ಮಹಾ ಸಂಕಷ್ಟಕ್ಕೆ ಸಿಕ್ಕ ಕಲರ್ಸ್ ಕನ್ನಡ, ಬಿಗ್ ಬಾಸ್ ಪ್ರಸಾರ ನಿಲ್ಲಿಸಬೇಕೆಂದು ದೂರು..!?

ಬಿಗ್ ಬಾಸ್ ಕಾರ್ಯಕ್ರಮದ ವಿರುದ್ಧ ಅನೇಕ ಅರೋಪ ಕೇಳಿ ಬಂದಿವೆ. ಕಳೆದ ವಾರ ಬಿಗ್ ಬಾಸ್' ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಅಂತ ಮಹಿಳಾ ಆಯೋಗಕ್ಕೆ ಪತ್ರದ ಮೂಲಕ ವಕೀಲೆ ದೂರು ನೀಡಿದ್ದರು. ಇನ್ನೂ ಇದೇ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ..

Case filled against colors kannada show bigg boss kannada season 11 in Sagara srb

ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ಬಿಗ್ ಬಾಸ್ ಕನ್ನಡ-11 ನೇ ಸೀಸನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆ ಸಾಗರ ನ್ಯಾಯಾಲಯದಿಂದ  ನೋಟಿಸ್ ಜಾರಿಯಾಗಿದೆ! ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್‌ಗೆ ಒಂದಾದ ಬಳಿಕ ಮತ್ತೊಂದರಂತೆ ಸಂಕಷ್ಟಗಳು ಎದುರಾಗುತ್ತಿವೆ. 

ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ಕಿಚ್ಚ ಸುದೀಪ್ ಹೋಸ್ಟ್ ಮಾಡುತ್ತಿರುವ ಬಿಗ್ ಬಾಸ್ 11 ನೇ ಸೀಸನ್ ಇದೀಗ ಟಾಕ್ ಆಫ್‌ ದಿ ಟೌನ್ ಆಗಿದೆ. ಆದರೆ, ಕಲರ್ಸ್ ಕನ್ನಡ ತಂಡಕ್ಕೆ  ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ 11 ನೇ ಸೀಸನ್ ಪ್ರಸಾರವನ್ನು ಖಾಯಂ ಅಗಿ ರದ್ದುಪಡಿಸುವಂತೆ ಸಾಗರದ ವಕೀಲರಿಂದ ನ್ಯಾಯಾಲಯಕ್ಕೆ ದೂರು ನೀಡಲಾಗಿದೆ. 

ಅಮೂಲ್ಯ ಅಣ್ಣ ದೀಪಕ್ ಅಂತಿಮ ದರ್ಶನ ಪಡೆದ ಸೀತಾರಾಮ ವೈಷ್ಣವಿ, ಸಿನಿ ತಾರೆಯರು

ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಧಾನ ವ್ಯವಹಾರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ವಕೀಲ ಕೆ. ಎಲ್. ಭೋಜರಾಜ್ ಎಂಬವರಿಂದ ಕೇಸ್ ದಾಖಲಾಗಿದೆ. ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2 ರೆಡ್ ವಿತ್ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಕೆಯಾಗಿದೆ. 

ವಕೀಲ ಕೆ.ಎಲ್ ಭೋಜರಾಜ್ ರವರ ಅರ್ಜಿ ಕೈಗೆತ್ತಿಕೊಂಡ ನ್ಯಾಯಾಧೀಶರಾದ ಚಾಂದಿನಿ ಜಿ. ಯು ಅವರು ಸಿವಿಲ್ ಕಾರ್ಯವಿಧಾನದ ಕೋಡ್ ಕಾಯಿದೆ U sec.26,order7,rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ  ನೋಟಿಸ್ 
ಜಾರಿ ಮಾಡಿದ್ದಾರೆ. ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 28 ರಂದು ನ್ಯಾಯಾಲಯ ನಡೆಸಲಿದೆ ಎನ್ನಲಾಗಿದೆ. 

ಬಿಗ್ ಬಾಸ್ ಕಾರ್ಯಕ್ರಮದ ವಿರುದ್ಧ ಅನೇಕ ಅರೋಪ ಕೇಳಿ ಬಂದಿವೆ. ಕಳೆದ ವಾರ ಬಿಗ್ ಬಾಸ್' ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಅಂತ ಮಹಿಳಾ ಆಯೋಗಕ್ಕೆ ಪತ್ರದ ಮೂಲಕ ವಕೀಲೆ ದೂರು ನೀಡಿದ್ದರು. ಇನ್ನೂ ಇದೇ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. 

ಅಮೂಲ್ಯಾ ಅಣ್ಣ ದೀಪಕ್ ಅರಸ್ ಲೈಫ್ ಸ್ಟೋರಿ ಅಂತಿಂಥದ್ದಲ್ಲ, ಏನೇನೋ ಆಗಿಬಿಟ್ಟಿತ್ತು..!

ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚೆತ್ತುಕೊಂಡು ಈ ಬಾರಿಯ ನರಕ-ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿತ್ತು. ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಿಕೊಡಲಾಗಿದೆ. ಒಟ್ಟಾರೆ  ಕಿಚ್ಚ ಸುದೀಪ್ ಹೋಸ್ಟ್ ಮಾಡುತ್ತಿರುವ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್  ಈ ರೀತಿ ಒಂದಿಲ್ಲ ಒಂದು  ಸಂಕಷ್ಟಗಳು ಎದುರಿಸುತ್ತಿದೆ. ಈ ಬಾರಿಯ ಬಿಗ್ ಬಾಸ್ 11ನೇ ಸೀಸನ್ ಖಾಯಂ ರದ್ದು ಅಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ..!

Latest Videos
Follow Us:
Download App:
  • android
  • ios