Asianet Suvarna News Asianet Suvarna News

ವಂದನೆ ವಂದನೆ 'ಪುನೀತ ಕನ್ನಡಿಗರೇ' ನಿಮಗೆ ವಂದನೆ: 'ಕ್ವಾ' ಅವಾರ್ಡ್​ ಖುಷಿಯಲ್ಲಿ ನಟಿ ಅನುಶ್ರೀ ಮಾತಿದು...

'ಕ್ವಾ' ಪ್ರಶಸ್ತಿ ಗೆದ್ದ ಬೆನ್ನಲ್ಲೇ ವಂದನೆ ವಂದನೆ  'ಪುನೀತ ಕನ್ನಡಿಗರೇ' ನಿಮಗೆ ವಂದನೆ ಎಂದು ಆ್ಯಂಕರ್​ ಅನುಶ್ರೀ ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.   ಏನಿದು ಪ್ರಶಸ್ತಿ?
 

Anchor Anushree got Karnataka Women Achievers  Kwaa award fans reacts suc
Author
First Published Dec 24, 2023, 1:14 PM IST

ಕನ್ನಡ ಕಿರುತೆರೆ ಜನಪ್ರಿಯ ನಿರೂಪಕಿ ಕಮ್ ಸ್ಯಾಂಡಲ್‌ವುಡ್‌ ನಟಿ (Sandalwood star) ಅನುಶ್ರೀ ಮನೆಮಾತಾಗಿರುವ ನಟಿ. ಅದ್ಭುತವಾಗಿ ಕಾರ್ಯಕ್ರಮ ನಿರೂಪಣೆಯ ಜೊತೆಗೆ ಸಂಗೀತ, ನೃತ್ಯದಿಂದಲೂ ಮನರಂಜಿಸುವ ಅನುಶ್ರೀ ಸದ್ಯ ಸರಿಗಮಪ ಸಂಗೀತದ ರಿಯಾಲಿಟಿ ಷೋನಲ್ಲಿ ಬಿಜಿಯಾಗಿದ್ದಾರೆ.  ತಮ್ಮ ಚಟಪಟ ಮಾತಿನಿಂದಾಗಿ ಅನುಶ್ರೀ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ. ಅವರು ಟಿವಿ ಶೋಗಳನ್ನು ನಡೆಸಿಕೊಡುವ ಶೈಲಿಗೆ ವೀಕ್ಷಕರು ಫಿದಾ ಆಗಿದ್ದಾರೆ. ಕಿರುತೆರೆಯಲ್ಲಿ ಅನುಶ್ರೀ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಹಲವು ರಿಯಾಲಿಟಿ ಶೋಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಖ್ಯಾತಿ ಅವರಿಗಿದೆ. ತಮ್ಮ ಅದ್ಭುತ ನಿರೂಪಣಾ ಶೈಲಿಯಿಂದ ಇದಾಗಲೇ ಹಲವಾರು ಪ್ರಶಸ್ತಿಗಳನ್ನು ಗೆದ್ದಿರುವ ಅನುಶ್ರೀ ಅವರಿಗೆ ಇದೀಗ ಇನ್ನೊಂದು ಪ್ರಶಸ್ತಿ ಸಂದಿದೆ. ಈ ಕುರಿತು ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. 

 ವಂದನೆ ವಂದನೆ ಸಾವಿರ ವಂದನೆ !!!!! ಪ್ರೋತ್ಸಾಹಿಸಿ ಬೆನ್ನು ತಟ್ಟಿದ “ಪುನೀತ ಕನ್ನಡಿಗರೇ” ನಿಮಗೆ ವಂದನೆ !!!! ಎಂದು ಅವರು ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಕಾರಣ, ಅವರಿಗೆ ಸಿಕ್ಕಿರುವ  kwaa award. ಕರ್ನಾಟಕ ಮಹಿಳಾ ಸಾಧಕಿಯರ ಪ್ರಶಸ್ತಿ (Karnataka Women Achievers Award) ನಿನ್ನೆ ಕೆಲವು ಸಾಧಕಿಯರಿಗೆ ನೀಡಲಾಗಿದ್ದು, ಇದರಲ್ಲಿ ಆ್ಯಂಕರ್​ ಅನುಶ್ರೀ ಅವರ ಸಾಧನೆಗೆ ಪ್ರಶಸ್ತಿ ನೀಡಲಾಗಿದೆ. ಈ ಕುರಿತು ಅನುಶ್ರೀ ಮಾಹಿತಿ ನೀಡಿದ್ದಾರೆ. ಈ ಅವಾರ್ಡ್​ ಸಿಕ್ಕಿದ್ದು ನಿಮ್ಮೆಲ್ಲರ ಆಶೀರ್ವಾದದಿಂದ …ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹೆಮ್ಮೆಯ ಮಹಿಳೆಯರ ಜೊತೆ ಈ ಪ್ರಶಂಸೆ ಸಿಕ್ಕಿದ್ದು ನಿಜಕ್ಕೂ ಖುಷಿ ಎಂದು ಹೇಳಿಕೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಅವರು ಪ್ರೋತ್ಸಾಹಿಸಿ ಬೆನ್ನು ತಟ್ಟಿದ “ಪುನೀತ ಕನ್ನಡಿಗರೇ” ನಿಮಗೆ ವಂದನೆ ಎಂದು ಬರೆದುಕೊಂಡಿದ್ದಾರೆ. 

