Asianet Suvarna News Asianet Suvarna News

ತುಕಾಲಿ ಸಂತೋಷ್-ವಿನಯ್ ಮಧ್ಯೆ ಕ್ಯಾಪ್ಟನ್ಸಿಗಾಗಿ ಶುರುವಾಯ್ತು ಕಚ್ಚಾಟ; ನಮ್ರತಾಗೆ ಸಿಗುವುದೇ ಪಟ್ಟ?

ನಮ್ರತಾ, ಸಿರಿ, ಕಾರ್ತಿಕ್, ಪ್ರತಾಪ್, ವರ್ತೂರು ಈ ಐವರು ಕ್ಯಾಪ್ಟನ್ಸಿ ಆಡಬೇಕು ಎಂದು ಮನೆಯ ಸದಸ್ಯರು ವೋಟಿಂಗ್ ಮೂಲಕ ಆರಿಸಿದ್ದಾರೆ. ಆದರೆ ತುಕಾಲಿ ಸಂತೋಷ್ ಅವರಿಗೆ ಈ ವೋಟಿಂಗ್‌ ಬಗ್ಗೆ ಆಕ್ಷೇಪವಿದೆ. ‘ಕರೆಕ್ಟಾಗಿ ವೋಟಿಂಗ್ ಆಗಿಲ್ಲ. ನಾವೂ ಭಾಗವಹಿಸಬೇಕು ಎಂದು ನಮಗೆ ಇರುತ್ತದೆ’ ಎಂದು ಅವರು ತಗಾದೆ ತೆಗೆದಿದ್ದಾರೆ. 

Colors Kannada Bigg Boss Kannada season 10 captain war between Contestants srb
Author
First Published Nov 17, 2023, 12:10 PM IST

ವೀಕೆಂಡ್ ಬಂತು ಅಂದ್ರೆ ಕ್ಯಾಪ್ಟನ್ಸಿ ಟಾಸ್ಕ್‌ನ ಬಿಸಿ ಬಿಗ್‌ಬಾಸ್‌ ಮನೆಯಲ್ಲಿ ಏರಲು ಶುರುವಾಗುತ್ತದೆ. ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಯಾರು ಭಾಗವಹಿಸಬೇಕು? ಯಾರು ಯಾರನ್ನು ಸಪೋರ್ಟ್‌ ಮಾಡಬೇಕು? ಲೆಕ್ಕಾಚಾರ ಹೇಗಿರಬೇಕು ಇವೆಲ್ಲ ಚರ್ಚೆಗಳಲ್ಲಿಯೇ ಸ್ಫರ್ಧಿಗಳು ತಲ್ಲೀನರಾಗುತ್ತಿದ್ದರು. ಆದರೆ ಈ ಸಲ ಕ್ಯಾಪ್ಟನ್ಸಿ ಟಾಸ್ಕ್‌ಗೆ ಬಿಗ್‌ಬಾಸ್ ಒಂದು ಸಣ್ಣ ಟ್ವಿಸ್ಟ್ ಕೊಟ್ಟಿದ್ದಾರೆ. ಕ್ಯಾಪ್ಟನ್ಸಿ ಟಾಸ್ಕ್‌ ಅನ್ನು ಯಾವ ಐದು ಸ್ಪರ್ಧಿಗಳು ಆಡಬೇಕು ಎಂದು ನೀವೇ ನಿರ್ಧರಿಸಿಕೊಳ್ಳಿ ಎಂದು ಹೇಳಿದ್ದಾರೆ!

ನಮ್ರತಾ, ಸಿರಿ, ಕಾರ್ತಿಕ್, ಪ್ರತಾಪ್, ವರ್ತೂರು ಈ ಐವರು ಕ್ಯಾಪ್ಟನ್ಸಿ ಆಡಬೇಕು ಎಂದು ಮನೆಯ ಸದಸ್ಯರು ವೋಟಿಂಗ್ ಮೂಲಕ ಆರಿಸಿದ್ದಾರೆ. ಆದರೆ ತುಕಾಲಿ ಸಂತೋಷ್ ಅವರಿಗೆ ಈ ವೋಟಿಂಗ್‌ ಬಗ್ಗೆ ಆಕ್ಷೇಪವಿದೆ. ‘ಕರೆಕ್ಟಾಗಿ ವೋಟಿಂಗ್ ಆಗಿಲ್ಲ. ನಾವೂ ಭಾಗವಹಿಸಬೇಕು ಎಂದು ನಮಗೆ ಇರುತ್ತದೆ’ ಎಂದು ಅವರು ತಗಾದೆ ತೆಗೆದಿದ್ದಾರೆ. ವಿನಯ್ ಅವರ ಮಾತಿಗೆ ವಿರೋಧ ವ್ಯಕ್ತಪಡಿಸಿ, ‘ನೀವು ಆಡಿರುವುದು ಒಂದೇ ಟಾಸ್ಕ್‌’ ಎಂದು ಚುಚ್ಚಿದ್ದಾರೆ. ತುಕಾಲಿ ಅವರು ಇದರಿಂದ ಸಿಟ್ಟಿಗೆದ್ದು, ‘ಒಂದೇ ಟಾಸ್ಕ್‌ನಲ್ಲಿ ನನ್ನ ನಾನು ಪ್ರೂವ್ ಮಾಡಿಕೊಂಡಿದ್ದೀನಿ’ಎಂದು ಹೇಳಿದ್ದಾರೆ. 

