Asianet Suvarna News Asianet Suvarna News

ಡ್ರೋನ್ ಪ್ರತಾಪ್‌ಗೆ ಕಳಪೆ ಪಟ್ಟ, ಕಾರ್ತಿಕ್ ಹೊರಗಿಟ್ಟು ತಪ್ಪು ಮಾಡಿದ್ವಿ ಎಂದ್ರು ವಿನಯ್ ಗೌಡ!

'ನನ್ನನ್ನು ಕ್ಯಾಪ್ಟನ್ಸಿ ಟಾಸ್ಕ್‌ನಿಂದ ಹೊರಗಿಟ್ಟಿದ್ದು ಬೇಜಾರಾಯ್ತು’ ಎಂದು ನಮ್ರತಾ ಕಾರಣ ಕೊಟ್ಟಿದ್ದರೆ, ‘ಕಾರ್ತಿಕ್ ಅವರಂಥ ಆಟಗಾರನನ್ನು ಹೊರಗಿಟ್ಟಿದ್ದರಿಂದ ತಂಡ ವಾರದ ಎಲ್ಲ ಟಾಸ್ಕ್‌ಗಳಲ್ಲಿಯೂ ಸೋಲುವಂತಾಯ್ತು’ ಎಂದು ವಿನಯ್ ಕಾರಣ ನೀಡಿದ್ದಾರೆ.

Drone Prathap received Kalape patta in Bigg Boss Kannada season 10 srb
Author
First Published Dec 1, 2023, 12:36 PM IST

ಈ ವಾರದ ಎಲ್ಲ ಟಾಸ್ಕ್‌ಗಳಲ್ಲಿಯೂ ‘ಮಣ್ಣಿನ ಮಕ್ಕಳು’ ತಂಡ ಸೋತು ಸುಣ್ಣವಾಗಿದೆ. ಆ ತಂಡದ ನಾಯಕತ್ವವನ್ನು ವಹಿಸಿದ್ದ ಡ್ರೋಣ್ ಪ್ರತಾಪ್‌ ಜೈಲುಪಾಲಾಗಿದ್ದಾರೆ. ನಾಯಕತ್ವದ ಪರಿಣಾಮವಾಗಿ ಜೈಲುಡುಗೆ ತೊಟ್ಟ ಪ್ರತಾಪ್ ಚಿತ್ರ JioCinema ಬಿಡುಗಡೆ ಮಾಡಿರುವ ಬೆಳಗಿನ ಫ್ರೊಮೊದಲ್ಲಿ ಜಾಹೀರುಗೊಂಡಿದೆ. ವಾರದ ಕೊನೆಗೆ ಕಳಪೆ ಯಾರು ಉತ್ತಮ ಯಾರು ಎಂಬುದನ್ನು ಆರಿಸುವ ಸಂದರ್ಭದಲ್ಲಿ ಎರಡೂ ತಂಡದ ಬಹುತೇಕ ಸದಸ್ಯರು ಪ್ರತಾಪ್ ಹೆಸರನ್ನು ಸೂಚಿಸಿದ್ದಾರೆ. 

'ನನ್ನನ್ನು ಕ್ಯಾಪ್ಟನ್ಸಿ ಟಾಸ್ಕ್‌ನಿಂದ ಹೊರಗಿಟ್ಟಿದ್ದು ಬೇಜಾರಾಯ್ತು’ ಎಂದು ನಮ್ರತಾ ಕಾರಣ ಕೊಟ್ಟಿದ್ದರೆ, ‘ಕಾರ್ತಿಕ್ ಅವರಂಥ ಆಟಗಾರನನ್ನು ಹೊರಗಿಟ್ಟಿದ್ದರಿಂದ ತಂಡ ವಾರದ ಎಲ್ಲ ಟಾಸ್ಕ್‌ಗಳಲ್ಲಿಯೂ ಸೋಲುವಂತಾಯ್ತು’ ಎಂದು ವಿನಯ್ ಕಾರಣ ನೀಡಿದ್ದಾರೆ. ‘ಎಲ್ಲೋ ಒಂದು ಕಡೆ ಕೋಪದಿಂದ ಮಾತಾಡ್ತಾರೆ ಎಂದು ಈ ವಾರನೂ ಅಗ್ರೆಶನ್‌ನಲ್ಲಿಯೇ ಆಡ್ತಾರೆ ಅಂದುಕೊಳ್ಳುವುದು ಸರಿಯಲ್ಲ’ ಎಂದು ತನಿಷಾ ಹೇಳಿದ್ದಾರೆ. ವರ್ತೂರು, ಸ್ನೇಹಿತ್‌ ಕೂಡ ಪ್ರತಾಪ್ ಹೆಸರನ್ನೇ ಹೇಳಿದ್ದಾರೆ. 

