ಬಿಗ್ ಬಾಸ್ ಕನ್ನಡ ಸೀಸನ್ 13ರ ಗ್ರ್ಯಾಂಡ್ ಪ್ರೀಮಿಯರ್‌ಗೆ ಕ್ಷಣಗಣನೆ ಆರಂಭವಾಗಿದೆ. ಕಿಚ್ಚ ಸುದೀಪ್ ಸಾರಥ್ಯದ ಈ ಸೀಸನ್‌ನಲ್ಲಿ ಮಲಯಾಳಂನ ಮೋಹನ್‌ಲಾಲ್, ತಮಿಳಿನ ವಿಜಯ್ ಸೇತುಪತಿ ಹಾಗೂ ತೆಲುಗಿನ ನಾಗಾರ್ಜುನ ಕೂಡ ಒಂದೇ ವೇದಿಕೆಯಲ್ಲಿ ಕಾಣಿಸಿೊಂಡಿದ್ದಾರೆ.
ಕಿಚ್ಚ ಸುದೀಪ್ ಸಾರಥ್ಯದ ‘ಬಿಗ್ ಬಾಸ್ ಕನ್ನಡ ಸೀಸನ್ 13’ಗೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 6ರ ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಸಂಚಿಕೆಯೊಂದಿಗೆ ಶೋ ಕಿರುತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಶೂಟಿಂಗ್ ಕೂಡ ಆರಂಭವಾಗಿದ್ದು, ಈ ಬಾರಿಯ ಸೀಸನ್‌ನಲ್ಲಿ ಏನೆಲ್ಲಾ ಹೊಸತನ ಇರಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ.
‘ಬಿಗ್ ಬಾಸ್’ ಅಭಿಮಾನಿಗಳಿಗೆ ಮತ್ತೊಂದು ವಿಶೇಷ ಸಂಗತಿ ಎಂದರೆ, ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಏಕಕಾಲಕ್ಕೆ ಶೋ ಪ್ರಸಾರವಾಗುತ್ತಿದೆ. ಕನ್ನಡದ ಕಿಚ್ಚ ಸುದೀಪ್, ಮಲಯಾಳಂನ ಮೋಹನ್‌ಲಾಲ್, ತಮಿಳಿನ ವಿಜಯ್ ಸೇತುಪತಿ ಹಾಗೂ ತೆಲುಗಿನ ನಾಗಾರ್ಜುನ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ನಾಲ್ವರು ಸ್ಟಾರ್ ನಿರೂಪಕರು ಪರಸ್ಪರ ಮಾತುಕತೆ ನಡೆಸಿರುವ ಪ್ರೋಮೋ ಇದೀಗ ಗಮನ ಸೆಳೆಯುತ್ತಿದೆ. ಅದರಲ್ಲೂ ವಿಜಯ್ ಸೇತುಪತಿ ಕನ್ನಡದಲ್ಲೇ ಮಾತನಾಡಿರುವುದು ಪ್ರೋಮೋದ ಹೈಲೈಟ್ ಆಗಿದೆ. ಈ ವಿಶೇಷ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
ವಿಶೇಷ ಬದಲಾವಣೆ
ಇನ್ನು ಈ ಬಾರಿ ‘ಬಿಗ್ ಬಾಸ್ ಕನ್ನಡ’ದಲ್ಲಿ ಸ್ಪರ್ಧಿಗಳ ಆಯ್ಕೆಯಲ್ಲೂ ವಿಶೇಷ ಬದಲಾವಣೆ ಇದೆ. ಎಂದಿನಂತೆ ಸೆಲೆಬ್ರಿಟಿಗಳು ಮಾತ್ರವಲ್ಲ, ಜನಸಾಮಾನ್ಯರಿಗೂ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸುವ ಅವಕಾಶ ಸಿಕ್ಕಿದೆ. ಹೀಗಾಗಿ ಈ ಸೀಸನ್‌ನಲ್ಲಿ ಯಾರೆಲ್ಲಾ ದೊಡ್ಮನೆ ಪ್ರವೇಶಿಸಲಿದ್ದಾರೆ, ಮನೆಯೊಳಗೆ ಯಾವ ರೀತಿಯ ಆಟ ನಡೆಯಲಿದೆ ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ.


