ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದ ಸಿದ್ದು ಪರಸನೂರು ಬೀದರ್‌ನಲ್ಲಿ ನಿಧನರಾಗಿದ್ದಾರೆ. ಹುಮ್ನಾಬಾದ್ ಹೊರವಲಯದಲ್ಲಿ ಅವರ ಶವ ಪತ್ತೆಯಾಗಿದ್ದು, ವಿದ್ಯುತ್ ಶಾಕ್‌ನಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೀದರ್: ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದ ಸಿದ್ದು ಉರ್ಫ್ ಸಿದ್ಧಾರ್ಥ್ ಪರಸನೂರು ನಿಧನರಾಗಿದ್ದಾರೆ. ಸಿದ್ದು ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೀದರ್ ಜಿಲ್ಲೆಯ ನಿವಾಸಿಯಾಗಿದ್ದ ಸಿದ್ದು ಪರಸನೂರು ಹುಮ್ನಾಬಾದ್ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ವಾಸವಾಗಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಾವಿನ ಸುತ್ತ ಅನುಮಾನ

ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿ ಸಿದ್ದು ಅವರ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಿದ್ದು ಅವರದ್ದು ಸಹಜ ಸಾವು ಅಲ್ಲ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ವಿದ್ಯುತ್ ಶಾಕ್‌ನಿಂದ ಸಾವು ಸಂಭವಿಸಿರುವ ಸಾಧ್ಯತೆಗಳಿವೆ.

ಈ ಸಂಬಂಧ ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಜಾ ಭಾರತ ರಿಯಾಲಿಟಿ ಶೋ ಸಿದ್ದು ಅವರಿಗೆ ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ನಂತರ ಕಾಮಿಡಿ ಕಿಲಾಡಿಗಳು ಶೋನಲ್ಲಿ ಕಾಣಿಸಿಕೊಂಡಿದ್ದರು. 'ಕುಲದಲ್ಲಿ ಕೀಳ್ಯಾವುದೋ ಸಿನಿಮಾದಲ್ಲಿಯೂ ಸಿದ್ದು ನಟಿಸಿದ್ದಾರೆ. ವಿಭಿನ್ನ ಹಾಗೂ ಸಹಜವಾದ ಹಾಸ್ಯ ಶೈಲಿಗೆ ತಮ್ಮದೇ ಆದ ಅಭಿಮಾನಿ ಬಳಗವನ್ನು ಸಿದ್ದು ಪರಸನೂರು ಹೊಂದಿದ್ದರು.