ಹಿರಣ್ಯ ಸಿನಿಮಾ ಟೀಸರ್ ಲಾಂಚ್; ಮಾಸ್ ಅವತಾರದಲ್ಲಿ ಅಬ್ಬರಿಸಿದ ನಟ ರಾಜವರ್ಧನ್ ಮೇಲೆ ಮೂಡಿದೆ ಭಾರೀ ನಿರೀಕ್ಷೆ!

ಮನೆಯವರ ನಿರ್ಧಾರಕ್ಕೆ ಬದ್ಧನಾಗಿ ಪ್ರತಾಪ್ ಜೈಲುಡುಗೆಯೇನೋ ತೊಟ್ಟಿದ್ದಾರೆ. ಆದರೆ ಅವರ ನಿರ್ಧಾರ ನನಗೆ ಸಮ್ಮತ ಅನಿಸಿಲ್ಲ ಎಂದೂ ಗಟ್ಟಿಯಾಗಿಯೇ ಹೇಳಿದ್ದಾರೆ. ‘ನನ್ನ ಪ್ರಕಾರ ನಾನು ತೆಗೆದುಕೊಂಡ ನಿರ್ಧಾರಗಳು ಸರಿ ಇತ್ತು. ಎಲ್ಲರೂ ಸೇರಿ ನನಗೆ ಕಳಪೆ ಕೊಟ್ಟಿದ್ದು ಬೇಜಾರಾಗಿದೆ. ಇದಕ್ಕೆ ನನಗೆ ಸಮ್ಮತಿ ಇಲ್ಲ’ ಎಂದು ಹೇಳಿ ಅವರು ಜೈಲಿನೊಳಗೆ ಹೋಗಿ ಕೂತಿದ್ದಾರೆ. ಹಾಗಾದರೆ ಈ ವಾರ ಉತ್ತಮ ಪಟ್ಟ ಯಾರಿಗೆ ಬಂದಿದೆ? ಕ್ಯಾಪ್ಟನ್ಸಿ ಓಟದಲ್ಲಿ ಯಾರು ಗೆದ್ದಿದ್ದಾರೆ? ಈ ಪ್ರಶ್ನೆಗಳಿಗೆ ಉತ್ತರ ಸಿಗಲು JioCinemaದಲ್ಲಿ ಪ್ರಕಟವಾಗುತ್ತಿರುವ ಬಿಗ್‌ಬಾಸ್ ಕನ್ನಡ ಉಚಿತ ನೇರಪ್ರಸಾರವನ್ನು ವೀಕ್ಷಿಸಬೇಕಷ್ಟೇ!

ಪವಾಡಗಳು ಸಂಭವಿಸುತ್ತವೆ, ನಾನು ಲೆಜೆಂಡ್ ಆಗುವುದಕ್ಕೆ ಅದೇ ಕಾರಣ; ಸೂಪರ್ ಸ್ಟಾರ್ ನಟ ರಜನಿಕಾಂತ್

ಬಿಗ್ ಬಾಸ್‌ ಮನೆಯಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ತಿಳಿಯಲು 'JioCinema'ದಲ್ಲಿ ಪ್ರಕಟವಾಗುತ್ತಿರುವ ಬಿಗ್‌ಬಾಸ್ ಕನ್ನಡ ನೇರಪ್ರಸಾರವನ್ನು ವೀಕ್ಷಿಸಬಹುದು. ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಬಹುದು. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ, ಶನಿವಾರ-ಭಾನುವಾರತ ರಾತ್ರಿ 9.00 ಕ್ಕೆ  ವೀಕ್ಷಿಸಬಹುದು. 

Follow Us:
Download App:
  • android
  • ios