ಭಾರತದಲ್ಲಿ ಮೊದಲ ರೋಲ್ಸ್‌ ರಾಯ್ಸ್ ಕಾರು ತಂದಿದ್ದು ಶಾರುಖ್ ಖಾನ್, ಅಂಬಾನಿ ಅಲ್ಲ; ಮೌಜ್ ಸಿನಿಮಾ ನಾಯಕಿ!

ಕ್ಯಾಪ್ಟನ್‌ಶಿಪ್‌ಗಾಗಿ ಸಹಜವಾಗಿಯೇ ಎಲ್ಲರ ಮಧ್ಯೆ ಸ್ಪರ್ಧೆ ಇದ್ದೇ ಇರುತ್ತದೆ. ಆದರೆ, ಈ ಸೀಸನ್‌ನಲ್ಲಿ ವಿನಯ್‌ಗೆ ಮನೆಯ ಯಜಮಾನನ ಪಟ್ಟ ಕಟ್ಟಲು ಯಾರಿಗೂ ಮನಸ್ಸಿನ ಆಳದಲ್ಲಿ ಇಷ್ಟವಿಲ್ಲ. ಆದರೆ, ಕೆಲವರು ಅವರಿಗೆ ಬಕೆಟ್ ಹಿಡಿದು ಅಲ್ಲಿ ಉಳಿದುಕೊಳ್ಳಲು ಪ್ರಯತ್ನಿಸಿ ಸಫಲರಾಗಿದ್ದಾರೆ, ಕೆಲವರು ವಿಫಲರಾಗಿದ್ದಾರೆ. ಆದರೆ, ಈ ಬಾರಿ ಯಾರಿಗೆ ಕ್ಯಾಪ್ಟನ್ ಪಟ್ಟ ದೊರಕುವುದು ಎಂಬುದನ್ನು ಕಾದು ನೋಡಬೇಕು. ಕಾರಣ, ಹಲವರು ಈಗ ಸ್ಪರ್ಧೆಯಲ್ಲಿದ್ದಾರೆ. 

ಶಾರುಖ್ ಖಾನ್, ಸಲ್ಮಾನ್ ಖಾನ್ ಹಾಗೂ ಅಮೀರ್ ಖಾನ್; ಅನುಪಮ್ ಖೇರ್ ನಿರ್ದೇಶನದ ಚಿತ್ರದಲ್ಲಿ ನಟಿಸಲೇ ಇಲ್ಲ ಯಾಕೆ?

ಮಾತಿಗೆ ಮಾತು ಬೆಳೆದು ಮಾತಿನ ಜಟಾಪಟಿಯೂ ನಡೆದಿದೆ. ಹಾಗಾದ್ರೆ ಕ್ಯಾಪ್ಟನ್ಸಿ ಟಾಸ್ಕ್‌ಗೆ ಆಡುವ ಸ್ಪರ್ಧಿಗಳ ಲೀಸ್ಟ್ ಬದಲಾಗುತ್ತದೆಯೇ? ತುಕಾಲಿ ಸಂತೋಷ್ ಅವರು ಕ್ಯಾಪ್ಟನ್ಸಿ ಟಾಸ್ಕ್‌ನ ಕಣಕ್ಕೆ ಇಳಿಯುತ್ತಾರೆಯೇ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲು, JioCinemaದಲ್ಲಿ ನೇರಪ್ರಸಾರವಾಗುತ್ತಿರುವ ಬಿಗ್‌ಬಾಸ್ ಕನ್ನಡವನ್ನು ವೀಕ್ಷಿಸಿ. ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಬಹುದು. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ ಹಾಗೂ ಶನಿವಾರ-ಭಾನುವಾರತ ರಾತ್ರಿ 9.00ಕ್ಕೆ ವೀಕ್ಷಿಸಬಹುದು. 

Follow Us:
Download App:
  • android
  • ios