'ಯೇ ಮೆಮೊರಿ ಹೈ, ಕ್ಯಾ ಬೇಕಾಗ್ತಾ ಹೈ?' ಪಂಜಾಬ್​ ಗಾಯಕನ ಜೊತೆ ಏನಮ್ಮಾ ಅನುಶ್ರೀ ಇದು?

ಅಂದಹಾಗೆ ಅನುಶ್ರೀ, ಅನುಶ್ರೀ ಮಂಗಇದಳೂರಿನ ತುಳು ಕುಟುಂಬದಲ್ಲಿ ಜನಿಸಿದರು. ಮಂಗಳೂರು ಮೂಲದ ನಮ್ಮ ಟಿವಿ ಚಾನೆಲ್ ನಲ್ಲಿ ಅಂತ್ಯಾಕ್ಷರಿ ಮ್ಯೂಸಿಕ್ ಶೋ ಮೂಲಕ ಟಿವಿ ಜರ್ನಿ ಶುರು ಮಾಡಿದರು. ETV ಯಲ್ಲಿ ಶುರು ಮಾಡಿದ ‘ಡಿಮ್ಯಾಂಡಪ್ಪೋ ಡಿಮ್ಯಾಂಡ್’ಇವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡನ್ನು ತಂದು ಕೊಟ್ಟಿತು. ಸರಿಗಮಪ, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕುಣಿಯೋಣು ಬಾರಾ, ಕಾಮಿಡಿ ಕಿಲಾಡಿಗಳು ಸೇರಿದಂತೆ ಸಾಕಷ್ಟು ರಿಯಾಲಿಟಿ ಶೋಗಳನ್ನು ನಡೆಸಿಕೊಟ್ಟಿದ್ದಾರೆ. ‘ಬೆಂಕಿಪೊಟ್ಣ’ ಸಿನಿಮಾ ಇವರ ಮೊದಲ ಸಿನಿಮಾ. ಈ ಚಿತ್ರದಲ್ಲಿ,  NAK ಮೀಡಿಯಾದಿಂದ Best debut Actress ಅವಾರ್ಡ್ ಪಡೆದರು. ‘ಮುರಳಿ ಮೀಟ್ಸ್ ಮೀರಾ’ ಸಿನಿಮಾಗಾಗಿ ಕರ್ನಾಟಕ ಸ್ಟೇಟ್ ಫಿಲ್ಮ್ ಅವಾರ್ಡ್ ಪಡೆದಿದ್ದಾರೆ. ಅನುಶ್ರೀ ಆ್ಯಂಕರ್ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿರುವ ಅನುಶ್ರೀ ಇದರಲ್ಲಿ ಸಿನಿಮಾ ತಾರೆಯರ ಸಂದರ್ಶನ ಮಾಡುತ್ತಾರೆ. 

ಸೋಷಿಯಲ್​ ಮೀಡಿಯಾದಲ್ಲಿಯೂ ಸಾಕಷ್ಟು ಆ್ಯಕ್ಟೀವ್​ ಆಗಿರುವ ಇವರು,  ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಸದಾ ಕೆಲವೊಂದು ಅಪ್​ಡೇಟ್ಸ್​ ನೀಡುತ್ತಲೇ ಇರುತ್ತಾರೆ. ಇವರು  ನಿರೂಪಕಿ ಮಾತ್ರವಲ್ಲದೇ ನಟಿ ಕೂಡ ಹೌದು. ‘ಬೆಂಕಿ ಪಟ್ಣ’, ‘ಮಾದ ಮತ್ತು ಮಾನಸಿ’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 

ನನ್ನ ಹೊಸ ಹೇರ್​ ಕಲರ್​ ನೋಡಿದ್ರಾ ಅಂತ ನಿವೇದಿತಾ ಕೇಳಿದ್ರೆ ನೋಡಿದ್ದೇ ಬೇರೆ ಅನ್ನೋದಾ ಟ್ರೋಲಿಗರು!

Follow Us:
Download App:
  • android
  • ios