ ಸಾವರ್ಕರ್​ ಚಿತ್ರಕ್ಕೆ ಸಂಭಾವನೆ ಬೇಡವೆಂದ ಬಿಗ್​ಬಾಸ್​​ ಖ್ಯಾತಿಯ ಅಂಕಿತಾ ಲೋಖಂಡೆ: ಮಾಹಿತಿ ರಿವೀಲ್​

ಸೋಷಿಯಲ್​ ಮೀಡಿಯಾದಲ್ಲಿ ತುಂಬಾ ಆ್ಯಕ್ಟೀವ್​ ಇರದಿದ್ದರೂ ಸುಧಾರಾಣಿಯವರು ಆಗಾಗ್ಗೆ ರೀಲ್ಸ್​ ಮಾಡುವುದು ಇದೆ. ಇದೀಗ ಠುಮಕ ಠುಮಕ ರೀಲ್ಸ್​ಗೆ ಭರ್ಜರಿ ಸ್ಟೆಪ್​ ಹಾಕಿದ್ದಾರೆ. ಈ ವಯಸ್ಸಿನಲ್ಲಿಯೂ ಅವರ ಎನರ್ಜಿ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ನಿಮ್ಮ ಲೆವೆಲ್ಲೇ ಬೇರೆ ಬಿಡಿ ಮೇಡಂ ಎಂದು ಹೇಳುತ್ತಿದ್ದಾರೆ. ಇದರ ವಿಡಿಯೋ ಸಕತ್​ ವೈರಲ್​ ಆಗಿದ್ದು, ಸುಧಾರಾಣಿಯವರ ಹಾವ-ಭಾವ ಹಾಗೂ ಎನರ್ಜಿ ಲೆವೆಲ್​ಗೆ ಅಭಿಮಾನಿಗಳು ಪ್ರೀತಿಯ ಧಾರೆ ಹರಿಸುತ್ತಿದ್ದಾರೆ. ಈಚೆಗಷ್ಟೇ ಶ್ರೀರಸ್ತು ಶುಭಮಸ್ತು ಸೀರಿಯಲ್‌ ಮೂಲಕ ಎಲ್ಲರನ್ನೂ ರಂಜಿಸುತ್ತಿರುವ, ತುಳಸಿ ಪಾತ್ರದ ಮೂಲಕ ಸೀರಿಯಲ್‌ಗೆ ಜೀವ ತುಂಬಿರುವ ಸುಧಾರಾಣಿ ಅವರಿಗೆ ಜೀ ಕನ್ನಡದ ಮನಮೆಚ್ಚಿದ ನಾಯಕಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇದಾಗಲೇ ಹಲವಾರು ಅವಾರ್ಡ್​ಗಳನ್ನು ಪಡೆದುಕೊಂಡಿರುವ ಸುಧಾರಾಣಿಯವರು ಈಗಲೂ ಅದೇ ಎನರ್ಜಿ ಕಾಪಾಡಿಕೊಂಡು ಬಂದಿರುವುದಕ್ಕೆ ಶ್ಲಾಘನೆಗಳ ಮಹಾಪೂರವೇ ಹರಿದು ಬರುತ್ತಿದೆ. 

ಕೆಲ ದಿನಗಳ ಹಿಂದೆ ನಡೆದ ಸಂದರ್ಶನದಲ್ಲಿ ಜೀವನದ ಕೆಲವೊಂದು ಘಟನೆಗಳ ಕುರಿತು ನಟಿ ಹೇಳಿಕೊಂಡಿದ್ದರು. 1999ರಲ್ಲಿ ಮದುವೆಯಾಗುವ ಮೂಲಕ ಬಣ್ಣದ ಬದುಕಿನಿಂದ ಸುಧಾರಾಣಿಯವರು ಮೊದಲ ಬಾರಿಗೆ ದೂರವಾದರು. ಆದರೆ, ಮದುವೆ ಅವರ ಪಾಲಿಗೆ ವರವಾಗುವ ಬದಲು ಶಾಫವಾಯಿತು. ಅಮೆರಿಕದಲ್ಲಿ ಅನಸ್ತೇಷಿಯಾ ಸ್ಪೆಷಲಿಸ್ಟ್ ಆಗಿದ್ದ ಗಂಡ ಡಾ ಸಂಜಯ್, ಯಾವುದೋ ರಹಸ್ಯ ಕೆಮಿಕಲ್ಸ್ ನೀಡಿ ಸುಧಾರಾಣಿಯವರನ್ನು ಮುಗಿಸಲು ಕೂಡ ಪ್ಲಾನ್ ಮಾಡಿದ್ದರಂತೆ. ಜತೆಗೆ, ಮದುವೆಯಾದ ಸ್ವಲ್ಪ ದಿನಗಳ ಬಳಿಕ ಸುಧಾರಾಣಿಯವರಿಗೆ ಇನ್ನಿಲ್ಲದ ಟಾರ್ಚರ್ ಕೊಡಲು ಶುರು ಮಾಡಿದ್ದರಂತೆ. ಒಟ್ಟಿನಲ್ಲಿ, ಡಾ ಸಂಜಯ್ ಮೂಲಕ ಅಮೆರಿಕದಲ್ಲಿ ಸುಧಾರಾಣಿ ವೈವಾಹಿಕ ಬದುಕು ನರಕವಾಯಿತು. ಗಂಡನಿಂದ ತಪ್ಪಿಸಿಕೊಂಡು ಬಂದು ಗೆಳತಿ ಮನೆಯಲ್ಲಿ ರಹಸ್ಯವಾಗಿ ಆಶ್ರಯ ಪಡೆದು, ಪಾರ್ವತಮ್ಮ ರಾಜ್‌ಕುಮಾರ್ ಹಾಗೂ ಅಂಬರೀಶ್‌ ಸಹಾಯದಿಂದ ಅಮೆರಿಕದಿಂದ ತಪ್ಪಿಸಿಕೊಂಡು ಬಂದು ಸುಧಾರಾಣಿಯವರು ಬೆಂಗಳೂರಿನ ತವರುಮನೆ ಸೇರಿಕೊಂಡರು ಎನ್ನಲಾಗಿದೆ. ಅಂದು ಸುಧಾರಾಣಿಯವರು ಖಿನ್ನತೆಗೆ ಕೂಡ ಜಾರಿದ್ದರಂತೆ. 

ತಾಳಿಯೇ ಸರ್ವಸ್ವ ಎನ್ನೋ ಪುಟ್ಟಕ್ಕನ ಎದುರೇ ಅದನ್ನು ಕಿತ್ತೆಸೆದ ಮಗಳು! ಸರಿ-ತಪ್ಪುಗಳ ವಿಮರ್ಶೆ ಶುರು...

ಸುಧಾರಾಣಿಯವರ ನೃತ್ಯ ನೋಡಲು ಈ ಲಿಂಕ್ಸ್​ ಕ್ಲಿಕ್​ ಮಾಡಿ

ಸುಧಾರಾಣಿಯರ ಠುಮಕ ಠುಮಕ ಡ್ಯಾನ್ಸ್​ಗೆ ಇಲ್ಲಿ ಕ್ಲಿಕ್​ ಮಾಡಿ...